ಚಿಕ್ಕಮಗಳೂರು | ಸಾಲ ಪಾವತಿಸುವಂತೆ ಮೈಕ್ರೋ ಫೈನಾನ್ಸ್‌ ಕಿರುಕುಳ; ರೈತ ಮಹಿಳೆ ಆತ್ಮಹತ್ಯೆ

Date:

ಅನಾವೃಷ್ಟಿಯಿಂದಾಗಿ ಬೆಳೆ ಕೈಕೊಟ್ಟಿದ್ದು, ಸಾಲದ ಹೊರೆ ಹೆಚ್ಚಾಗಿದ್ದು ಒಂದೆಡೆಯಾದರೆ, ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್‌ನ ಕಿರುಕುಳ ಮತ್ತೊಂದೆಡೆ. ಸಾಲ ತೀರಿಸುವಂತೆ ಪದೇ-ಪದೇ ಕಿರುಕುಳ ನೀಡುತ್ತಿದ್ದ ಮೈಕ್ರೋ ಪೈನಾನ್ಸ್‌ ಸಿಬ್ಬಂದಿಗಳ ಒತ್ತಡಕ್ಕೆ ಬೇಸತ್ತು ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕಡೂರು ತಾಲೂಕಿನ ತಂಗಲಿ ಗ್ರಾಮದ ರೈತ ಮಹಿಳೆ ದೇವೀರಮ್ಮ (64) ಆತ್ಮಹತ್ಯೆಗೆ ಶರಣಾದ ರೈತ ಮಹಿಳೆ. ಅವರು ಕಡೂರಿನ ಗ್ರಾಮೀಣ ಕೂಟ ಫೈನಾನ್ಸ್‌ನಲ್ಲಿ​ 78,000 ರೂ. ಸಾಲ ಪಡೆದಿದ್ದರು. ಆದರೆ, ಬೆಳೆ ಕೈಕೊಟ್ಟ ಕಾರಣ ಸಾಲದ ಕಂತನ್ನು ಪಾವತಿಸಲು ಆಗಿರಲಿಲ್ಲ.

ಫೈನಾನ್ಸ್‌ ಸಿಬ್ಬಂದಿಗಳು ಅವರ ಮನೆ ಬಳಿ ಬಂದು ಸಾಲ ಪಾವತಿಸುವಂತೆ ಪದೇ-ಪದೇ ಒತ್ತಡ ಹಾಕಿದ್ದಾರೆ. ಸಿಬ್ಬಂದಿ ಕಿರುಕುಳಕ್ಕೆ ಮನನೊಂದ ದೇವೀರಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ಸಂಬಂಧ ಗ್ರಾಮಿಣ ಕೂಟ ಫೈನಾನ್ಸ್ ಸಿಬ್ಬಂದಿ ಶಂಕರ್ ನಾಯಕ್, ಉಷಾ, ರುಬೀನಾ‌ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, 91529 87821, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...