ಚಿಂತಾಮಣಿ | ಎರಡು ವರ್ಷಗಳ ಪ್ರೀತಿಗೆ ಪೋಷಕರ ವಿರೋಧ; ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ

Date:

ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯು ಮನನೊಂದು ಕೃಷಿ ಹೊಂಡಕ್ಕೆ ಹಾರಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಎಂ.ಮುದ್ದಲಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಗ್ರಾಮದ ವಿವಾಹಿತ ಯುವತಿ ಅನುಷಾ(19) ಮತ್ತು ಎಂ.ಮುದ್ದಲಹಳ್ಳಿ ಗ್ರಾಮದ ವೇಣು(21) ಮೃತ ಪ್ರೇಮಿಗಳು.

ಚೇಳೂರು ತಾಲೂಕು ಮಾಡಪಲ್ಲಿ ಗ್ರಾಮದ ಅನುಷಾ ಮತ್ತು ಚಿಂತಾಮಣಿ ತಾಲೂಕಿನ ಎಂ.ಮುದ್ದಲಹಳ್ಳಿ ಗ್ರಾಮದ ವೇಣು ಪರಸ್ಪರ ಪ್ರೀತಿಯಲ್ಲಿ ಬಿದ್ದು, ಮದುವೆಯಾಗುವ ಕನಸು ಕಂಡಿದ್ದರು. ಆದರೆ ಪೋಷಕರು ಒಪ್ಪಿರಲಿಲ್ಲ. ಯುವತಿ ಅನುಷಾಳನ್ನು ಕಳೆದ ಮೇ ತಿಂಗಳಲ್ಲಿ ಕಾಚಹಳ್ಳಿಯ ಯುವಕನಿಗೆ ಕೊಟ್ಟು ಮದುವೆ ಮಾಡಿದ್ದರು. ದಾಬಸ್ ಪೇಟೆಯಲ್ಲಿ ಗಂಡ ಹೆಂಡತಿ ವಾಸವಿದ್ದರು. ಆಷಾಡ ಮಾಸಕ್ಕೆಂದು ಅನುಷಾಳ ಗಂಡ ಚೌಡರೆಡ್ಡಿ ಚೇಳೂರು ತಾಲೂಕು ಮಾಡಪಲ್ಲಿಯ ತವರು ಮನೆಗೆ ಬಿಟ್ಟು ಬಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮದುವೆ ನಂತರವೂ ಪ್ರೀತಿ ಮುಂದುವರಿದಿತ್ತು. ಗಂಡನಿಗೆ ಎಟಿಎಮ್ ಮಾಡಿಸಬೇಕು ಎಂದು ನೆಪ ಹೇಳಿ ಶುಕ್ರವಾರ ಮನೆಯಿಂದ ಹೊರಹೋಗಿದ್ದ ಅನುಷಾ, ತನ್ನ ಪ್ರಿಯಕರನನ್ನು ಭೇಟಿಯಾಗಲು ಎಂ.ಮುದ್ದಲಹಳ್ಳಿಗೆ ಬಂದಿದ್ದಳು. ಆನಂತರ ಊರಿನ ಸಮೀಪದ ತೋಟಕ್ಕೆ ಹೋಗಿ ಸಾಯುವ ನಿರ್ಧಾರ ಮಾಡಿದ್ದಾರೆ. ಮೊಬೈಲ್, ಪರ್ಸ್ ಬಿಟ್ಟು ಅಲ್ಲೇ ಬಿಟ್ಟು, ಇಬ್ಬರು ದುಪ್ಪಟ್ಟ ಕಟ್ಟಿಕೊಂಡು ತೋಟದಲ್ಲಿದ್ದ ಕೃಷಿ ಹೊಂಡಕ್ಕೆ ಹಾರಿ ಜೀವ ಬಿಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಚುನಾವಣಾ ಪ್ರಚಾರದ ವೇಳೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಕಿವಿಗೆ ಗಾಯ

ಕರೆ ಸ್ವೀಕರಿಸದ ಹಿನ್ನೆಲೆ ಅನುಷಾ ಗಂಡ ಕೆಂಚಾರ್ಲ ಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶನಿವಾರ ಕೃಷಿ ಹೊಂಡದ ಮಾಲೀಕ ಚಲಪತಿ ಎಂಬುವವರು ತೋಟಕ್ಕೆ ತೆರಳಿದ್ದ ವೇಳೆ ಕೃಷಿ ಹೊಂದ ಸಮೀಪ ಮೊಬೈಲ್, ಪರ್ಸ್ ಇರುವುದನ್ನು ಗಮನಿಸಿದ್ದಾರೆ. ಆ ಬಳಿಕ  ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಕೃಷಿ ಹೊಂಡದಲ್ಲಿದ್ದ ಶವಗಳನ್ನು ಪತ್ತೆ ಹಚ್ಚಿದ್ದು, ಮರಣೋತ್ತರ ಪರೀಕ್ಷೆಗೆ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...