ಚಿಂತಾಮಣಿ | ಜು.11ರಂದು ನಗರಕ್ಕೆ ನಿಖಿಲ್ ಕುಮಾರಸ್ವಾಮಿ: ಜೆಡಿಎಸ್‌ ಕಾರ್ಯಕರ್ತರು ಭಾಗವಹಿಸಲು ಮನವಿ

Date:

ರಾಜ್ಯಾದ್ಯಂತ ಜೆಡಿಎಸ್ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟನೆ ಮಾಡಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಸಲುವಾಗಿ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚಿಂತಾಮಣಿ ತಾಲೂಕಿಗೆ ಜುಲೈ 11ರಂದು ಆಗಮಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಬೇಕೆಂದು ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಜೆಕೆ ಕೃಷ್ಣಾರೆಡ್ಡಿ ಮನವಿ ಮಾಡಿದರು.

ಇಂದು ಚಿಂತಾಮಣಿ ತಾಲೂಕಿನ ಮುನಗನಹಳ್ಳಿ ಬಳಿಯ ಕಡಪ ಹೈವೇ ರಸ್ತೆಯಲ್ಲಿರುವ ಜೆಕೆ ಭವನದಲ್ಲಿ ಆಯೋಜಿಸಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ರಾಜ್ಯದಲ್ಲಿ ಜೆಡಿಎಸ್ ಸೊರಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೇರು ಮಟ್ಟದಿಂದ ಸಂಘಟನೆ ಮಾಡಲು ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯದಲ್ಲಿ ಜನರೊಂದಿಗೆ ಜನತಾದಳ ಯಾತ್ರೆ ನಡೆಸುತ್ತಿದ್ದಾರೆ ಎಂದು ವಿವರಿಸಿದರು.

ಜುಲೈ 11ಕ್ಕೆ ತಾಲೂಕಿನ ಸಂತೇಕಲಹಳ್ಳಿಯಿಂದ ಕೈವಾರದ ಶ್ರೀ ಯೋಗಿ ನಾರಾಯಣ ಮಠಕ್ಕೆ ನಿಖಿಲ್ ಕುಮಾರಸ್ವಾಮಿ ರವರು ಭೇಟಿ ನೀಡಿ ತದನಂತರ ಚಿನ್ನಸಂದ್ರದಿಂದ ಜೆಕೆ ಭವನಕ್ಕೆ ಬಂದು ಸಭೆ ನಡೆಸಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚಿಂತಾಮಣಿ | ಅಧಿಕಾರಿಗಳ ಕಣ್ತಪ್ಪಿಸಿ ಮುನಗನಹಳ್ಳಿ ಕೆರೆಯ ಮಣ್ಣು ಅಕ್ರಮ ‌ಸಾಗಣೆ: ಕ್ರಮಕ್ಕೆ ಒತ್ತಾಯ

ಈ ವರ್ಷದ ಕೊನೆಯಲ್ಲಿ ಬರುವ ಗ್ರಾಮ ಪಂಚಾಯಿತಿ, ತಾಲೂಕು ಜಿಲ್ಲಾ ಮತ್ತು ಪಂಚಾಯಿತಿ ಚುನಾವಣೆಗೆ ಕಾರ್ಯಕರ್ತರನ್ನು ಮಾನಸಿಕವಾಗಿ ಸಜ್ಜುಗೊಳಿಸುವ ನಿಟ್ಟಿನಲ್ಲಿ ಜನರೊಂದಿಗೆ ಜನತಾದಳ ಯಾತ್ರೆ ಪೂರಕವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾದ ಬೈರೆಡ್ಡಿ,ನಗರಸಭಾ ಸದಸ್ಯರಾದ ಮುರಳಿ,ಮುಖಂಡರಾದ ಮಧು,ಸೇರಿದಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...