ಚಿಂತಾಮಣಿ | ಪಿಎಂಶ್ರೀ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬರಹ ಪುಸ್ತಕ, ಲೇಖನಿ ಸಾಮಗ್ರಿಗಳ ವಿತರಣೆ

Date:

ಚಿಂತಾಮಣಿ ತಾಲೂಕಿನ ಕೆ ದೇವಗಾನಹಳ್ಳಿ ಗ್ರಾಮದವರಾದ ಡಿ ಎನ್ ಶೇಖರ್ ರೆಡ್ಡಿಯವರು ತಮ್ಮ ತಂದೆಯಾದ ದಿ. ಡಿ ಎಂ ನಾರಾಯಣ್ ರೆಡ್ಡಿಯಾದ 7ನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಚಿಲಕಲನೆರ್ಪು ಹೋಬಳಿಯ ಬುರುಡುಗುಂಟೆ ಗ್ರಾಮದ ಪಿಎಂಶ್ರೀ ಸರ್ಕಾರಿ ಹಿರಿಯ ಆಂಗ್ಲ ಮತ್ತು ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರಹ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ವಿತರಣೆ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ.

ಸುಮಾರು ವರ್ಷಗಳಿಂದ ಡಿ ಎನ್ ಶೇಖರರೆಡ್ಡಿರವರು ರಾಜ್ಯದ ವಿವಿಧ ಭಾಗಗಳಲ್ಲಿ ಸಮಾಜ ಸೇವೆ ಮಾಡಿಕೊಂಡು ಬರುತ್ತಿದ್ದು. ಮುಂದುವರೆದ ಭಾಗವಾಗಿ ಇವರ ಸೇವೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳಲ್ಲಿ ಹೆಚ್ಚಾಗಿ ನಡೆಯುತ್ತಿದೆ.

ಬುರುಡುಗುಂಟೆ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಡಿ ಎನ್ ಶೇಖರ್ ರೆಡ್ಡಿರವರು, “ಸರ್ಕಾರ ನೀಡುವ ಸೌಲಭ್ಯಗಳ ಜತೆಗೆ ದಾನಿಗಳು ನೀಡುವ ಎಲ್ಲ ಸೌಲಭ್ಯಗಳನ್ನು ಪಡೆದು ಶೈಕ್ಷಣಿಕ ಪ್ರಗತಿಯನ್ನು ಹೊಂದಿ ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಮುಂದಿನ ಸತ್ಪ್ರಜೆಗಳಾಗಿ ರೂಪುಗೊಂಡು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದೇ ಸರ್ಕಾರದ ಉದ್ದೇಶ: ಸಚಿವ ಎಸ್ ಮಧು ಬಂಗಾರಪ್ಪ

“ವಿದ್ಯಾರ್ಥಿಗಳು ಉತ್ತಮವಾಗಿ ಕಲಿಯುವ ಮೂಲಕ ಸಮಾಜ, ಹೆತ್ತವರು ಹಾಗೂ ಗುರು ಹಿರಿಯರ ಋಣವನ್ನು ತೀರಿಸಬೇಕು” ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಶಿರಿಷಾ, ಡಾ. ಶ್ರೀಕಾಂತ್, ರಾಜೇಶ್, ಮುಖ್ಯ ಶಿಕ್ಷಕ ಶಬೀರ್ ಪಾಷಾ, ಮುಖಂಡರಾದ ಕೃಷ್ಣಾರೆಡ್ಡಿ, ಅಶೋಕ್, ಶಿಕ್ಷಕರಾದ ವೆಂಕಟರೆಡ್ಡಿ, ಸುಮಾ, ಫರಹತ್ ಭಾನು, ಗುರುಪ್ರಸಾದ್, ನರೇಂದ್ರ, ಚಂದ್ರು, ಪೊಲೀಸ್ ಸಿಬ್ಬಂದಿ ರಾಮಕೃಷ್ಣ, ಪದ್ಮಾವತಿ, ಗಾಯಿತ್ರಿ, ವೆಂಕಟೇಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...