ಚಿಂತಾಮಣಿ | ಕರ್ತವ್ಯನಿರತ ವೈದ್ಯೆಯ ನಿಂದನೆ; ಎಫ್ಐಆರ್ ದಾಖಲು

Date:

ಕರ್ತವ್ಯದಲ್ಲಿದ್ದ ವೈದ್ಯೆ ಹಾಗೂ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯ ಮೇಲೆ ಚಿಂತಾಮಣಿ ನಗರ ಠಾಣೆ ಪೊಲೀಸರು ಬುಧವಾರ ಎಫ್‌ಐಆರ್‌ ದಾಖಲಿಸಿದ್ದಾರೆ.

ಚಿಂತಾಮಣಿ ತಾಲ್ಲೂಕಿನ ಮುರುಗುಮಲ್ಲ ಗ್ರಾಮದ ಸೈಯದ್ ಅಕ್ರಮ್ ಪಾಷ ಎಂಬಾತ ಹೊಟ್ಟೆ ನೋವಿನ ಕಾರಣ ತನ್ನ ಮಗಳನ್ನು ಬುಧವಾರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಥಮ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬೇರೆಡೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದರು.

ನಂತರ ಆಂಬುಲೆನ್ಸ್‌ ಲಭ್ಯವಿಲ್ಲದ ಕಾರಣ ಸಿಟ್ಟಿಗೆದ್ದಿರುವ ವ್ಯಕ್ತಿ ಮತ್ತು ಆತನ ಸಹಚರ ಕರ್ತವ್ಯದಲ್ಲಿದ್ದ ವೈದ್ಯಾಧಿಕಾರಿ ಡಾ.ದ್ರಾಕ್ಷಾಯಿಣಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಹಲ್ಲೆಗೂ ಯತ್ನಿಸಿದ್ದಾನೆ. ಗಲಾಟೆ ತಡೆಯಲು ಬಂದ ಅಲ್ಲಿನ ಸಿಬ್ಬಂದಿ ಮೇಲೂ ಹರಿಹಾಯ್ದಿರುವ ಅಕ್ರಮ್‌ ಪಾಷ ಎಲ್ಲರನ್ನೂ ಅವಾಚ್ಯವಾಗಿ ನಿಂದಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬಾಗೇಪಲ್ಲಿ | ಚೌಡೇಶ್ವರಿಯ ದೇವಾಲಯದಲ್ಲಿ ವಸ್ತ್ರಾಭರಣ, ವಿಗ್ರಹಗಳ ಕಳವು

ಘಟನೆ ಕುರಿತು ಡಾ.ದ್ರಾಕ್ಷಾಯಿಣಿ ಅವರು ಚಿಂತಾಮಣಿ ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ದೂರಿನ ಹಿನ್ನೆಲೆ ಕ್ರಮಕೈಗೊಂಡಿರುವ ಪೊಲೀಸರು ವೈದ್ಯೆಯನ್ನು ನಿಂದಿಸಿದ ವ್ಯಕ್ತಿಯ ಮೇಲೆ ಎಫ್‌ಐಆರ್‌ ದಾಖಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...