ಚಿಂತಾಮಣಿ | ಗಂಗಾ ಕಲ್ಯಾಣ ಯೋಜನೆ; ರೈತರಿಗೆ ಪಂಪ್‌ಸೆಟ್ ವಿತರಣೆ

Date:

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ‌ 8 ಮಂದಿ ರೈತರಿಗೆ ಕೊರೆದ ಕೊಳವೆ ಬಾವಿಗಳಿಗೆ ಪಂಪ್ ಸೆಟ್ ಮತ್ತು ಇತರೆ ಸಾಮಗ್ರಿಗಳನ್ನು ವಿತರಣೆ ಮಾಡಲಾಗಿದೆ. ಚಿಂತಾಮಣಿ ನಗರದ ಪಾಲಿಟೆಕ್ನಿಕ್ ಹಿಂಭಾಗ ಇರುವ ಮೈದಾನದಲ್ಲಿ ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಆನಂದ್ ಪಂಪ್‌ ಸೆಟ್‌ ವಿತರಣೆ ಮಾಡಿದರು.

ಬಳಿಕ ಮಾತನಾಡಿದ ಅವರು, “ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಿಂದ ಸುಮಾರು ಎಂಟು ಜನ ಫಲಾನುಭವಿಗಳಿಗೆ 2021-22 ನೇ ಸಾಲಿಗೆ ಕೊಳವೆಬಾವಿ ಕೊರೆದಿರುವವರಿಗೆ ಪಂಪ್ ಸೆಟ್ ಹಾಗೂ ಕೇಬಲ್ ಅನ್ನು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಎಂ ಸಿ ಸುಧಾಕರ್ ಅವರ ನಿರ್ದೇಶನದ ಮೇರೆಗೆ ವಿತರಣೆ ಮಾಡಲಾಗಿದ್ದು,‌ ರೈತರು ಇದನ್ನು ಸದುಪಯೋಗ ಪಡೆದುಕೊಳ್ಳಬೇಕು” ಎಂದು ಶುಭ ಹಾರೈಸಿದರು.

ಇದನ್ನು ಓದಿದ್ದೀರಾ..?ಆರೋಗ್ಯ ಸಂಜೀವಿನಿಗೆ ಎಲ್ಲಾ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂಗಳಲ್ಲಿ ಜಾರಿಗೆ ನೌಕರರ ಸಂಘ ಮನವಿ

ಈ ಸಂದರ್ಭದಲ್ಲಿ ನಿಗಮದ ಜಿಲ್ಲಾ ಮಟ್ಟದ ಅಧಿಕಾರಿ ಪ್ರಕಾಶ್,ಫಲಾನುಭವಿಗಳಾದ ಕದಿರಪ್ಪ, ಶಿವಶಂಕರಪ್ಪ, ತಿರುಮಲಮ್ಮ, ನಾರಾಯಣಸ್ವಾಮಿ, ಆಂಜಪ್ಪ, ಮುನಿ ನರಸಿಂಹಪ್ಪ, ಪಾಪಮ್ಮ, ನಾರಾಯಣಪ್ಪ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...