ಚಿತ್ರದುರ್ಗ ಅಪಘಾತ : ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಕ್ಕೆ ಹೊರಟಿದ್ದ 42 ವಿದ್ಯಾರ್ಥಿಗಳು!

Date:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 48ರ ಗೊರ್ಲತ್ತು ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಭೀಕರ ಡಿಕ್ಕಿಯಲ್ಲಿ 9ಕ್ಕೂ ಹೆಚ್ಚು ಪ್ರಯಾಣಿಕರು ಬೆಂಕಿಗಾಹುತಿಯಾಗಿ ಸಜೀವ ದಹನವಾಗಿದ್ದಾರೆ. ಈ ಘಟನೆಯ ವೇಳೆ 42 ಶಾಲಾ ವಿದ್ಯಾರ್ಥಿಗಳು ಕೂದಲೆಳೆಯ ಅಂತರದಲ್ಲಿ ಪಾರಾಗಿರುವ ವಿವರ ತಿಳಿದುಬಂದಿದೆ.

ಈ ಬಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಹಿತಿ ನೀಡಿರುವ ಐಜಿಪಿ ರವಿಕಾಂತೇಗೌಡ, “ಸೀಬರ್ಡ್ ಬಸ್ ಹಾಗೂ ಲಾರಿಯ ನಡುವೆ ನಡೆದ ಅಪಘಾತದ ಸಂದರ್ಭದಲ್ಲಿ ಸೀಬರ್ಡ್ ಬಸ್‌ಗೆ ಸಮಾನಾಂತರವಾಗಿ ಪ್ರವಾಸಕ್ಕೆ ಹೊರಟಿದ್ದ ಶಾಲಾ ಮಕ್ಕಳ ಬಸ್ ಕೂಡ ಇತ್ತು. ಆದರೆ, ಆ ಬಸ್‌ಗೂ ಅಪಘಾತದರೂ ಕೂಡ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ” ಎಂದು ತಿಳಿಸಿದ್ದಾರೆ.

“ಶಾಲಾ ಮಕ್ಕಳು ಬೆಂಗಳೂರಿನ ಟಿ ದಾಸರಹಳ್ಳಿಯಿಂದ ದಾಂಡೇಲಿಗೆ ಪ್ರವಾಸ ಹೊರಟಿದ್ದರು. ಒಟ್ಟು 42 ಮಕ್ಕಳು ಬಸ್‌ನಲ್ಲಿದ್ದರು. ಅಪಘಾತದ ವೇಳೆ ಶಾಲಾ ಮಕ್ಕಳ ಬಸ್ ಕೂಡ ಸಮಾನಾಂತರವಾಗಿ ಚಲಿಸುತ್ತಿತ್ತು. ಅಪಘಾತದ ರಭಸಕ್ಕೆ ಶಾಲಾ‌ ಮಕ್ಕಳಿದ್ದ ಬಸ್ ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿ ದಾಟಿ ಇನ್ನೊಂದು ಬದಿಯ ರಸ್ತೆಯ ಚರಂಡಿ ಬಳಿಗೆ ಬಿದ್ದಿದೆ. ಅದೃಷ್ಟವಶಾತ್ ಶಾಲಾ ಮಕ್ಕಳಿದ್ದ ಬಸ್‌ನಲ್ಲಿದ್ದ ಯಾರಿಗೂ ಯಾವುದೇ ಗಾಯ‌ ಕೂಡ ಆಗಿಲ್ಲ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಇನ್ನೊಂದು ಬಸ್‌ನ ಮೂಲಕ ತಮ್ಮ ಪ್ರವಾಸವನ್ನು ದಾಂಡೇಲಿಗೆ ಮುಂದುವರಿಸಿದ್ದಾರೆ. ಈ ಅಪಘಾತ ಘಟನೆಗೆ ಸಂಬಂಧಿಸಿದಂತೆ ಶಾಲಾ ಬಸ್‌ನ ಚಾಲಕ ಪ್ರತ್ಯಕ್ಷ ಸಾಕ್ಷಿ. ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುವುದು” ಎಂದು ಐಜಿಪಿ ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೀ ಬರ್ಡ್ ಬಸ್ ಹಾಗೂ ಕಂಟೇನರ್ ಲಾರಿಯ ನಡುವೆ ನಡೆದ ಅಪಘಾತ ಬಹಳ ದುರದೃಷ್ಟಕರ. ಈಗಾಗಲೇ 9 ಶವಗಳನ್ನು ಬಸ್‌ನಿಂದ ಹೊರತೆಗೆಯಲಾಗಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಪೈಕಿ ಬಹುತೇಕ ಎಲ್ಲರೂ ಆನ್ ಲೈನ್ ಮೂಲಕ ಟಿಕೆಟ್ ಕಾಯ್ದಿರಿಸಿದ್ದರು. ಹಾಗಾಗಿ, ಮೊಬೈಲ್ ನಂಬರ್ ಅನ್ನು ಪಡೆಯಲಾಗುತ್ತಿದೆ. ಮೃತಪಟ್ಟವರ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಆದಷ್ಟು ಶೀಘ್ರವಾಗಿ ಮುಗಿಸುತ್ತೇವೆ. ಎಲ್ಲ ರೀತಿಯ ತನಿಖೆಯನ್ನು ನಡೆಸಲಾಗುವುದು” ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...