ಚಿಂತಾಮಣಿ | ಕುರಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್‌

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರಹಳ್ಳಿ, ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುರಿ ಕಳ್ಳತನ ಮಾಡುತ್ತಿದ್ದ ಐದು ಮಂದಿ ಕಳ್ಳರ ಗ್ಯಾಂಗ್‌ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೆಂಚಾರಹಳ್ಳಿ, ಬಟ್ಲಹಳ್ಳಿ, ಪೊಲೀಸ್ ಠಾಣಾ ವ್ಯಾಪ್ತಿಯ ಹಲವು ಕಡೆಗಳಲ್ಲಿ ಕುರಿಗಳು ಕಳ್ಳತನವಾಗಿರುವ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸರು ಕುರಿ ಕಳ್ಳರನ್ನು ಸೆರೆಹಿಡಿಯಲು ಜಿಲ್ಲಾ ರಕ್ಷಣಾಧಿಕಾರಿ ಕುಶಾಲ್ ಚೌಕ್ಸೆ, ಅಪರ ಪೊಲೀಸ್ ಅಧೀಕ್ಷಕ ರಾಜಾ ಇಮಾಮ್ ಖಾಸೀಂ, ಚಿಂತಾಮಣಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಮುರಳಿಧರ ನೇತೃತ್ವದ ತಂಡ ಯೋಜನೆ ಹಾಕಿತ್ತು.

ಪೊಲೀಸ್‌ ಅಧಿಕಾರಿಗಳ ತಂಡದ ಯೋಜನೆಯಂತೆ ಅಭಿಯಾನ ಆರಂಭಿಸಿದ್ದು, ಕುರಿಗಳನ್ನು ಕಳ್ಳತನ ಮಾಡುತ್ತಿದ್ದ ಬೆಂಗಳೂರಿನ ಬಿಟಿಎಂ ಲೇಔಟ್‌ನ ಹೊಸ ಗುರಪ್ಪನ ಪಾಳ್ಯದ ಇರ್ಫಾನ್ ಪಾಷ(30), ಬೊಮ್ಮನಹಳ್ಳಿ 2ನೆ ಕ್ರಾಸ್‌ ಸೈಯದ್ ನವೀದ್(25), ಜೆಪಿನಗರದ ಸಯ್ಯದ್ ಮಾಷನ್(25) ಶಿಕಾರಿಪಾಳ್ಯದ ಸಯ್ಯದ್ ವಸೀಂ(25) ಮತ್ತು ಸಯ್ಯದ್ ವಸೀಂ(23) ಎಂಬ ಅರೋಪಿಗಳನ್ನು ಬಂಧಿಸಿ ಅವರಿಂದ ₹2.50 ಲಕ್ಷ ಹಣ, ವೋಕ್ಸ್ ವ್ಯಾಗನ್ ವೆಂಟೋ ಕಾರು ಹಾಗೂ 5 ಮೊಬೈಲ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮುಸ್ಲಿಂ ಬಾಂಧವ್ಯ ವೇದಿಕೆಯಿಂದ ಸಿಎಂ ಭೇಟಿ; 27 ಅಂಶಗಳ ಕಾರ್ಯಸೂಚಿ ಹಸ್ತಾಂತರ

ಈ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಲಾಘನೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...