ಚಿಂತಾಮಣಿ | ನಗರಸಭಾ ಅಧ್ಯಕ್ಷರಾಗಿ ಜಗನ್ನಾಥ್, ಉಪಾಧ್ಯಕ್ಷರಾಗಿ ರಾಣಿಯಮ್ಮ ಅವಿರೋಧ ಆಯ್ಕೆ

Date:

ಚಿಂತಾಮಣಿ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಇಂದು(ಬುಧವಾರ) ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ 7ನೇ ವಾರ್ಡ್ ನಗರಸಭಾ ಸದಸ್ಯ ಆರ್ ಜಗನ್ನಾಥ್, ಉಪಾಧ್ಯಕ್ಷರಾಗಿ 27ನೇ ವಾರ್ಡ್ ಸದಸ್ಯೆ ರಾಣಿಯಮ್ಮ ಅವಿರೋಧ ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ನಗರಸಭಾ ಸದಸ್ಯ ಆರ್ ಜಗನ್ನಾಥ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಣಿಯಮ್ಮ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಬೇರೆ ಯಾವುದೇ ನಾಮಪತ್ರಗಳು ಸಲ್ಲಿಕೆಯಾಗದ ಹಿನ್ನೆಲೆ ನಾಮಪತ್ರ ಸಲ್ಲಿಸಿದ್ದ ಇಬ್ಬರು ಸದಸ್ಯರನ್ನು ಆವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾ ಅಧಿಕಾರಿ ಅಶ್ವಿನ್‌ ಚುನಾವಣೆ ಫಲಿತಾಂಶ ಘೋಷಣೆ ಮಾಡಿದರು.

ಈ ವೇಳೆ ಸ್ಥಳಕ್ಕಾಗಮಿಸಿದ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಹೂ ಮಾಲೆ ಹಾಕಿ ಶುಭ ಕೋರಿ, ನಗರಸಭಾ ಸದಸ್ಯರು ಒಗ್ಗಟ್ಟಿನಿಂದ ನಗರವನ್ನು ಅಭಿವೃದ್ಧಿ ಪಥದತ್ತ ಸಾಗಿಸಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ ಕಾರ್ಯಕರ್ತರು ನಗರಸಭೆ ಮುಂಭಾಗ ಪಟಾಕಿ ಸಿಡಿಸಿ ಗೆಲುವನ್ನು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಜಗದೀಶ್, ರಾಜಾಚಾರಿ, ಹರೀಶ್, ಅಕ್ಷಯ್ ಸೇರಿದಂತೆ ಇತರೆ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...