ರಾಯಚೂರು | ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

Date:

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮದ ಕಸ್ತೂರಿ ಬಾ ಶಾಲೆಯಲ್ಲಿ ಉಪಹಾರ ಸೇವಿಸಿದ 10 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ತಲೆ ಸುತ್ತು, ವಾಂತಿ ಹಾಗೂ ಆಯಾಸಕ್ಕೆ ಒಳಗಾದ ವಿದ್ಯಾರ್ಥಿಗಳನ್ನು ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ರಾತ್ರಿ ವೇಳೆ ಅನ್ನ ಸಾಂಬಾರ್ ನೀಡಲಾಗಿದೆ ಯಾವುದೇ ತೊಂದರೆ ಇಲ್ಲದೆ ವಿದ್ಯಾರ್ಥಿಗಳು ನಿದ್ದೆ ಮಾಡಿದ್ದಾರೆ. ಬೆಳಗಿನ ಉಪಹಾರ ಚಿತ್ರಾನ್ನ ಸೇವಿಸಿದ ಬಳಿಕ ಘಟನೆ ನಡೆದಿದೆ. ಇದರಿಂದ ಗಾಬರಿಗೊಂಡ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದರು. ಈ ವೇಳೆ ಶಿಕ್ಷಕರು ಅಸ್ವಸ್ಥ ವಿದ್ಯಾರ್ಥಿಗಳಿಗೆ ಒಆರ್‌ಎಸ್ ಕುಡಿಸಿದ ನಂತರ ಕೆಲ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಪ್ರತಿಕ್ರಿಯಿಸಿದ ವೈದ್ಯ ರಾಘವೇಂದ್ರ, ʼಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಆಹಾರದಲ್ಲಿ ವ್ಯತ್ಯಾಸ ಆಗಿರುವ ಕಾರಣದಿಂದ ಈ ರೀತಿಯ ಸಮಸ್ಯೆ ಆಗಿರಬಹುದು. ಮುಂಜಾಗ್ರತಾ ದೃಷ್ಟಿಯಿಂದ ಅಸ್ವಸ್ಥ ವಿದ್ಯಾರ್ಥಿಗಳನ್ನು ದೇವದುರ್ಗದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿದೆʼ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಇಡೀ ದಿನದ ಕ್ಷಣ ಕ್ಷಣದ ಸುದ್ದಿಗಳು 2/09/2024

ಘಟನೆ ಬಗ್ಗೆ ಸತ್ಯ ಸಂಗತಿ ಅರಿಯಲು ಇಲಾಖಾ ಮಟ್ಟದ ವಿಚಾರಣೆ ನಡೆಸಬೇಕು ಎಂದು ಪಾಲಕರು ಪಟ್ಟು ಹಿಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...