ಚಿತ್ರದುರ್ಗ | ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿ ರಾಜಕೀಯ ಮಾಡುವುದು ಬೇಡ; ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ

Date:

‘ಸತತ ಬರಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಹಾಹಾಕಾರ ಎದುರಿಸುವ ಚಿತ್ರದುರ್ಗ ಜಿಲ್ಲೆಯ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆ ಜಾರಿ ವಿಚಾರದಲ್ಲಿ ನೆರೆಯ ದಾವಣಗೆರೆ ಜಿಲ್ಲೆಯ ಕೆಲ ರೈತ, ರಾಜಕಾರಣಿಗಳು ಸದಾ ಒಂದಿಲ್ಲೊಂದು ತಗಾದೆ ತೆಗೆಯುತ್ತಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ’ ಎಂದು ಚಿತ್ರದುರ್ಗ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಲಹೆ ಮಾಡಿದೆ.

ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, “ಜಿಲ್ಲೆಯ ಹೊಸದುರ್ಗ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಅಜ್ಜಂಪುರ ಪ್ರದೇಶದ ಸುಮಾರು 518 ಗ್ರಾಮಗಳಿಗೆ ಕುಡಿವ ನೀರು ಪೂರೈಕೆ ಮಾಡಲು 830 ಕೋಟಿ ರು ವೆಚ್ಚದ ಯೋಜನೆ ರೂಪಿಸಲಾಗಿದೆ. ಯೋಜನೆಯಡಿ ಹೊಸದುರ್ಗ ಪಟ್ಟಣ ಸೇರಿದಂತೆ ತಾಲೂಕಿನ 346 ಹಳ್ಳಿಗಳಿಗೆ ಕುಡಿವ ನೀರು ಪೂರೈಕೆ ಮಾಡುವ ಉದ್ದೇಶ ಹೊಂದಲಾಗಿದೆ. ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ನೀರು ಪೂರೈಕೆಗೆ ಟ್ರಯಲ್ ಮಾಡುವಾಗ ದಾವಣಗೆರೆ ಜಿಲ್ಲೆ ರೈತರು ಆಕ್ಷೇಪ ವ್ಯಕ್ತಪಡಿಸುವುದು ಎಷ್ಟರ ಮಟ್ಟಿಗೆ ಸರಿ” ಎಂದು ಪ್ರಶ್ನಿಸಿದರು.

“ಬಹುಗ್ರಾಮ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ನಿತ್ಯ 30 ಕ್ಯೂಸೆಕ್ಸ್ ನೀರು ಮೇಲೆತ್ತಲಾಗುತ್ತಿದ್ದು, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳ ತಾತ್ಕಾಲಿಕ ಬೇಡಿಕೆ ಇದಾಗಿದೆ. ಭದ್ರಾ ಕಾಲುವೆ ಸೀಳಿ ಮೇಲೆತ್ತಲಾಗಿದೆ ಎಂಬ ಕೂಗು ಎಬ್ಬಿಸಿರುವ ದಾವಣಗೆರೆ ಜಿಲ್ಲೆಯ ರೈತರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಭದ್ರಾ ಕಾಲುವೆಯಿಂದ ಇದೇ ಮೊದಲ ಬಾರಿಗೆ ಕುಡಿವ ನೀರಿನ ಯೋಜನೆಗಳ ರೂಪಿಸಿಲ್ಲ. ಭದ್ರಾವತಿ ತಾಲೂಕಿನ ಕೂಡ್ಲುಗೆರೆ ಹಾಗು ಇತರೆ ಹದಿನೆಂಟು ಗ್ರಾಮ, ಚನ್ನಗಿರಿ ತಾಲೂಕಿನ 4 ಬಹುಗ್ರಾಮ ಕುಡಿವ ನೀರಿನ ಯೋಜನೆ ಹಾಗೂ ದಾವಣಗೆರೆ ತಾಲೂಕಿನ 9 ಬಹುಗ್ರಾಮ ಕುಡಿವ ನೀರು ಯೋಜನೆಗೆ ಭದ್ರಾ ಕಾಲುವೆಯಿಂದ ನೀರು ಪಡೆಯಲಾಗುತ್ತಿದೆ. ತಮ್ಮ ಜಿಲ್ಲೆಯ ಕುಡಿವ ನೀರು ಯೋಜನೆಗಳಿಗೆ ಭದ್ರಾ ಕಾಲುವೆಯಿಂದ ನೀರು ಪೂರೈಕೆಗೆ ಸಮ್ಮತಿಸುವ ದಾವಣಗೆರೆ ರೈತರು, ಚಿತ್ರದುರ್ಗದ ಪ್ರಶ್ನೆ ಬಂದಾಗ ಮಾತ್ರ ವಿರೋಧಿಸುತ್ತಾರೆ. ಒಂದು ಅರೆ ನೀರಾವರಿ ಬೆಳೆಗೆ ಮಾತ್ರ ಭದ್ರಾ ಜಲಾಶಯದಿಂದ ನೀರು ಪೂರೈಕೆ ಎಂಬ ನಿಬಂಧನೆ ಇದ್ದರೂ ಭತ್ತ ಬೆಳೆಯಲು ಎರಡು ಬೆಳೆಗಳಿಗೆ ನೀರು ಪಡೆಯುತ್ತಿದ್ದಾರೆ. ಟೇಲ್ ಎಂಡ್ ಗೆ ನೀರು ಪೂರೈಕೆಯಾಗದಿದ್ದರೆ ಅದಕ್ಕೆ ಚಿತ್ರದುರ್ಗ ಜಿಲ್ಲೆ ಅಥವಾ ಇಲ್ಲಿ ಅನುಷ್ಟಾನಗೊಳಿಸಲಾಗುತ್ತಿರುವ ಕುಡಿಯುವ ನೀರಿನ ಯೋಜನೆಗಳು ಕಾರಣವಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಾವಣಗೆರೆ ಜಿಲ್ಲೆಯ ರೈತರು ಹಾಗೂ ಅಲ್ಲಿನ ರಾಜಕಾರಣಿಗಳು ವಾಸ್ತವಾಂಶ ಅರಿತು ನಡೆದುಕೊಳ್ಳಲಿ. ಪದೇ ಪದೆ ಬಯಲು ಸೀಮೆ ರೈತಾಪಿ ಸಮುದಾಯ, ಜನರ ಕೆಣಕುವುದು ಬೇಡ. ಭದ್ರಾ ಜಲಾಶಯದಲ್ಲಿನ ನೀರಿನ ಮೇಲೆ ನೆರೆ ಜಿಲ್ಲೆಯ ಜನರ ಎಲ್ಲರ ಹಕ್ಕು ಇದೆ ಎಂಬುದ ಮನವರಿಕೆ ಮಾಡಿಕೊಳ್ಳಲಿ” ಎಂದು ಲಿಂಗಾರೆಡ್ಡಿ ಎಚ್ಚರಿಸಿದರು.

“ದಾವಣಗೆರೆ ರೈತರು 28 ರಂದು ಬಂದ್ ಕರೆ ಕೊಟ್ಟಿದ್ದಾರೆ. ಪ್ರತಿಯಾಗಿ ಚಿತ್ರದುರ್ಗದ ರೈತರು ಹೋರಾಟ ರೂಪಿಸುವ ಸಂಬಂಧ ಬುಧವಾರ ಹೊಸದುರ್ಗದಲ್ಲಿ ರೈತರು, ಹೋರಾಟಗಾರರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಮುಂದಿನ ಹೋರಾಟ ಕುರಿತು ನಿರ್ಣಯ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ ? ಚಿತ್ರದುರ್ಗ | ಆಶ್ರಮದ ಕಾರ್ಯಕ್ರಮಕ್ಕೆ ಟ್ರಸ್ಟ್ ಸದಸ್ಯರು ಭಾಗವಹಿಸಲು ಆಶ್ರಮ ರಕ್ಷಣಾ ಸಮಿತಿ ಆಕ್ಷೇಪ

ಸರ್ವೋದಯ ಕರ್ನಾಟಕದ ಮುಖಂಡ ಜೆ.ಯಾದವರೆಡ್ಡಿ, ರೈತ ಸಂಘದ ರಾಜ್ಯ ಉಪಾಧ್ಯಕ್ಷರುಗಳಾದ ಕೆ.ಪಿ.ಭೂತಯ್ಯ, ಕೆ.ಸಿ.ಹೊರಕೇರಪ್ಪ, ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ಬಸ್ತಿಹಳ್ಳಿ ಸುರೇಶ್ ಬಾಬು, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆ‌ರ್.ದಯಾನಂದ, ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...