ಚಿತ್ರದುರ್ಗ | ಪೌತಿಖಾತೆ ಮಾಡಿಕೊಡಲು ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

Date:

ಪೌತಿಖಾತೆ ಮಾಡಿಕೊಡಲು ಲಂಚ ಸ್ವೀಕರಿಸುವ ವೇಳೆ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜತೆಗೆ ಈ ಪ್ರಕರಣದಲ್ಲಿ ಲಂಚ ಸ್ವೀಕಾರಕ್ಕೆ ಸಹಕಾರ ನೀಡಿದ ಖಾಸಗಿ ವ್ಯಕ್ತಿಯನ್ನೂ ಕೂಡ ಬಂಧಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೆಲಗೇತನ ಹಟ್ಟಿಯ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಲೋಕಾಯುಕ್ತ ಬಲೆಗೆ ಸಿಕ್ಕಿರುವ ಅಧಿಕಾರಿ. ಕಚೇರಿಯಲ್ಲಿ ₹10,000 ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದಿದ್ದಾನೆ. ಇದೇ ಗ್ರಾಮದ ಚನ್ನಕೇಶವಯ್ಯ ಎಂಬುವವರಿಂದ ಆಸ್ತಿಯ ಪೌತಿಖಾತೆ ವರ್ಗಾವಣೆಗೆ ಆರೋಪಿತ ಗ್ರಾಮ ಲೆಕ್ಕಾಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಲಂಚ ನೀಡಲು ಇಷ್ಟವಿಲ್ಲದೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರು ಆಧರಿಸಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ₹10,000 ಲಂಚ ಸ್ವೀಕರಿಸುವಾಗಲೇ ನೇರವಾಗಿ ಸಿಕ್ಕಿ ಬಿದಿದ್ದಾನೆ. ಗ್ರಾಮ ಲೆಕ್ಕಾಧಿಕಾರಿಗೆ ಸಹಕಾರ ನೀಡಿದ್ದ ಖಾಸಗಿ ವ್ಯಕ್ತಿ ಬೋರೇಶ್ ಎಂಬಾತನನ್ನೂ ಕೂಡಾ ಬಂಧನ ಮಾಡಲಾಗಿದೆ. ಲೋಕಾಯುಕ್ತ ಎಸ್‌ಪಿ ವಾಸುದೇವ್ ರಾವ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪ್ರಸ್ತುತ ದಿನಗಳಲ್ಲಿ ಮಕ್ಕಳ ಆರೋಗ್ಯ ಉತ್ತಮವಾಗಿಸುವುದು ಬಹುಮುಖ್ಯ: ಕಸವನಹಳ್ಳಿ ರಮೇಶ್

ಚಿತ್ರದುರ್ಗ ಲೋಕಾಯುಕ್ತ ಎಸ್‌ಪಿ ವಾಸುದೇವರಾವ್ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದು, “ಆಸ್ತಿಯ ಪೌತಿಖಾತೆ ಬದಲಾವಣೆಗೆ ಆರೋಪಿತ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಲಂಚದ ಬೇಡಿಕೆ ಇಟ್ಟಿದ್ದರು. ಲಂಚ ನೀಡಲು ಇಷ್ಟವಿಲ್ಲದ ಚನ್ನಕೇಶವಯ್ಯ ಎನ್ನುವರು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನಮ್ಮ ತಂಡ ದಾಳಿ ಮಾಡಿದ್ದು, ಲಂಚ ಸ್ವೀಕರಿಸುತ್ತಿದ್ದ ವೇಳೆ ಆರೋಪಿತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದೇವೆ ಮತ್ತು ಪ್ರಕರಣ ದಾಖಲಿಸಿದ್ದೇವೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...