ಚಿತ್ರದುರ್ಗ | ʼಸುಸ್ಥಿರ, ಉತ್ತಮ ಜೀವನೋಪಾಯಕ್ಕೆ ಜೀವವೈವಿಧ್ಯತೆಯ ಜ್ಞಾನ ಅಗತ್ಯʼ

Date:

ಸುಸ್ಥಿರ, ಉತ್ತಮ ಜೀವನೋಪಾಯಕ್ಕಾಗಿ ಜೀವವೈವಿಧ್ಯತೆಯ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅಭಿಪ್ರಾಯ ಪಟ್ಟರು.

ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಔಷಧಿ ಗಿಡಮೂಲಿಕೆ ಪ್ರಾಧಿಕಾರ ಮತ್ತು ಕರ್ನಾಟಕ ಜೀವವೈವಿಧ್ಯ ಮಂಡಳಿ, ಚಿತ್ರದುರ್ಗ  ಅರಣ್ಯ ವಿಭಾಗ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಔಷಧಿ ಸಸ್ಯ ಹಾಗೂ ಜೀವವೈವಿದ್ಯದ ಕುರಿತು ವಿಭಾಗ ಮಟ್ಟದ ಅರಣ್ಯ ಅಧಿಕಾರಿಗಳ ಮತ್ತು ಮುಂಚೂಣಿ ಸಿಬ್ಬಂದಿಯ ಸಾಮಥ್ಯ ವರ್ಧನೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜೀವವೈವಿಧ್ಯವು ಭೂಮಿಯ ಮೇಲಿನ ಜೀವನದ ಶ್ರೀಮಂತಿಕೆ ಮತ್ತು ವೈವಿಧ್ಯತೆ ವಿವರಿಸುತ್ತದೆ. ಇದು ನಮ್ಮ ಗ್ರಹದ ಅತ್ಯಂತ ಸಂಕೀರ್ಣ ಮತ್ತು ಪ್ರಮುಖ ಲಕ್ಷಣವಾಗಿದೆ. ಜೀವವೈವಿಧ್ಯವಿಲ್ಲದೇ ಜೀವನ ಉಳಿಯುವುದಿಲ್ಲ. ಜೀವವೈವಿಧ್ಯವು ಪರಿಸರ ಮತ್ತು ಆರ್ಥಿಕ ಮಹತ್ವವನ್ನು ಹೊಂದಿದೆ. ಇದು ನಮಗೆ ಪೋಷಣೆ, ವಸತಿ, ಇಂಧನ, ಬಟ್ಟೆ ಮತ್ತು ಹಲವಾರು ಇತರ ಸಂಪನ್ಮೂಲಗಳನ್ನು ಒದಗಿಸುತ್ತದೆ. ಇದು ಪ್ರವಾಸೋದ್ಯಮದ ಮೂಲಕ ವಿತ್ತೀಯ ಪ್ರಯೋಜನಗಳನ್ನು ಹೊರತೆಗೆಯುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿತ್ರದುರ್ಗ ಜಿಲ್ಲೆಯು ಜೀವವೈವಿದ್ಯತೆ ಹೊಂದಿದೆ. ಹಲವಾರು ಔಷಧಿಯ ಸಸ್ಯಗಳು, ಕುರುಚಲು ಸಸ್ಯವರ್ಗ, ದಟ್ಟ ಅರಣ್ಯ ಇವೆ. ಇವೆಲ್ಲವನ್ನೂ ಸಂರಕ್ಷಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಟಿ.ರಾಜಣ್ಣ ಮಾತನಾಡಿ, ಜೀವವೈವಿಧ್ಯತೆ ಸಂರಕ್ಷಿಸುವ ಅಗತ್ಯತೆ ಕುರಿತು ಕರೆ ನೀಡಿದರು. ಸಾಮಾಜಿಕ ಅರಣ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರೀಶ್ ಮಾತನಾಡಿ, ಹಲವಾರು ಔಷಧಿಯ ಸಸ್ಯಗಳು ಅಳಿವಿನಂಚಿಗೆ ತಲುಪಿದ್ದು ಅವುಗಳನ್ನು ಉಳಿಸುವ ಪ್ರಯತ್ನ ಮಾಡಬೇಕು ಎಂದರು.

ಆಯುಷ್ ವಿಭಾಗದ ವೈದ್ಯಾಧಿಕಾರಿ ಡಾ.ಟಿ.ಶಿವಕುಮಾರ್ ಅವರು ಜೋಗಿಮಟ್ಟಿ ಅರಣ್ಯದಲ್ಲಿ ಬರುವ ಔಷಧಿಯ ಸಸ್ಯಗಳ ಪರಿಚಯ ಮಾಡಿಕೊಟ್ಟರು. ಸಂಪನ್ಮೂಲ ವ್ಯಕ್ತಿ ಡಾ.ನಿರಂಜನ್ ಅವರು ಆಡುಮಲ್ಲೇಶ್ವರ ಸ್ಥಳದ ಸುತ್ತಮುತ್ತಲಿರುವ ಔಷಧಿಯ ಸಸ್ಯಗಳ ಪ್ರಾತ್ಯಕ್ಷಿಕೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕರ್ನಾಟಕ ಜೀವವೈವಿದ್ಯ ಮಂಡಳಿ ಸದಸ್ಯ ಕಾರ್ಯದರ್ಶಿ ಜಗತ್ ರಾಮ್, ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಿ.ಎ.ಸುದರ್ಶನ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಜೆ.ಗೋವರ್ಧನ್, ಜಿಲ್ಲಾ ಆಯುಷ್‌ ಅಧಿಕಾರಿ ಡಾ.ಚಂದ್ರಕಾಂತ ನಾಗಸಮುದ್ರ, ಬಳ್ಳಾರಿ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...