ಚಿತ್ರದುರ್ಗ | ತುರ್ತು ಪರಿಸ್ಥಿತಿ ಹೇರಿ 50 ವರ್ಷ; ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ

Date:

ದೇಶಕ್ಕೆ ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿ 50 ವರ್ಷ ತುಂಬಿದ್ದು, ಕಾಂಗ್ರೆಸ್ ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ. ಇಂದಿರಾ ಗಾಂಧಿ ಮಾಧ್ಯಮದವರಿಗೆ ನಿರ್ಬಂಧ ಹೇರಿ ಪ್ರಜಾಪ್ರಭುತ್ವವನ್ನು ದಮನ ಮಾಡಿದ್ದಾರೆ ಎಂದು ಆರೋಪಿಸಿ ಚಿತ್ರದುರ್ಗ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸೋಮವಾರ ಕಾಂಗ್ರೆಸ್‌ ಕಚೇರಿಗೆ ಭಿತ್ತಿಪತ್ರ ಅಂಟಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿದ ಜಿಲ್ಲಾ ಬಿಜೆಪಿ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗುತ್ತ ತುರ್ತು ಪರಿಸ್ಥಿತಿ ಹೇರಿಕೆ ಘಟನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

“ಇಂದಿರಾ ಗಾಂಧಿ ಅಧಿಕಾರದಲ್ಲಿದ್ದಾಗ ದೇಶಕ್ಕೆ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ದೇಶದ ದಿಕ್ಕು ತಪ್ಪಿಸಿದ್ದಾರೆ. ಅಲ್ಲದೆ, ಇದು ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ. ಅಲ್ಲದೆ ಇಂದಿರಾ ಗಾಂಧಿ ಅವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಮನಬಂದಂತೆ ಅಧಿಕಾರ ಚಲಾಯಿಸಿ ಜನರನ್ನು ದಯನೀಯ ಪರಿಸ್ಥಿತಿಗೆ ತಂದಿದ್ದರು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಆರಕ್ಷಣಾ ಇಲಾಖೆ ಒನಕೆ ಓಬವ್ವ ವೃತ್ತದಲ್ಲಿನ ಕಾಂಗ್ರೆಸ್ ಕಚೇರಿಗೆ ಬಿಗಿಭದ್ರತೆಯನ್ನು ಒದಗಿಸಲಾಗಿತ್ತು. ಪೊಲೀಸರು ಪ್ರತಿಭಟನಾಕಾರರು ಕಾಂಗ್ರೆಸ್ ಕಚೇರಿ ತಲುಪುವುದಕ್ಕೆ ಬಿಡದೆ ಅಡ್ಡಗಟ್ಟಿ, ಸುಮಾರು 15ಕ್ಕಿಂತ ಹೆಚ್ಚು ಜನರನ್ನು ಬಂಧಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸ್ಲಂ ನಿವಾಸಿಗಳ ಕುಂದುಕೊರತೆ ಸಭೆ ನಿಗದಿಗೆ ಒತ್ತಾಯ

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎ ಮುರುಳಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ಜಿ ಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾರೆಡ್ಡಿ, ಅರುಣಕುಮಾರಿ, ಮಿನಾಕ್ಷಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುರೇಶ್, ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ ಶಂಭು, ಮಂಜುಳಾ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...