ಚಿಕ್ಕಮಗಳೂರು | ಗರ್ಭಕಂಠದ ಕ್ಯಾನ್ಸರ್ ತಡೆಗೆ ಲಸಿಕೆ ಪಡೆಯುವುದು ಅಗತ್ಯ; ಡಾ.ಸೀಮಾ

Date:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಿಂದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಎ.ನಲ್ಲಿ ಗರ್ಭ ಕಂಠದ ಕ್ಯಾನ್ಸರ್ ತಡೆ ಸಂಬಂಧ ಇತ್ತೀಚೆಗೆ ಹಮ್ಮಿಕೊಂಡಿದ್ದ ಹೆಚ್‌ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ, ಹೆಣ್ಣು ಮಕ್ಕಳಲ್ಲಿ ಕಾಣಿಸಿಕೊಳ್ಳುವ ಗರ್ಭಕಂಠದ ಕ್ಯಾನ್ಸರ್ ತಡೆಗೆ ಸಂಬಂಧಿಸಿದಂತೆ 14 ವರ್ಷ ವಯಸ್ಸಿನ ಹೆಣ್ಣುಮಕ್ಕಳು ಹೆಚ್.ಪಿ.ವಿ ಲಸಿಕೆ ಹಾಕಿಸಿಕೊಳ್ಳುವುದು ಅಗತ್ಯ,14 ವರ್ಷ ತುಂಬಿದ ಮತ್ತು 15 ವರ್ಷದೊಳಗಿನ ಎಲ್ಲ ಹೆಣ್ಣು ಮಕ್ಕಳಿಗೂ ಈ ಲಸಿಕೆ ಹಾಕಬೇಕು. ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಂದ ನಿಗದಿತ ವಯೋಮಾನದ ಮಕ್ಕಳ ಮಾಹಿತಿ ಪಡೆದುಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಸ್.ಸೀಮಾ ತಿಳಿಸಿದರು.

Screenshot 2026 03 16 22 09 36 13 e307a3f9df9f380ebaf106e1dc980bb6

15ಸಿಕೆಎಂ1, 16ಸಿಕೆಎಂ2: ಗರ್ಭಕಂಠದ ಕ್ಯಾನ್ಸರ್ ಮುಕ್ತಿಗೆ ಅಭಿಯಾನ ಮಹಿಳೆಯರನ್ನು ಕಾಡುತ್ತಿರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಹತ್ವದ ಹೆಜ್ಜೆಯಿಟ್ಟಿದ್ದು, 14 ವರ್ಷದ ಹೆಣ್ಣು ಮಕ್ಕಳಿಗೆ ಹೆಚ್.ಪಿ.ವಿ. ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದೆ.

ಹೆಚ್.ಪಿ.ವಿ. ಎಂದರೇನು? ಮತ್ತು ಲಸಿಕೆ ಏಕೆ ಮುಖ್ಯ? ಹೆಚ್.ಪಿ.ವಿ. ಎಂದರೆ ಹೂಮನ್ ಪ್ಯಾಪಿಲೋಮ ವೈರಸ್. ಇದು ಜನನಾಂಗದ ಸೋಂಕುಗಳಿಗೆ ಕಾರಣವಾಗುವ ಸಾಮಾನ್ಯ ವೈರಸ್ ಆಗಿದ್ದು, ಮಹಿಳೆಯರಲ್ಲಿ ಕಂಡು ಬರುವ ಗರ್ಭಕಂಠದ ಕ್ಯಾನ್ಸರ್‌ಗೆ ಹೆಚ್ಚಾಗಿ ಇದೇ ವೈರಸ್ ಕಾರಣವಾಗಿದೆ. ಭಾರತೀಯ ಮಹಿಳೆಯರಲ್ಲಿ ಕಂಡು ಬರುವ ಕ್ಯಾನ್ಸರ್‌ಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಎರಡನೇ ಸ್ಥಾನದಲ್ಲಿದೆ. 2024ರ ಅಂದಾಜಿನ ಪ್ರಕಾರ ದೇಶದಲ್ಲಿ ಸುಮಾರು 78,499 ಹೊಸ ಪ್ರಕರಣಗಳು ಪತ್ತೆಯಾಗಿವೆ. 42,393 ಸಾವುಗಳು ಸಂಭವಿಸಿವೆ. ಈ ಮಾರಣಾಂತಿಕ ಕಾಯಿಲೆಯನ್ನು ತಡೆಗಟ್ಟಲು ಲಸಿಕೆಯೊಂದೇ ಪ್ರಮುಖ ಮಾರ್ಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾರಿಗೆ ಈ ಲಸಿಕೆ ನೀಡಲಾಗುತ್ತಿದೆ? ದೇಶಾದ್ಯಂತ ನಡೆಯುತ್ತಿರುವ ಈ ಅಭಿಯಾನದಲ್ಲಿ ರಾಜ್ಯದಲ್ಲಿ ಮುಖ್ಯವಾಗಿ 14 ವರ್ಷದ ಹೆಣ್ಣು ಮಕ್ಕಳಿಗೆ ಹೆಚ್.ಪಿ.ವಿ. ಲಸಿಕೆ ನೀಡುವ ಗುರಿ ಹೊಂದಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ತಜ್ಞರ ಪ್ರಕಾರ ಲಸಿಕೆ ಮತ್ತು ನಿಯಮಿತ ತಪಾಸಣೆಯಿಂದ ಸಾವು ಮತ್ತು ಕ್ಯಾನ್ಸರ್ ಪ್ರಕರಣಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡಬಹುದು.

ಲಸಿಕೆಯ ಪರಿಣಾಮಕಾರಿತ್ವ? ಅಧ್ಯಯನಗಳ ಪ್ರಕಾರ ಹೆಚ್.ಪಿ.ವಿ. ಲಸಿಕೆ ಬಳಕೆಯಿಂದ 2012 ರಿಂದ 2019 ರ ನಡುವೆ ಅಮೇರಿಕಾದ ಯುವತಿಯರಲ್ಲಿ ಕ್ಯಾನ್ಸರ್ ಪ್ರಮಾಣ ಶೇ. 65 ರಷ್ಟು ಕಡಿಮೆಯಾಗಿದೆ. ಹಾಗೆಯೇ ಸ್ಕಾಟ್‌ಲ್ಯಾಂಡ್‌ನಲ್ಲಿ 10 ವರ್ಷಗಳ ಅವಧಿಯಲ್ಲಿ ಕ್ಯಾನ್ಸರ್ ಪೂರ್ವ ಲಕ್ಷಣಗಳು ಶೇ.88-89 ರಷ್ಟು ಇಳಿಕೆಯಾಗಿರುವುದು ಸಾಬೀತಾಗಿದೆ.

ಊಹಾಪೋಹಗಳಿಗೆ ಕಿವಿಗೊಡದಿರಿ: ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ಲಸಿಕೆಯ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿರುವ ಆತಂಕಗಳು ನಿರಾಧಾರ. ಈ ಲಸಿಕೆಯು ಬಂಜೆತನ, ಗರ್ಭಪಾತ ಅಥವಾ ಜನ್ಮದಾರಭ್ಯ ದೋಷಗಳಿಗೆ ಕಾರಣವಾಗುತ್ತದೆ ಎಂಬುದು ಕೇವಲ ವದಂತಿ, ವೈಜ್ಞಾನಿಕ ಸಮೀಕ್ಷೆಗಳು ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಲಸಿಕಾ ಸುರಕ್ಷತಾ ಸಮಿತಿಯು ದತ್ತಾಂಶಗಳನ್ನು ಪರಿಶೀಲಿಸಿ ಈ ಲಸಿಕೆ ಸಂಪೂರ್ಣ ಸುರಕ್ಷಿತ ಎಂದು ದೃಢಪಡಿಸಿದೆ. ಜಾಗತಿಕ ಲಸಿಕಾ ಸುರಕ್ಷತಾ ಮೇಲ್ವಿಚಾರಣೆಗಳು ಸಹ ಹೆಚ್.ಪಿ.ವಿ. ಲಸಿಕೆಗಳು ಅತ್ಯಂತ ಸುರಕ್ಷಿತ ಎಂದು ಖಚಿತಪಡಿಸಿದೆ. ಅಡ್ಡಪರಿಣಾಮಗಳು ಕಂಡು ಬಂದರೂ ಅವು ಇತರೆ ಲಸಿಕೆಗಳಂತೆ ಸಾಮಾನ್ಯ ಮತ್ತು ಕೇವಲ ತಾತ್ಕಾಲಿಕವಾಗಿರುತ್ತವೆ. ಯಾವುದೇ ತೀವ್ರ ಅಡ್ಡ ಪರಿಣಾಮ ಹಾನಿ ಅಥವಾ ಸಾವಿಗೆ ಈ ಲಸಿಕೆ ಕಾರಣವಾಗುವುದಿಲ್ಲ. ಪೋಷಕರು ಯಾವುದೇ ವದಂತಿಗಳಿಗೆ ಅಥವಾ ತಪ್ಪು ಮಾಹಿತಿಗಳಿಗೆ ಬಲಿಯಾಗದೆ ತಮ್ಮ 14 ವರ್ಷದ ಹೆಣ್ಣು ಮಕ್ಕಳಿಗೆ ಈ ಲಸಿಕೆಯನ್ನು ಕೊಡಿಸುವ ಮೂಲಕ ಅವರ ಭವಿಷ್ಯವನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ರಕ್ಷಿಸಲು ಕೈ ಜೋಡಿಸಬೇಕೆಂದು ಆರೋಗ್ಯ ಇಲಾಖೆ ವಿನಂತಿಸಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಾ. 18ರವರೆಗೆ ಮಳೆ ಮುನ್ಸೂಚನೆ 

ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ.ದಿವ್ಯಶ್ರೀ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜೆ.ಎನ್.ಬೇಬಿ, ಆಶಾ ಮೇಲ್ವಿಚಾರಕಿ ಸಿ.ಎಂ. ಕಲಾಧರೆ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಾದ ರುಖಿಯಾ ಮತ್ತು ಗೀತಾ, ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾತಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...