ಚಿಂತಾಮಣಿ | ದ್ವಿಚಕ್ರ ವಾಹನಕ್ಕೆ ಬೊಲೇರೊ ಡಿಕ್ಕಿ: ಮಹಿಳೆ ಸಾವು

Date:

ಬೊಲೇರೊ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಂಡುಪಾಳ್ಯ ಗೇಟ್ ಬಳಿ ಸಂಭವಿಸಿದೆ.

ಬೊಲೇರೊ ವಾಹನದಲ್ಲಿ ಮದನಪಲ್ಲಿ ಕಡೆಯಿಂದ ಬಂದಿದ್ದ ಆಂಧ್ರಪ್ರದೇಶದ ಕದರಿ ಮೂಲದವರು ವಿಜಯಪುರ ಕಡೆಗೆ ಹೋಗುತ್ತಿದ್ದರು.

ದ್ವಿಚಕ್ರ ವಾಹನದಲ್ಲಿ ಆಯಾಝ್‌(33) ಹಾಗೂ ತನ್ನ ಹೆಂಡತಿ ತರನ್ನುಂ (22ವರ್ಷ)ಇಬ್ಬರು ಬೇತಮಂಗಲ ಕಡೆ ಹೋಗುತ್ತಿದ್ದು, ಬೊಲೇರೊ ವಾಹನ ಚಾಲಕ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತರನ್ನುಂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದ್ವಿಚಕ್ರ ವಾಹನ ಸವಾರ ಆಯಾಝ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಬೊಲೇರೊ ವಾಹನದಲ್ಲಿದ್ದ ಕದರಿ ಮೂಲದ ಅದಲ್ಲಪ್ಪ ಬೀದಿಯ ಫಕ್ರುದ್ದೀನ್, ಆಝಾದ್, ಜಬೀನಾ, ಹಮೀದ್, ಶೋಯೆಬ್, ಸಲೀಮಾ, ಶಕೀರಾ, ಶಬ್ನಂ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಂತಾಮಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಗೊತ್ತಾಗಿದೆ.

ಇದನ್ನು ಓದಿದ್ದೀರಾ? ರಾಯಚೂರು | ಆನ್‌ಲೈನ್‌ ಬೆಟ್ಟಿಂಗ್ ಗೇಮ್‌ನಿಂದ ಯುವಕರು ಬೀದಿಪಾಲು: ನಿಷೇಧಕ್ಕೆ ಆಗ್ರಹಿಸಿ ಮನವಿ

ಗಂಭೀರ ಗಾಯಗೊಂಡಿರುವ ಅಯಾಝ್ ಅವರನ್ನು ಕೋಲಾರದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ವಿಷಯ ತಿಳಿದ ತಕ್ಷಣ ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...