ಚಿಮುಲ್ ಕಣ:ಒಟ್ಟು 43 ನಾಮಪತ್ರ ಸಲ್ಲಿಕೆ

Date:

ಚಿಕ್ಕಬಳ್ಳಾಪುರ : ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರ ದೂರದೃಷ್ಟಿಯ ಕಾರಣ ಇಂದು ಚಿಮುಲ್ ಅಭಿವೃದ್ಧಿ ಪಥದಲ್ಲಿ ಸಾಗಿದೆ ಎಂದು ಚಿಂತಾಮಣಿ-ಕಸಬಾ ಕ್ಷೇತ್ರದಿಂದ ಚಿಮುಲ್ ಆಡಳಿತ ಮಂಡಳಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ವೈ.ಬಿ.ಅಶ್ವತ್ಥನಾರಾಯಣ ಬಾಬು ಹೇಳಿದರು.

ಚಿಮುಲ್ ಆವರಣದಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ ಈಗಾಗಲೇ ಚಿಮುಲ್ ಗೆ ಸಚಿವರಾದ ಸುಧಾಕ‌ರ್ ಅವರು 9 ಎಕರೆ 15 ಗುಂಟೆ ಜಮೀನನ್ನು ಸರ್ಕಾರದಿಂದ ಮಂಜೂರು ಮಾಡಿಸಿಕೊಟ್ಟಿದ್ದಾರೆಂದರು.ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ಬೇರ್ಪಟ್ಟ ಜಿಲ್ಲೆಗೆ ಚಿಮುಲ್ ಪ್ರತ್ಯೇಕಗೊಂಡಿದ್ದು ಅವರ ಅಭಿವೃದ್ಧಿ ಕಾರ್ಯಗಳಿಗೆ ಚುನಾವಣೆಯಲ್ಲಿ ನಮ್ಮ ಗೆಲುವಿಗೆ ಶ್ರೀರಕ್ಷೆ ಎಂದರು.

ಅಲ್ಲದೇ ನಮ್ಮ ಆಡಳಿತ ಮಂಡಳಿ ಅಧಿಕಾರಕ್ಕೆ ಬರಲಿದೆ ಎಂದು ಅಶ್ವತ್ಥನಾರಾಯಣ ಬಾಬು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇರೆ ಜಿಲ್ಲೆಗಿಂತ ಆರ್ಥಿಕವಾಗಿ ರೈತ ಸ್ನೇಹಿ ಆಡಳಿತ ನೀಡುವ ಕನಸನ್ನು ನಾವು ಹೊಂದಿದ್ದೇವೆ.ಆ ನಿಟ್ಟಿನಲ್ಲಿ ಸಚಿವರಾದ ಡಾ. ಎಂ.ಸಿ.ಸುಧಾಕರ್ ಅವರು ಚಿಮುಲ್ ವತಿಯಿಂದ ಸರ್ಕಾರಕ್ಕೆ 1ರೂ.ಕಟ್ಟಿಸಿಕೊಳ್ಳದೇ ಕೋಟ್ಯಂತರ ರೂ. ಬೆಲೆ ಬಾಳುವ ಜಮೀನನ್ನು ಚಿಮುಲ್‌ಗೆ ಮಂಜೂರು ಮಾಡಿಸಿದ್ದಾರೆ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹಾಗೂ ಈ ಹಿಂದೆ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರ ಸಹಕಾರದೊಂದಿಗೆ ಚಿಮುಲ್ ಅನ್ನು ಕಾನೂನು ಕಾನೂನು ಬದ್ದವಾಗಿ ಅಸ್ತಿತ್ವಕ್ಕೆ ತರಲಾಗಿದೆ ಎಂದರು.

ಇದನ್ನು ಓದಿದ್ದೀರಾ…? ಗಣಿಗಾರಿಕೆ ಚಾಲಕ ಸಾವು ದೂರಿಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯ

ಪ್ರಪ್ರಥಮ ಬಾರಿಗೆ ಚಿಮುಲ್ ಚುನಾವಣೆ ಎದುರಿಸುತ್ತಿದೆ. ಚುನಾವಣೆಯಲ್ಲಿ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆಂದರು.ಈ ವೇಳೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಎಸ್.ಎನ್.ಚಿನ್ನಪ್ಪ, ಮುರುಗಮಲ್ಲ ಲಕ್ಷ್ಮಿ ನಾರಾಯಣರೆಡ್ಡಿ,ಕೃಷ್ಣಮೂರ್ತಿ, ಚೆನ್ನಸಂದ್ರ ನಾರಾಯಣಸ್ವಾಮಿ,ಆರ್ ಎಂ ಜಿ ಶ್ರೀನಿವಾಸ್,ಚಂದ್ರಶೇಖರ್,ಶ್ರೀರಾಮರೆಡ್ಡಿ,ಏಜಾಜ್, ಅನೇಕ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...