ಚಿಂತಾಮಣಿ | ವಿವಿಧ ಬೇಡಿಕೆ ಈಡೇರಿಸುವಂತೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Date:

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು ಚಿಂತಾಮಣಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

“ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ 40 ಸಾವಿರಕ್ಕೂ ಹೆಚ್ಚು ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟಿಸಿದ್ದೆವು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಂಘಟನೆ ಜತೆಯಲ್ಲಿ ಸಭೆ ನಡೆಸಿದ್ದರು” ಎಂದು ಆಶಾ ಕಾರ್ಯಕರ್ತೆಯರು ತಿಳಿಸಿದರು.

“ಈ ವೇಳೆ ನಾವು ₹12,000 ಗೌರವಧನ ನೀಡಬೇಕೆಂದು ಒತ್ತಾಯ ಮಾಡಿದ್ದೆವು. ಸರ್ಕಾರ ₹10,000 ಗೌರವಧನ ನೀಡುವ ಭರವಸೆ ನೀಡಿತ್ತು. ಅಲ್ಲದೆ ಕಾಂಪೋನೆಂಟ್‌ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟೀವ್ ಕೂಡ ನೀಡಲಾಗುವುದೆಂದು ಭರವಸೆ ನೀಡಿತ್ತು. ನಂತರ ಸಿಎಂ ಭರವಸೆ ಮೇರೆಗೆ ಪ್ರತಿಭಟನೆ ಕೈಬಿಡಲಾಗಿತ್ತು. ಆದರೀಗ ನಿಶ್ಚಿತ ಗೌರವಧನ ₹10,000ವನ್ನಾದರೂ ಆಶಾ ಕಾರ್ಯಕರ್ತೆಯರಿಗೆ ನೀಡವ ಆದೇಶ ಹೊರಡಿಸಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯನಗರ | ಪ್ರತಿರೋಧ ಸಂಘರ್ಷಕ್ಕೆ ಕೊನೆಯಿಲ್ಲ: ಚಿಂತಕ ಡಾ. ಪಾಟೀಲ್

“1 ಸಾವಿರ ಹೆಚ್ಚಿಸುವುದಾಗಿ ಬಜೆಟ್‌ನಲ್ಲಿ ತಿಳಿಸಿದ್ದರು. ಈಗ ಸರ್ಕಾರ ತಾನು ನೀಡಿದ ಭರವಸೆಯನ್ನು ಈಡೇರಿಲ್ಲ. ಆಶಾ ಕಾರ್ಯಕರ್ತೆಯರ ನ್ಯಾಯಯುತವಾದ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಚಿಂತಾಮಣಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಪ್ರತಿಭಟನೆಯಲ್ಲಿ ಲಕ್ಷ್ಮಿ, ರೇಷ್ಮಾ ಎಂ, ಪಾರ್ವತಿ, ಶಿವಮ್ಮ, ಅಂಜಮ್ಮ, ನಾಗರತ್ನಮ್ಮ, ಸುಶೀಲಮ್ಮ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...