ಚಿಂತಾಮಣಿ | ಗ್ಯಾಸ್ ಸಿಲಿಂಡರ್ ಸ್ಫೋಟ; ತಾಯಿ, ಮೂವರು ಮಕ್ಕಳು ಗಂಭೀರ

Date:

ಅನಿಲ ಸೋರಿಕೆಯಿಂದಾಗಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಪಲ್ಲಿಯಲ್ಲಿ ಇಂದು ಬೆಳಿಗ್ಗೆ ಸುಮಾರು ಎಂಟು ಗಂಟೆ ಸಮಯದಲ್ಲಿ ನಡೆದಿದೆ.

ನಗರದ ಹೊರವಲಯದ ಕರಿಯಪಲ್ಲಿಯ ವೆಂಕಟೇಶ್ವರ ಶಾಲೆ ಸಮೀಪ ಲಕ್ಷ್ಮಿದೇವಮ್ಮ ಎಂಬುವರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸ್ಪೋಟಗೊಂಡು ಮನೆಯ ಮೇಲ್ಚಾವಣಿ ಹಾನಿಯಾಗಿ ಮನೆಯಲ್ಲಿದ್ದ ತಾಯಿ ಲಕ್ಷ್ಮಿದೇವಿ(32 ವರ್ಷ)ಮಗ ಹರ್ಷವರ್ಧನ್(14ವರ್ಷ) ಸಂಜಯ್(13 ವರ್ಷ) ಹರಿಪ್ರಿಯ(11 ವರ್ಷ) ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಯಿ ಲಕ್ಷ್ಮಿದೇವಿ ಹಾಗೂ ಮಗ ಹರ್ಷವರ್ಧನ್ ರವರ ಸ್ಥಿತಿ ಚಿಂತ ಜನಕವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಗೊತ್ತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಗಣಿಬಾಧಿತ ವಲಯ ಪ್ರದೇಶಗಳ ಮಣ್ಣು, ನೀರಿನ ಸಂರಕ್ಷಣೆ ಅಗತ್ಯ: ಉಪ ಕೃಷಿನಿರ್ದೇಶಕ ಮಂಜುನಾಥ್

ಸಿಲಿಂಡರ್‌ ಸ್ಪೋಟದಲ್ಲಿ ಗಾಯಗೊಂಡ ಇಬ್ಬರು ಮಕ್ಕಳು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ಯಾಸ್ ಸಿಲೆಂಡರ್ ಸ್ಫೋಟದ ರಭಸಕ್ಕೆ ಮನೆಯ ಗೃಹಬಳಕೆ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆಯ ವಿಷಯ ತಿಳಿದ ತಕ್ಷಣ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...