ಚಿಂತಾಮಣಿ | ಮುರುಗಮಲ್ಲ ದರ್ಗಾದ ಮಹಾಗಂಧೋತ್ಸವಕ್ಕೆ ಚಾಲನೆ

Date:

ಹಿಂದೂ ಮುಸ್ಲಿಂರ ಭಾವೈಕ್ಯತೆಯ ಕೇಂದ್ರ ಹಾಗೂ ಪವಿತ್ರ ಯಾತ್ರಾಸ್ಥಳವಾಗಿರುವ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಹಜರತ್ ಅಮ್ಮಾಜಾನ್ ಬಾವಾಜಾನ್ ದರ್ಗಾದ ಮಹಾಗಂಧೋತ್ಸವ ಇದೇ ಸೆಪ್ಟೆಂಬರ್ 4 (ಗುರುವಾರ) ರಿಂದ 6ರವರೆಗೆ ಅದ್ದೂರಿಯಾಗಿ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಲಿರುವ ಹಿನ್ನೆಲೆ ದರ್ಗಾದ ಆಡಳಿತ ಮಂಡಳಿ ವತಿಯಿಂದ ಸಕಲ ಸಿದ್ಧತೆ ಮಾಡಿಕೊಂಡಿದೆ.

ಉರುಸ್ ಕಾರ್ಯಕ್ರಮದಲ್ಲಿ ಸುಮಾರು ಒಂದು ಲಕ್ಷಕ್ಕಿಂತ ಹೆಚ್ಚು ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇರುವ ಕಾರಣ ವಕ್ಫ್ ಬೋರ್ಡ್ ನಿಂದ ನೀರಿನ ವ್ಯವಸ್ಥೆ, ಸ್ವಚ್ಛತೆ, ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯ, ಆರೋಗ್ಯ ತಪಾಸಣಾ ಶಿಬಿರ ಸೇರಿದಂತೆ ಎಲ್ಲಾ ಮೂಲ ಸೌಕರ್ಯಗಳನ್ನು ಭಕ್ತಾದಿಗಳಿಗೆ ಕಲ್ಪಿಸಲು ವಕ್ಫ್ ಬೋರ್ಡ್ ಅಧಿಕಾರಿಗಳು ಸಿಬ್ಬಂದಿ, ದರ್ಗಾ ಕಮಿಟಿ, ಊರಿನ ಹಿಂದೂ ಮುಸ್ಲಿಂ ಬಾಂಧವರು, ಪೊಲೀಸ್ ಇಲಾಖೆ,‌ ಅಗ್ನಿಶಾಮಕ ದಳ, ಆರೋಗ್ಯ ಇಲಾಖೆಯ ಅಧಿಕಾರಿಗಳು, ಬೆಸ್ಕಾಂ ಇಲಾಖೆ, ಕಂದಾಯ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿವೆ.

ಇಂದು ಹಜರತ್ ಗೌಸ್ ಪಾಕ್ ರವರ ಧ್ವಜ ಹಾರಿಸುವ ಕಾರ್ಯಕ್ರಮ, 5 ರಂದು ಊರಿನ ಗಂಧೋತ್ಸವ ಹಾಗೂ 6ರ ಶನಿವಾರ ವಕ್ಫ್ ಬೋರ್ಡ್ ವತಿಯಿಂದ ಗಂಧೋತ್ಸವ ಹಾಗೂ ರಾತ್ರಿ 10 ಗಂಟೆಗೆ ಕವಾಲಿ ಕಾರ್ಯಕ್ರಮ ನಡೆಯಲಿದ್ದು, ಈ ಮೂರು ದಿನಗಳ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಅಮ್ಮಾಜಾನ್ ಬಾವಾಜಾನ್ ರವರ ಕೃಪೆಗೆ ಪಾತ್ರರಾಗಬೇಕೆಂದು ವಕ್ಫ್ ಸಂಸ್ಥೆ ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಚಿಂತಾಮಣಿ | ಆರು ತಿಂಗಳ ಹಿಂದೆಯೇ ಚಾಲನೆ ಸಿಕ್ಕರೂ ಆಮೆಗತಿಯಲ್ಲಿ ಸಾಗುತ್ತಿರುವ ಚೇಳೂರು ರಸ್ತೆ ಕಾಮಗಾರಿ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...