ಮೈಸೂರು | ಮೆಲ್ಲಹಳ್ಳಿ ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’

Date:

ಮೈಸೂರು ತಾಲ್ಲೂಕಿನ ಮೆಲ್ಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ‘ಮಕ್ಕಳ ಸಂತೆ’ ಅತ್ಯಂತ ಸಂಭ್ರಮದಿಂದ ನಡೆದು, ನಿರೀಕ್ಷೆಗೂ ಮೀರಿ ಯಶಸ್ವಿಯಾಗುವ ಮೂಲಕ ವಿದ್ಯಾರ್ಥಿಗಳಿಗೆ ವ್ಯವಹಾರಿಕ ಜ್ಞಾನ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸಲು ಸಹಕಾರಿಯಾಯಿತು.

‘ಮಕ್ಕಳ ಸಂತೆ’ಯಲ್ಲಿ ಒಟ್ಟು 59 ಮಳಿಗೆಗಳನ್ನು ವಿದ್ಯಾರ್ಥಿಗಳು ತೆರೆದಿದ್ದರು. ಈ ಮಳಿಗೆಗಳಲ್ಲಿ ಸೊಪ್ಪು, ತರಕಾರಿ, ಹಣ್ಣುಗಳು, ತಿಂಡಿ ತಿನಿಸುಗಳು, ಶರಬತ್ತು ಹಾಗೂ ಮಜ್ಜಿಗೆಯಂತಹ ತಂಪು ಪಾನೀಯಗಳನ್ನು ವಿದ್ಯಾರ್ಥಿಗಳು ವ್ಯಾಪಾರಿಗಳಾಗಿ ಮಾರಾಟ ಮಾಡಿದರು. ಇವರಿಗೆ ಮೆಲ್ಲಹಳ್ಳಿ ಮತ್ತು ಹಾರೋಹಳ್ಳಿಯ ಸರ್ಕಾರಿ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಅಡುಗೆ ಸಿಬ್ಬಂದಿ ಗ್ರಾಹಕರಾಗಿ ಭರ್ಜರಿಯಾಗಿಯೇ ವ್ಯಾಪಾರದಲ್ಲಿ ತೊಡಗಿ ಅತ್ಯುತ್ಸಾಹದಿಂದ ತಮಗಿಷ್ಟದ ಸರಕುಗಳನ್ನು ಖರೀದಿಸಿದರು.

ಎಲ್ಲ ಮಳಿಗೆಗಳ ವಿದ್ಯಾರ್ಥಿ ವ್ಯಾಪಾರಿಗಳು ಒಟ್ಟು ₹5915 ರೂಪಾಯಿ ಬಂಡವಾಳ ಹೂಡಿದ್ದರು. ಈ ಮೂಲ ಬಂಡವಾಳದ ಮೇಲೆ ಒಟ್ಟು ₹4100 ರೂಪಾಯಿ ಲಾಭ ದೊರಕಿತು. ಒಟ್ಟಾರೆ ₹10015 ರೂಪಾಯಿಗಳ ವಹಿವಾಟು ನಡೆಯಿತು. ಲಾಭದ ಮೇಲೆ ₹679 ರೂಪಾಯಿ ಸಂತೆ ಸುಂಕ ಸಂಗ್ರವಾಯಿತು. 59 ಮಳಿಗೆಗಳಲ್ಲಿ 41 ಮಳಿಗೆಗಳು ಲಾಭವನ್ನೂ, 11 ಮಳಿಗೆಗಳು ನಷ್ಟವನ್ನೂ, 5 ಮಳಿಗೆಗಳು ಲಾಭ-ನಷ್ಟದ ಸಮತೋಲನವನ್ನು ಅನುಭವಿಸಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗ್ಗೆ 11 ಗಂಟೆಗೆ ಅಗತ್ಯ ಸಿದ್ಧತೆಗಳೊಂದಿಗೆ ಆರಂಭವಾದ ‘ಮಕ್ಕಳ ಸಂತೆ’ಯನ್ನು ಮೆಲ್ಲಹಳ್ಳಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಜಿ.ಪಿ. ಮಂಜುನಾಥ್ ಅವರು ಸೊಪ್ಪು ಖರೀದಿಸುವ ಮೂಲಕ ಉದ್ಘಾಟಿಸಿದರು. ಶಿಕ್ಷಕ ಮತ್ತು ಸಾಹಿತಿ ಟಿ. ಸತೀಶ್ ಜವರೇಗೌಡ ಅವರು ವಿದ್ಯಾರ್ಥಿಗಳಿಗೆ ಬಂಡವಾಳ, ಹೂಡಿಕೆ, ಅಸಲು, ಲಾಭ, ನಷ್ಟ, ತೂಕ, ವಂಚನೆ, ತೆರಿಗೆಯಂತಹ ಮಾರುಕಟ್ಟೆಯ ವಿದ್ಯಮಾನಗಳ ಮೂಲಕ ಗಣಿತದ ಮೂಲ ಕ್ರಿಯೆಗಳನ್ನು ಪರಿಚಯಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಸುವರ್ಣಾವತಿ ಜಲಾಶಯದಲ್ಲಿ ಜಲಸಾಹಸ ಕ್ರೀಡೋತ್ಸವಕ್ಕೆ ಚಾಲನೆ

ಮುಖ್ಯ ಶಿಕ್ಷಕಿ ಪಿ.ಎನ್. ವೀಣಾ ಮತ್ತು ಜಿಪಿಟಿ ಶಿಕ್ಷಕ ಹೆಚ್.ಎಸ್. ಸುನೀಲ್ ಕುಮಾರ್ ಮಕ್ಕಳ ಸಂತೆಯ ತೆರಿಗೆ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು. ಹಾರೋಹಳ್ಳಿಯ ಮುಖ್ಯ ಶಿಕ್ಷಕ ಸಂತೋಷ್ ಬಿ. ಶೆಟ್ಟಿ, ಪ್ರೌಢಶಾಲಾ ಶಿಕ್ಷಕಿಯರಾದ ವಿಜಯಲಕ್ಷ್ಮಿ, ಮಹದೇಶ್ವರಿ ಸೇರಿದಂತೆ ಶಾಲೆಯ ಶಿಕ್ಷಕ- ಶಿಕ್ಷಕಿಯರು ಮಕ್ಕಳ ಸಂತೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...