ಚಿಕ್ಕಮಗಳೂರು | ದತ್ತ ಮಾಲಾಧಾರಿಗಳ ದಾಂಧಲೆ; ದರ್ಗಾಕ್ಕೆ ಹಾನಿ – ಆರೋಪ

Date:

ಚಿಕ್ಕಮಗಳೂರಿನ ಬಾಬಾಬುಡನ್‌ಗಿರಿಗೆ ತೆರೆಳುತ್ತಿದ್ದ ದತ್ತ ಮಾಲಾಧಾರಿಗಳು ತರೀಕೆರೆ ಬಳಿಯ ಸಂತವೇರಿ ದರ್ಗಾದ ಬಳಿ ದುರ್ವರ್ತನೆ ಮೆರೆದಿದ್ದಾರೆ. ದರ್ಗಾಕ್ಕೆ ನುಗ್ಗಲು ಯತ್ನಿಸಿದ್ದಾರೆ. ಅವರ ಕೃತ್ಯದಿಂದಾಗಿ ದರ್ಗಾಕ್ಕೆ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ.

ಹಿಂದುತ್ವ ಕೋಮುವಾದಿ ಸಂಘಟನೆಗಳು ದತ್ತಜಯಂತಿ ಆಚರಿಸುತ್ತಿವೆ. ವಿವಾದಿತ ತಾಣವಾಗಿರುವ ಬಾಬಾಬುಡನ್‌ಗಿರಿಯಲ್ಲಿ ದತ್ತಜಯಂತಿ ನಡೆಯುತ್ತಿದೆ. ಅಲ್ಲಿಗೆ ತೆರಳುತ್ತಿದ್ದ ಭದ್ರಾವತಿ ತಾಲೂಕಿನ ದತ್ತ ಮಾಲಾಧಾರಿಗಳು ಸುಮಾರು 25 ಬೈಕ್‌ಗಳಲ್ಲಿ ಬಂದಿದ್ದು, ದರ್ಗಾ ಬಳಿ ದಾಂಧಲೆ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ದತ್ತ ಮಾಲಾಧಾರಿಗಳು ದರ್ಗಾದ ಬಳಿ ಬೈಕ್‌ ನಲ್ಲಿಸಿ, ‘ಜೈಶ್ರೀರಾಮ್’ ಘೋಷಣೆ ಕೂಗಿ ದರ್ಗಾಕ್ಕೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ದರ್ಗಾ ಬಳಿ ಭದ್ರತೆಗಾಗಿ ನಿಯೋಜಿಸಿದ್ದ ಪೊಲೀಸರು ಅವರನ್ನು ತಡೆದಿದ್ದಾರೆ. ಪೊಲೀಸರ ಮೇಲೂ ಹಲ್ಲೆ ಮಾಡಿದ್ದಾರೆ. ಹಲ್ಲೆಯಲ್ಲಿ ಪೊಲೀಸ್ ಪೇದೆಯೊಬ್ಬರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದರ್ಗಾದ ಬಳಿಯಿದ್ದ ಹಸಿರು ಬಾವುಟಗಳನ್ನು ಕಿತ್ತು ಹಾಕಿ, ಕಾಣಿಕೆ ಡಬ್ಬಿಗೆ ಹಾನಿ ಮಾಡಿದ್ದಾರೆ. ಅಲ್ಲದೆ, ದರ್ಗಾದ ಮೇಲಿದ್ದ ಸಣ್ಣ ಗುಮ್ಮಟವನ್ನೂ ಹಾನಿಗೊಳಿಸಿದ್ದಾರೆ ಎನ್ನಲಾಗಿದೆ. ಈ ವೇಳೆ, ಸ್ಥಳೀಯ ಮುಸ್ಲಿಂ ಮತ್ತು ದಲಿತ ಮುಖಂಡರು ಸ್ಥಳಕ್ಕೆ ಬಂದಿದ್ದು, ಅವರನ್ನು ಕಂಡ ಮಾಲಾಧಾರಿಗಳು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ದರ್ಗಾದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ದಾಂಧಲೆ ನಡೆಸಿದವರ ದೃಶ್ಯಗಳು ಸೆರೆಯಾಗಿವೆ. ಅವುಗಳನ್ನು ಪರಿಶೀಲಿಸಿ ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ತರೀಕೆರೆ ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಿಂಗದಹಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...