ಚೈತ್ರಾ-ಆಕೆಯ ಪತಿ ಇಬ್ಬರೂ ಕಳ್ಳರು: ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ ಚೈತ್ರಾ ಕುಂದಾಪುರ ತಂದೆ

Date:

ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ ಮೊನ್ನೆಯಷ್ಟೇ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೈತ್ರಾ ಕುಂದಾಪುರ ಮದುವೆಗೆ ಬಿಗ್‌ಬಾಸ್ ಸ್ಪರ್ಧಿಗಳು ಆಗಮಿಸಿ ಶುಭಹಾರೈಸಿದ್ದರು.

ಆದ್ರೆ ಚೈತ್ರಾ ಕುಂದಾಪುರ ಅವರ ಮದುವೆಗೆ ತಂದೆ ಬಂದಿರಲಿಲ್ಲ. ಆದರೀಗ ದಿಢೀರ್ ಅಂತ ಮಾಧ್ಯಮಗಳ ಮುಂದೆ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ ಪ್ರತ್ಯಕ್ಷರಾಗಿದ್ದಾರೆ. ಅಲ್ಲದೇ ಮಾಧ್ಯಮದ ಮುಂದೆ ಚೈತ್ರಾ ಕುಂದಾಪುರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಮಾತಾಡಿದ ಅವರು, ಆಕೆ ನನ್ನನ್ನು ಮದುವೆಗೆ ಕರೆದಿಲ್ಲ. ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೈತ್ರಾ ಬಿಗ್‌ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಬೀಗ ಹಾಕಿ ಬಿಗ್‌ಬಾಸ್‌ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥವಾಗಿದ್ದೇನೆ. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ಆಕೆ ನನ್ನ ಜೀವನದಲ್ಲಿ ಬರಲೇಬಾರದು ಜನ ಆಕೆಗೆ ಮನ್ನಣೆ ಕೊಡಬಾರದು. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ನನ್ನ ತಂದೆ ಬಾಲ ನಾಯ್ಕ ಗೌರವಾನ್ವಿತ ವ್ಯಕ್ತಿಯಾಗಿದ್ದರು ಅಂತ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...