ಶ್ರೀರಂಗಪಟ್ಟಣ | ವಿಶ್ವಜ್ಞಾನಿ ಅಂಬೇಡ್ಕರ್ ಸಂಘದಿಂದ ಕಡತನಾಳು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Date:

ಮಕ್ಕಳ ಮನಸ್ಸು ನಿರ್ಮಲವಾಗಿ ಇರುತ್ತದೆ. ಒಳ್ಳೆಯದು, ಕೆಟ್ಟದು ಏನು ಗೊತ್ತಿರುವುದಿಲ್ಲ. ಮಕ್ಕಳಿಗೆ ಅಂಗನವಾಡಿ ಟೀಚರ್‌ಗಳು ಒಳ್ಳೆಯದನ್ನು ಕಲಿಸಿ ಸಮಾಜಮುಖಿಗಳನ್ನಾಗಿಸುವ ಹೊಣೆ ಇರುತ್ತದೆ. ನಾನು ಬಹಳಷ್ಟು ಅಂಗನವಾಡಿಗಳಿಗೆ ಭೇಟಿ ಕೊಟ್ಟಿದ್ದೇನೆ. ಇಲ್ಲಿಯ ಮಕ್ಕಳು ಬಹಳ ಶಿಸ್ತಿನಿಂದ ಇದ್ದಾರೆ ಎಂದು ರೈತ ಸಂಘದ ಜಿಲ್ಲಾ ಸಂಚಾಲಕ ನದೀಮ್ ಪಾಷ ಮೆಚ್ಚುಗೆ ವ್ಯಕ್ತಪಡಿಸಿದರು.

ಅವರು ನ.14ರಂದು ಶ್ರೀರಂಗಪಟ್ಟಣ ತಾಲೂಕಿನ ಕಡತನಾಳು ಗ್ರಾಮದ ಅಂಗನವಾಡಿಯಲ್ಲಿ ವಿಶ್ವಜ್ಞಾನಿ ಅಂಬೇಡ್ಕರ್ ಸಂಘದಿಂದ ಆಚರಿಸಿದ ಮಕ್ಕಳ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಸಿಹಿ, ನೋಟ್ ಪುಸ್ತಕ, ಪೆನ್ನು, ಪೆನ್ಸಿಲ್, ಇತರ ವಸ್ತುಗಳನ್ನು ನೀಡಲಾಯಿತು.

ವಿಶ್ವನಾಥ್ ಮಾತನಾಡಿ, ನಾವು ಮಕ್ಕಳಿರಲವ್ವ ಮನೆ ತುಂಬಾ ಅಂತ ಇದ್ದ ಸಮಾಜದಲ್ಲಿ ಬೆಳೆದು ಬಂದವರು. ಮಕ್ಕಳ ಮುಖ ನೋಡಿ ನಮ್ಮ ಕಷ್ಟಗಳನ್ನು ಮರೆಯುತ್ತಿದ್ದೆವು. ಈಗಿರುವ ಎರಡು ಮಕ್ಕಳನ್ನು ನಮ್ಮ ಕೈಲಿ ನೋಡಿಕೊಳ್ಳಲು ಆಗುತಿಲ್ಲ. ಎರಡ್ಮೂರು ವರ್ಷದ ಮಕ್ಕಳ ಕೈಗೆ ಮೊಬೈಲ್ ಕೊಟ್ಟು ದಾಸರನ್ನಾಗಿ ಮಾಡುತಿದ್ದೇವೆ. ಮಕ್ಕಳು ಸಮಾಜ ಮುಖಿಗಳಾಗಿ ಬೆಳೆಯಬೇಕೆಂದರೆ ಇಂತ ವ್ಯಸನಗಳಿಂದ ಹೊರತರುವುದು ಅವಶ್ಯಕ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾದೇಶ್ ಮಾತನಾಡಿ, ನೆಹರೂ ಹುಟ್ಟಿದ ದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರುತ್ತಿದ್ದೇವೆ. ಮಕ್ಕಳ ಮೇಲೆ ಅಪಾರ ಪ್ರೀತಿಯನ್ನು ಇಟ್ಟುಕೊಂಡಿದ್ದಂತ ವ್ಯಕ್ತಿ ನೆಹರು ಎಂದರು.

ಇದನ್ನು ಓದಿದ್ದೀರಾ? ಮಳೆ | ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಣೆ

ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಸಂಘದ ಅಧ್ಯಕ್ಷ ಕೆ ಸಿ ಮಾದೇಶ್, ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್, ಅಚ್ಚಪ್ಪನಕೊಪ್ಪಲು ವಿವೇಕಾನಂದ ಜಾಗ್ರತ ಬಳಗದ ಸಂಚಾಲಕ ವಿಶ್ವನಾಥ್, ಮಹಿಳಾ ಸಮಾಜದ ಸಾವಿತ್ರಮ್ಮ, ಜಿಲ್ಲಾ ರೈತ ಸಂಘದ ಸಂಚಾಲಕ ನದೀಮ್ ಪಾಷ, ಧರಸಗುಪ್ಪೆ ಮಂಜುಳಾ, ಅಂಗನವಾಡಿ ಕಾರ್ಯಕರ್ತೆ ಶೈಲಜಾ, ಸಹಾಯಕಿ ಸವಿತಾ ಮುಂತಾದವರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...