ಚಿಂತಾಮಣಿ | ಹಿರಿಯ ನಾಗರಿಕರ ವಿವಿಧ ಸ್ಪರ್ಧೆಗಳಿಗೆ ಸಚಿವ ಡಾ. ಎಂ ಸಿ ಸುಧಾಕ‌ರ್ ಚಾಲನೆ

Date:

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಚಿಂತಾಮಣಿ ನಗರದ ಝಾನ್ಸಿರಾಣಿ ಲಕ್ಷ್ಮೀಬಾಯಿ ಕ್ರೀಡಾಂಗಣದಲ್ಲಿ ಸಚಿವ ಡಾ. ಎಂ ಸಿ ಸುಧಾಕರ್ ಅಭಿಮಾನ ಬಳಗದಿಂದ ನಡೆಸುತ್ತಿರುವ ʼಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆʼ ಕಾರ್ಯಕ್ರಮಕ್ಕೆ ಹಸಿರು ಬಾವುಟ ಹಾರಿಸುವ ಮೂಲಕ ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ ಸಿ ಸುಧಾಕರ್ ಚಾಲನೆ ನೀಡಿದರು.

“ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದು, ಚಿಂತಾಮಣಿ ನಗರವನ್ನು ಸ್ವಚ್ಛ ಸುಂದರ ಹಾಗೂ ಪ್ಲಾಸ್ಟಿಕ್ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಪ್ಲಾಸ್ಟಿಕ್ ಚೀಲಗಳಲ್ಲಿ ಕಸವನ್ನು ತುಂಬಿ ವಾಹನಗಳಲ್ಲಿ ಬಂದು ಎಸೆದು ಹೋಗುತ್ತಿರುವುದನ್ನು ನೋಡಿದರೆ ಸ್ವಚ್ಛ ನಗರವನ್ನಾಗಿಸಲು ಅಸಾಧ್ಯವಾಗಿದ್ದು, ಸಾರ್ವಜನಿಕರ ಸಹಕಾರವಿದ್ದಲ್ಲಿ ಮಾತ್ರ ಸ್ವಚ್ಛ ನಗರದ ಕನಸು ನನಸಾಗುತ್ತದೆ” ಎಂದು ಸಚಿವ ಡಾ. ಎಂ ಸಿ ಸುಧಾಕರ್ ಹೇಳಿದರು.

“ಕ್ಷೇತ್ರದ ಅಭಿವೃದ್ಧಿಗಾಗಿ ರಸ್ತೆ, ಕ್ರೀಡಾಂಗಣ, ಒಳಚರಂಡಿ, ಕೆರೆ, ಚೆಕ್‌ ಡ್ಯಾಂ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಹಲವು ಯೋಜನೆಗಳನ್ನು ರೂಪಿಸಿದ್ದು, ₹1,500 ಕೋಟಿ ವೆಚ್ಚ ವ್ಯಯ ಮಾಡಲಾಗುತ್ತಿದೆ. ಭಕ್ತರಹಳ್ಳಿ ಅರಸನಕೆರೆ, ನೆಕ್ಕುಂದಿ ಕೆರೆ, ಕನ್ನಂಪಲ್ಲಿಕೆರೆ ಸೇರಿದಂತೆ ತಾಲೂಕಿನ ವಿವಿಧ ಕೆರೆಗಳನ್ನು ಹಾಗೂ ಮುಂಗಾನಹಳ್ಳಿ ಹೋಬಳಿಯ ಕುಶಾವತಿ ನದಿಗೆ ಅಡ್ಡಲಾಗಿ ಚೆಕ್‌ ಡ್ಯಾಂಗಳನ್ನು ನಿರ್ಮಿಸುತ್ತಿದ್ದು, ಇದರಿಂದ ಒಮ್ಮೆ ಭರಪೂರ ಮಳೆಯಾದರೆ 4-5 ವರ್ಷಗಳಿಗೆ ಆಗುವಷ್ಟು ನೀರು ಸಂಗ್ರಹಣೆಯಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿರೋಧ ಪಕ್ಷದವರಿಗೆ ಇವೆಲ್ಲವೂ ಗೌಣ್ಯವಾಗಿರುತ್ತದೆ ಹಾಗೂ ಅವರ ಹತ್ತು ವರ್ಷಗಳ ಅವಧಿಗಳಲ್ಲಿ ಯಾವುದೇ ಅಭಿವೃದ್ಧಿಯಾಗದಿರುವುದನ್ನು ಜನತೆಗೆ ತಿಳಿದಿದೆ” ಎಂದು ಕಿಡಿಕಾರಿದರು.

ವಿವಿಧ ರೀತಿಯ ಸ್ಪರ್ಧೆಗಳಾದ ವಾಕಿಂಗ್, ಮಡಿಕೆ ಹೊಡೆಯುವುದು, ಗುಂಡುಎಸೆತ, ಮ್ಯೂಸಿಕಲ್ ಛೇರ್ ಹಾಗೂ ಚಮಚ ಮತ್ತು ನಿಂಬೆ ಹಣ್ಣಿನ ಓಟಗಳನ್ನು 60, 70, 80, 90 ವರ್ಷ ಮೇಲ್ಪಟ್ಟರ ಶ್ರೇಣಿಗಳನ್ನು ವರ್ಗೀಕರಿಸಿ ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಆಟೋಟಗಳನ್ನು ಏರ್ಪಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪೋಷಕರ ಆಯ್ಕೆ ನಮ್ಮ ಕೈಯ್ಯಲ್ಲಿಲ್ಲ: ಆರೋಗ್ಯದ ಆಯ್ಕೆ ನಮ್ಮ ಕೈಯ್ಯಲ್ಲಿದೆ: ಡಾ. ಸಿ.ಎಸ್. ಹಿರೇಮಠ್

ಪ್ರತಿಯೊಂದು ಸ್ಪರ್ಧೆಯಲ್ಲೂ ಮೂವರು ವಿಜೇತರನ್ನು ಆರಿಸಲಾಯಿತು. ಅವರಿಗೆ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯಂದು ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಸಂಘಟಕ ಡಾ. ವಿ ಅಮ‌ರ್, ವೈ ಬಿ ಅಶ್ವತ್ಥ ನಾರಾಯಣ, ಹೆಚ್ ಎನ್ ಮಹೇಶ್‌ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷ ಜಗನ್ನಾಥ್, ನಾಮನಿರ್ದೇಶಿತ ಸದಸ್ಯ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಲಕ್ಷ್ಮೀನಾರಾಯಣ ರೆಡ್ಡಿ, ವೆಂಕಟರವಣಪ್ಪ, ಉಮೇಶ್, ಕಲ್ಯಾಣ್ ರೆಡ್ಡಿ, ಫಾರೂಕ್, ಆರ್ ಡಿ ಮಂಜುನಾಥ್, ಎಸ್ ಮಂಜುನಾಥ್, ಮುನಿರಾಜು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...