ಕಡೂರು | ಒಳಮೀಸಲಾತಿ ವರ್ಗೀಕರಣ; ಸದನದಲ್ಲಿ ಪ್ರಸ್ತಾಪಿಸಬೇಕು;ಮಾದಿಗ ಮೀಸಲಾತಿ ಹೋರಾಟ ಸಮಿತಿ 

Date:

ಮಾದಿಗ ಸಮಾಜದ ಒಳಮೀಸಲಾತಿ ವರ್ಗೀಕರಣ ಹುದ್ದೆ ಭರ್ತಿಯಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸದನದಲ್ಲಿ ಧ್ವನಿ ಎತ್ತಿ ಸಮಾಜದ ಹಿತ ಕಾಪಾಡಬೇಕು ಎಂದು ಮಾದಿಗ ಒಳಮೀಸಲಾತಿ ಹೋರಾಟ ಸಮಿತಿಯಿಂದ ಕಡೂರು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

35 ವರ್ಷ ಗಳಿಂದ ಮಾದಿಗರಿಗೆ ಮೀಸಲಾತಿಯಲ್ಲಿ ಅನ್ಯಾಯ ವಾಗುತ್ತಿದೆ. ಅದನ್ನು ಸರಿಪಡಿಸಿ ರಾಜ್ಯ ಸರ್ಕಾರ ಒಳಮೀಸಲಾತಿ ನೀಡುವಂತೆ ಒತ್ತಾಯಿಸಿದ ಪರಿಣಾಮಸುಪ್ರಿಂಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರ ಮಾದಿಗ ರಿಗೆ ಶೇ.6ರಷ್ಟುಒಳ ಮೀಸಲಾತಿ ನೀಡಿದ ಕಡತಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎಂದು ರಾಜ್ಯ ಮಾದಿಗ ಮೀಸಲಾತಿ ಹೋರಾಟ ಸಮಿತಿ ಕಾರ್ಯದರ್ಶಿ ಬಿ.ಟಿ.ಚಂದ್ರ ಶೇಖ‌ರ್ ಮಾತನಾಡಿದರು.

ಆದರೆ ರಾಜ್ಯ ಸರ್ಕಾರ ಪರಿಶಿಷ್ಟರಿಗೆ ನೀಡಿದ ಶೇ.17ರಲ್ಲಿ ಕಾನೂನು ತೊಡಕಾಗುತ್ತದೆ ಎಂಬ ನೆಪವೊಡ್ಡಿ ಶೇ.15ಕ್ಕೆ ಇಳಿಸಿ 56 ಸಾವಿರ ಹುದ್ದೆ ಭರ್ತಿ ಮಾಡಲು ಹೊರಟಿ ರುವುದು ಮಾದಿಗ ಸಮುದಾಯಕ್ಕೆ ಮಾಡಿದ ಅನ್ಯಾಯ. ರಾಜ್ಯದ ಬಜೆಟ್ ಅಧಿವೇಶನ ದಲ್ಲಿ ಶಾಸಕರು ಸಮುದಾಯದ ಧ್ವನಿಯಾಗಿ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಬೇಕು ಸರ್ಕಾರ ಖಾಲಿ ಹುದ್ದೆಗಳನ್ನು ಭರ್ತಿಗೆ ಮುಂದಾದರೆ ಮಾದಿಗ ಸಮಾಜಕ್ಕೆ ಸಾಕಷ್ಟು ಅನ್ಯಾಯವಾಗಲಿದೆ. ಶೇ.15 ರ ಮೀಸಲಾತಿಯಲ್ಲಿ ಎಡಗೈ- ಬಲಗೈ ಸಮು ದಾಯಕ್ಕೆ ಶೇ5:5ರ ಅನುಪಾತದಲ್ಲಿ ನೀಡಿದರೆ ಮಾದಿಗ ಸಮಾಜದ 3 ಸಾವಿರ ಯುವಕ ರಿಗೆ ಸರ್ಕಾರಿ ನೌಕರಿ ದೊರೆಯಲಿದೆ ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೊಳಿಸದೇ ವಿವಿಧ ಇಲಾಖೆ ಗಳಖಾಲಿ ಹುದ್ದೆ ಭರ್ತಿ ನಿರ್ಧಾರ ರಾಜ್ಯ ಸರಕಾರ ಕೈ ಬಿಡಬೇಕು ಎಂದು ಶೂದ್ರ ಶ್ರೀನಿವಾಸ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2026 03 06 19 23 04 16 7352322957d4404136654ef4adb64504

ಪ್ರತಿಭಟನಾ ಸಂದರ್ಭದಲ್ಲಿ ಶಾಸಕ ಕೆ.ಎಸ್.ಆನಂದ್‌ ಮಾತನಾಡಿ “ಮೀಸಲಾತಿಯನ್ನು ರಾಜ್ಯ ಸರ್ಕಾರ ಗಂಭೀ ರವಾಗಿ ಪರಿಗಣಿಸಿ ಬೆಳಗಾವಿ ಅಧಿವೇಶನ ದಲ್ಲಿ ವಿಧೇಯಕ ಮಂಡಿಸಿದೆ. ಧಾರವಾಡ ದಲ್ಲಿ ನಡೆದ ಉದ್ಯೋಗಾಕಾಂಕ್ಷಿಗಳ ಪ್ರತಿ ಭಟನೆ ತೀವ್ರಗೊಂಡ ಬೆನ್ನಲ್ಲೇ ಮೀಸಲಾತಿ ಅನುಪಾತದಲ್ಲಿ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಕಳೆದ 6-7 ವರ್ಷಗಳಿಂದ ಖಾಲಿಹುದ್ದೆ ಭರ್ತಿಗೆ ಹಿಂದಿನ ಸರ್ಕಾರಗಳು ಕ್ರಮಕೈಗೊಂಡಿಲ್ಲದೆ ವಿದ್ಯಾವಂತರಿಗೆ ಅನ್ಯಾಯವಾಗಿದೆ. ಈ ಪರಿಸ್ಥಿತಿ ಸರ್ಕಾರಕ್ಕೆ ಮನವರಿಕೆ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ತಿಳಿಸಿದರು.

ಇದನ್ನೂ ಓದಿದ್ದೀರಾ?ಬಾಬಾ ಬುಡನ್‌ಗಿರಿ ʼಉರುಸ್‌ʼ ವಿವಾದ; ಸರ್ಕಾರದ ವಿರುದ್ಧ ಕಾವೇರಿದ ಪ್ರತಿಭಟನೆ

ಈ ವೇಳೆ ಬಿ.ಟಿ.ಚಂದ್ರಶೇಖರ್, ಶೂದ್ರಶ್ರೀನಿವಾಸ್, ವೈ.ಟಿ.ಗೋವಿದಂಪ್ಪ, ಬೀರೂರು ಎನ್.ಗಿರೀಶ್, ಕೃಷ್ಣಪ್ಪ, ಚಿಕ್ಕಿಂಗಳ ಲಕ್ಷ್ಮಣ್, ಜಗದೀಶ್, ಮಂಜಪ್ಪ, ಸುರೇಶ್, ವಾಸು, ತಮ್ಮಯ್ಯ, ಹುಲ್ಲೇಹಳ್ಳಿ ಲಕ್ಷ್ಮಣ್, ಸಗುನಪ್ಪ, ನಾರಾಯಣ್ ಹಾಗೂ ಸಂಘಟನೆಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...