ಚಿಕ್ಕಮಗಳೂರು | ನಾಗೇನಹಳ್ಳಿ ದರ್ಗಾ ಬಳಿ ದತ್ತಜಯಂತಿ ಹೇಳಿಕೆ, ಶ್ರೀರಾಮಸೇನೆ ಮುಖಂಡ ರಂಜಿತ್ ಶೆಟ್ಟಿ ಬಂಧನ

Date:

ಚಿಕ್ಕಮಗಳೂರು ಜಿಲ್ಲೆಯ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ನಡೆಸುತ್ತೇವೆಂದು ಹಿಂದುತ್ವ ಕೋಮುವಾದಿ ಸಂಘಟನೆಗಳು ಹೇಳಿಕೆ ನೀಡಿವೆ. ಈ ಹಿನ್ನೆಲೆಯಲ್ಲಿ, ನಾಗೇನಹಳ್ಳಿ ದರ್ಗಾದ ಸುತ್ತಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶ್ರೀರಾಮಸೇನೆಯ ರಂಜಿತ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

“ಬಾಬಾಬುಡನ್‌ಗಿರಿಯಲ್ಲಿ ಮುಸ್ಲಿಮರು ಉರೂಸ್ ನಡೆಸುವುದಾದರೆ, ಸೌಹಾರ್ದತೆಯಿಂದಲೇ ನಾವು ಕೂಡ ನಾಗೇನಹಳ್ಳಿ ದರ್ಗಾದಲ್ಲಿ ಡಿಸೆಂಬರ್ 26 ರಂದು ದತ್ತಜಯಂತಿ ಆಚರಿಸುತ್ತೇವೆ” ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮತ್ತು ರಂಜಿತ್ ಶೆಟ್ಟಿ ಹೇಳಿಕೆ ನೀಡಿದ್ದರು.

ಅವರ ಹೇಳಿಕೆಯ ಹಿನ್ನೆಲೆಯಲ್ಲಿ ನಾಗೇನಹಳ್ಳಿ ದರ್ಗಾದ ಸುತ್ತಲಿನ 200 ಮೀಟರ್‌ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಲ್ಲದೆ, ಜನವರಿ 5ರವರೆಗೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಚಿಕ್ಕಮಗಳೂರು ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಷೇಧಾಜ್ಞೆಯ ಹೊರತಾಗಿಯೂ ದರ್ಗಾದ ಬಳಿ ದತ್ತಜಯಂತಿ ಆಚರಣೆಗೆ ಹಿಂದುತ್ವ ಕೋಮು ಸಂಘಟನೆಗಳು ಮುಂದಾಗಬಹುದು ಎಂದು ಹೇಳಲಾಗಿತ್ತು. ಹೀಗಾಗಿ, ಮುಂಜಾಗ್ರತ ಕ್ರಮವಾಗಿ ರಂಜಿತ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಗೌಪ್ಯ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...