ಚಿಂತಾಮಣಿ | ಗುಡಿಸಲಹಳ್ಳಿ ಗ್ರಾಮಕ್ಕೆ ಸ್ಮಶಾನ ಮಂಜೂರಿಗೆ ಮನವಿ; ತಹಶೀಲ್ದಾರ್‌ ಸ್ಥಳ ಭೇಟಿ

Date:

ಚಿಂತಾಮಣಿ ತಾಲೂಕಿನ ಮುರುಗಮಲ್ಲ ಹೋಬಳಿಯ ಗುಡಿಸಲಹಳ್ಳಿ ಗ್ರಾಮದಲ್ಲಿ ಸ್ಮಶಾನ ಮಂಜೂರು ಮಾಡುವಂತೆ ಹಾಗೂ ಸ್ಮಶಾನಕ್ಕೆ ದಾರಿ ಮಾಡಿಕೊಡುವಂತೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದ ಹಿನ್ನೆಲೆ ಗ್ರಾಮಕ್ಕೆ ತಾಲೂಕು ದಂಡಾಧಿಕಾರಿ ಸುದರ್ಶನ್‌ ಯಾದವ್‌ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಳಿಕ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ ಸರ್ವೆ ಕಾರ್ಯ ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗ್ರಾಮದ ಮಂಜುನಾಥ್ ಮಾತನಾಡಿ, “ಗ್ರಾಮದ ಸರ್ವೆ ನಂ:39ರ ಜಮೀನಿನಲ್ಲಿ ಸದ್ಯ ಮೃತಪಟ್ಟವರ ಶವಗಳನ್ನು ಹೂಳಲಾಗುತ್ತಿದ್ದು, ಸದರಿ ಜಮೀನಿನಲ್ಲಿ ಸ್ಮಶಾನಕ್ಕೆ ಜಮೀನು ಮಂಜೂರು ಮಾಡಿಕೊಟ್ಟು ದಾರಿ ಮಾಡಿಕೊಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಲಿಖಿತ ಮೂಲಕ ಮನವಿ ಸಲ್ಲಿಸಲಾಗಿದೆ. ಅಧಿಕಾರಿಗಳು ಭೇಟಿ ನೀಡಿ ಸ್ಮಶಾನಕ್ಕೆ ಜಾಗ ಮಾಡಿಕೊಡುವ ಭರವಸೆ ನೀಡಿದ್ದಾರೆ” ಎಂದರು.

ಇದನ್ನೂ ಓದಿ: ಚಿಂತಾಮಣಿ | ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಂದ ರಸ್ತೆತಡೆ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...