ಚಿಟಗುಪ್ಪ | ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಆಚರಣೆ

Date:

ಬೀದರ್‌ ಜಿಲ್ಲೆಯ ಚಿಟಗುಪ್ಪ ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಆರ್ಬಿಟ್ ಸಂಸ್ಥೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಜರುಗಿತು.

ಚಿಟಗುಪ್ಪ ತಾಲೂಕು ಮುಖ್ಯ ವೈದ್ಯಾಧಿಕಾರಿ ಡಾ.ವಿಜಯಕುಮಾರ್ ಮಾತನಾಡಿ, ʼಮಾನಸಿಕ ಅಸ್ವಸ್ಥ ಎಂಬ ರೋಗಕ್ಕೆ ಸೂಕ್ತ ಚಿಕಿತ್ಸೆ ಲಭ್ಯವಿದೆ. ಮಾನಸಿಕ ರೋಗಿಗಳು ಯಾವುದೇ ಮೌಢ್ಯಾಚರಣೆಗಳಿಗೆ ಬಲಿಯಾಗದೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾಗಬಹುದುʼ ಎಂದು ಸಲಹೆ ನೀಡಿದರು.

ಆರ್ಬಿಟ್ ಸಂಸ್ಥೆಯ ನವಜೀವನ ಕಾರ್ಯಕ್ರಮ ಸಂಯೋಜಕ ಪ್ರವೀಣ ಪ್ರಾಸ್ತಾವಿಕವಾಗಿ ಮಾತನಾಡಿ, ʼಆರ್ಬಿಟ್ ಸಂಸ್ಥೆಯು ಸುಮಾರು 30 ವರ್ಷಗಳಿಂದ ಜಿಲ್ಲೆಯಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಸಮಾಜ ಸೇವೆಗೈಯುತ್ತಿದೆ. 2018 ರಿಂದ ಅಜೀಂ ಪ್ರೇಮ್‌ಜಿ ಹಾಗೂ 2023ರಲ್ಲಿ ಎಲ್ಎಲ್ಎಫ್ ಫೌಂಡೇಶನ್ ಸಹಯೋಗದಿಂದ ಜಿಲ್ಲೆಯ ಮಾನಸಿಕ ಅಸ್ವಸ್ಥರಿಗಾಗಿ ಕಾರ್ಯನಿರ್ವಹಿಸುತ್ತಿದೆ. ಮಾನಸಿಕ ರೋಗದಿಂದ ಗುಣಮುಖ ಹೊಂದಿದ ಫಲಾನುಭವಿಗಳು ಉಪಜೀವನ ನಡೆಸಲು ವಿವಿಧ ತರಬೇತಿ ಒದಗಿಸಿ ಸಹಕಾರ ನೀಡುತ್ತಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್ಬಿಟ್ ಸಂಸ್ಥೆಯ ಸಹ ನಿರ್ದೇಶಕ ಫಾದರ್ ವಿಜಯಕುಮಾರ್ ಹಾಗೂ ತಾಳಮಡಗಿ ಕೇಂದ್ರದ ನಿರ್ದೇಶಕ ಫಾದರ್ ಜಾರ್ಜ್ ಮಾತನಾಡಿ, ʼದೈಹಿಕ, ಮಾನಸಿಕವಾಗಿ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಎಲ್ಲರೂ ಆರೋಗ್ಯದ ಬಗ್ಗೆ ಎಚ್ಚರವಹಿಸಿ ಬದುಕು ನಡೆಸಬೇಕುʼ ಎಂದರು.

ಈ ಸುದ್ದಿ ಓದಿದ್ದೀರಾ? ರೇಣುಕಸ್ವಾಮಿ ಹತ್ಯೆ ಪ್ರಕರಣ: ನಾಳೆ ದರ್ಶನ್ ಜಾಮೀನು ತೀರ್ಪು ಪ್ರಕಟ

ಕಾರ್ಯಕ್ರಮದಲ್ಲಿ ಆರ್ಬಿಟ್ ಸಂಸ್ಥೆಯ ಸಿಬ್ಬಂದಿಗಳಾದ ರೀಟಾ, ಪ್ರೀತಿ, ಹನುಮಂತ್ ,ಅರುಣ್ ಕುಮಾರ್ ಹಾಗೂ ಆಪ್ತಸಮಲೋಚಕ ಅರುಣ್ ಕೋಟೆ ಹಾಗೂ ಸರ್ಕಾರಿ ಆಸ್ಪತ್ರೆಯ ನರ್ಸಿಂಗ್ ಹಿರಿಯ ಅಧಿಕಾರಿ ದೇವೇಂದ್ರ ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...