ಚಿಕ್ಕಮಗಳೂರು | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾಳೆ ಎಂದು ಪತ್ನಿಯನ್ನೇ ಕೊಂದ ಪತಿ

Date:

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾಳೆ ಎಂದು ದುಷ್ಟ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಶ್ವೇತಾ(31) ಮೃತ ದುರ್ದೈವಿ. ಶ್ವೇತಾ ಪತಿ ಆರೋಪಿ ದರ್ಶನ್. ಈತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಶ್ವೇತಾ ಮತ್ತು ದರ್ಶನ್‌ಗೆ 7 ವರ್ಷಗಳ ಹಿಂದೆ ವಿವಾಹವಾಗಿತ್ತು. ದಂಪತಿಗೆ 4 ವರ್ಷದ ಗಂಡು ಮಗುವೊಂದಿದೆ.

ಕೆಲಸದ ನಿಮಿತ್ತ ಬೆಂಗಳೂರಿನಲ್ಲಿಯೇ ನೆಲೆಸಿರುವ ದಂಪತಿ 4 ದಿನದ ಹಿಂದೆ ಬೆಂಗಳೂರಿನಿಂದ ದೇವವೃಂದಕ್ಕೆ ಬಂದಿದ್ದರು. ಈ ವೇಳೆ, ಹಾರ್ಟ್ ಅಟ್ಯಾಕ್‌ನಿಂದ ಶ್ವೇತಾ ಮೃತಪಟ್ಟಿದ್ದಾಳೆ ಎಂದು ಪತಿ ದರ್ಶನ್ ಆಕೆಯ ಕುಟುಂಬಸ್ಥರಿಗೆ ತಿಳಿಸಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದರ್ಶನ್ ವಿವಾಹೇತರ ಸಂಬಂಧ ಹೊಂದಿದ್ದಾನೆ. ಇದಕ್ಕೆ ಅಡ್ಡಿಯಾದ ಶ್ವೇತಾಳನ್ನು ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿರಬಹುದು ಎಂದು ಶ್ವೇತಾ ಕುಟುಂಬದವರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೊಸ ವರ್ಷಕ್ಕೆ ಸಂಗ್ರಹಿಸಿಟ್ಟಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್‌ ವಶ

ಶ್ವೇತಾ ಅವರ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿರುವ ವೇಳೆ ಮಧ್ಯ ಪ್ರವೇಶಿಸಿದ ಕುಟುಂಬಸ್ಥರು ಇದು ಸಹಜ ಸಾವಲ್ಲ, ಪತಿಯೇ ಶ್ವೇತಾ ಅವರನ್ನು ಕೊಲೆ ಮಾಡಿದ್ದಾನೆ. ಈಗ ತರಾತುರಿಯಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾಗಿದ್ದಾನೆ ಎಂದು ಆರೋಪಿಸಿ, ಅಂತ್ಯ ಕ್ರಿಯೆಯನ್ನು ತಡೆದಿದ್ದಾರೆ.

ಶವ ಪರೀಕ್ಷೆಗೆ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಈ ಸಂಬಂಧ ಗೋಣಿಬೀಡು ಠಾಣೆಯಲ್ಲಿ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಶ್ವೇತಾ ಪತಿ ಮೇಲೆ ಕೊಲೆ ಆರೋಪ ಕೇಳಿ ಬಂದ ಹಿನ್ನೆಲೆ, ಪತಿ ದರ್ಶನ್‌ರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...