ಚಿಕ್ಕಮಗಳೂರು ನಗರದಲ್ಲಿ ಜಿಲ್ಲಾ ಗ್ರಾಹಕರ ವೇದಿಕೆಯ ಮಧ್ಯಸ್ಥಿಕೆ ಕೇಂದ್ರದ ಹೊಸ ಕಟ್ಟಡವನ್ನು ಗೌರವಾನ್ವಿತ ರಾಜ್ಯ ಗ್ರಾಹಕರ ಆಯೋಗ ಅಧ್ಯಕ್ಷರಾದ ಟಿ. ಜಿ ಶಿವಶಂಕರೆಗೌಡರು ಉದ್ಘಾಟನೆ ಮಾಡಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಉರುಸ್ ವಿವಾದ; ಹೋರಾಟಗಾರರನ್ನು ಬಂಧಿಸಿದ್ದನ್ನು ಖಂಡಿಸುತ್ತೇನೆ; ಟಿ.ಡಿ ರಾಜೇಗೌಡ
ಚಿಕ್ಕಮಗಳೂರು ಜಿಲ್ಲಾ ವಕೀಲ ಸಂಘಕ್ಕೆ ಭೇಟಿ ನೀಡಿ ಗ್ರಾಹಕರ ಸಂರಕ್ಷಣಾ ಕಾಯ್ದೆ ಮಧ್ಯಸ್ಥಿಕೆ ವಿಷಯವಾಗಿ ಉಪನ್ಯಾಸ ನೀಡಿದರು. ಈ ಸಭೆಯಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಇತರ ಜಿಲ್ಲಾ ನ್ಯಾಯಾಧೀಶರುಗಳು ಹಿರಿಯ ಮತ್ತು ಕಿರಿಯ ಸಿವಿಲ್ ನ್ಯಾಯಾಧೀಶರು, ಸದಸ್ಯ ಕಾರ್ಯದರ್ಶಿ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.





