ಕಾಂಗ್ರೆಸ್‌ನತ್ತ ಎಂ.ಪಿ ಕುಮಾರಸ್ವಾಮಿ; ಹಾಲಿ ಶಾಸಕರ ಆಕ್ಷೇಪ?

Date:

ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಮೂಡಿಗೆರೆ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಇದೀಗ ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ. “ನಾನು ಕಾಂಗ್ರೆಸ್‌ ಸೇರುವ ಬಗ್ಗೆ ಕ್ಷೇತ್ರದಲ್ಲಿ ಯಾವುದೇ ಅಡ್ಡಿ-ಆತಂಕಗಳಿಲ್ಲ. ಶೀಘ್ರದಲ್ಲೇ ಕಾಂಗ್ರೆಸ್‌ ಸೇರುವ ದಿನಾಂಕವನ್ನು ತಿಳಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ಹೊರ ರಾಜ್ಯಗಳ ಪ್ರವಾಸದಲ್ಲಿದ್ದಾರೆ. ಅವರು ರಾಜ್ಯಕ್ಕೆ ಮರಳಿದ ನಂತರ, ಅವರನ್ನು ಭೇಟಿಯಾಗಿ ಪಕ್ಷಕ್ಕೆ ಸೇರುವ ದಿನಾಂಕ ತೀರ್ಮಾನಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಮಹಿಷಾ ದಸರಾ ಬಗ್ಗೆ ಮಾತನಾಡಿದ ಅವರು, “ಮಹಿಷ ನಮ್ಮ ಕುಲದ ನಾಯಕ. ದಲಿತ ಹಿಂದುಳಿದ ಸಮುದಾಯಗಳ ಸ್ವಾಭಿಮಾನದ ಪ್ರತೀಕ. ಮಹಿಷ ದಸರಾ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ನಿಲುವಿಗೆ ನನ್ನ ವಿರೋಧವಿದೆ. ಮುಂದೆ ರಾಜ್ಯಾದ್ಯಂತ ಮಹಿಷ ದಸರಾ ಆಚರಿಸುತ್ತೇವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದಿನ ಸರ್ಕಾರದ ಅವಧಿಯಲ್ಲಿ ಎಂ.ಪಿ ಕುಮಾರಸ್ವಾಮಿ ಅವರು ಮೂಡಿಗೆರೆ ಕ್ಷೇತ್ರದ ಶಾಸಕರಾಗಿದ್ದರು. ಆದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಿಲ್ಲ. ಹೀಗಾಗಿ, ಅವರು ಬಿಜೆಪಿಗೆ ರಾಜೀನಾಮೆ ನೀಡಿ ಜೆಡಿಎಸ್‌ ಸೇರಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲುಂಡಿದ್ದರು. ಇದೀಗ, ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ.

ಆದರೆ, ಅವರು ಕಾಂಗ್ರೆಸ್‌ ಸೇರುವುದಕ್ಕೆ ಮೂಡಿಗೆರೆ ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ಹಾಗೂ ಪಕ್ಷದ ಸ್ಥಳೀಯ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...