ಚಿತ್ರದುರ್ಗ | ಭಾರಿ ಮಳೆಗೆ ಕುಸಿದು ಬಿದ್ದ ಕೃಷಿ ಮಾರುಕಟ್ಟೆಯ ತಡೆಗೋಡೆ; ಹಲವೆಡೆ ಹಾನಿ

Date:

ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೃಷಿ ಮಾರುಕಟ್ಟೆಯ ತಡೆಗೋಡೆ ಕುಸಿದು ಬಿದ್ದಿರುವ ಘಟನೆ ನಡೆದಿದೆ.

ಚಳ್ಳಕೆರೆ ತಾಲೂಕಿನ ಚಳ್ಳಕೆರೆ ನಗರ ಸೇರಿದಂತೆ ತಾಲೂಕಿನ ಹಲವು ಹಳ್ಳಿಗಳು ಮತ್ತು ತಾಲೂಕಿನಾದ್ಯಂತ ಗುರುವಾರ ಸಂಜೆಯಿಂದ ಸುರಿದ ಭಾರಿ ಮಳೆಗೆ ಕೆಲವೆಡೆ ಅವಘಡ ಸೃಷ್ಟಿಯಾಗಿದ್ದು, ಮನೆಯವರಿಗೆ ಮತ್ತು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ಬಗ್ಗೆ ವರದಿಯಾಗಿದೆ.

ನಗರದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆಯ ತಡೆಗೋಡೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಗರದ ರಹೀಂ ನಗರ, ಅಭಿಷೇಕ್ ನಗರ, ಎಸ್ ಆರ್ ರಸ್ತೆ, ನಾಯಕನಹಟ್ಟಿ ರಸ್ತೆಯ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನರು ನೀರನ್ನು ಹೊರಗೆ ಹಾಕಲು ಹರಸಾಹಸ ಪಡಬೇಕಾಯಿತು. ಕೆಲವು ಮನೆಗಳಲ್ಲಿ ಆಹಾರ, ಬೇಳೆ ಕಾಳು, ದವಸ ಧಾನ್ಯಗಳು ನೀರಿನಲ್ಲಿ ತೋಯ್ದು ಹೋಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 11 at 1.16.26 PM

ಕಳೆದ ಒಂದು ವಾರದಿಂದ ಜಿಲ್ಲೆಯಾದ್ಯಂತ ಬಹುತೇಕ ಬಿರುಸಿನ ಮಳೆಯಾಗುತ್ತಿದ್ದು ಚಳ್ಳಕೆರೆ ತಾಲೂಕಿನಲ್ಲಿ ಕೂಡ ಮಳೆಯ ಆರ್ಭಟ ಜೋರಾಗಿದೆ. ಇತ್ತೀಚಿಗೆ ಸುರಿಯುತ್ತಿರುವ ಮಳೆಯಿಂದಾಗಿ ಭರ್ತಿಯಾಗಿದ್ದು, ಕೆಲವು ಕೆರೆಗಳು ಕೋಡಿಬಿದ್ದಿವೆ. ರೈತರ ಬೆಳೆ ನಾಶವಾದ ಸುದ್ದಿಗಳು ಕೂಡ ವರದಿಯಾಗಿವೆ.

ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ರೈತರು ಬೆಳೆದ ಉತ್ಪನ್ನಗಳನ್ನು ತಂದು ಮಾರಾಟ ಮಾಡುವ ಚಳ್ಳಕೆರೆ ನಗರಕ್ಕೆ ಹೊಂದಿಕೊಂಡಿರುವ ಕೃಷಿ ಉತ್ಪನ್ನ ಮಾರುಕಟ್ಟೆಯ ಸುಮಾರು 30 ಅಡಿಯಷ್ಟು ಉದ್ದದ ತಡೆಗೋಡೆ ಮಳೆ ಹೊಡೆತಕ್ಕೆ ಕುಸಿದು ಬಿದ್ದಿದ್ದು ರಾತ್ರಿಯಾದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.

“ಈ ತಡೆಗೋಡೆ ನಾಲ್ಕೈದು ವರ್ಷದ ಹಿಂದೆ ನಿರ್ಮಿಸಿದ ತಡೆಗೋಡೆಯಾಗಿದ್ದು, ಪಕ್ಕದಲ್ಲಿ ಅದಕ್ಕೆ ಹೊಂದಿಕೊಂಡಂತೆ ಚರಂಡಿ ವ್ಯವಸ್ಥೆ ಇದೆ. ನಗರದ ಬೇರೆ ಪ್ರದೇಶಗಳಿಂದ ಬರುವ ನೀರು ಇದೇ ಚರಂಡಿಯಲ್ಲಿ ಹೋಗಬೇಕಾಗಿದ್ದು ಚರಂಡಿಯನ್ನು ವೈಜ್ಞಾನಿಕವಾಗಿ ಕಟ್ಟದೇ, ಬಿಲ್ ಮಾಡಿಸಿಕೊಳ್ಳುವ ಸಲುವಾಗಿ ಹಳೆಯ ಚರಂಡಿಗೆ ತೇಪೆ ಹಾಕಿ ಕಾಮಗಾರಿ ಮಾಡಿದ್ದಾರೆ” ಎಂದು ಕೆ.ಎಂ.ಸಿ.ಎಸ್ ಮಾಲೀಕರು ಮತ್ತು ವ್ಯಾಪಾರಸ್ಥರಾದ ರಘು ತಿಳಿಸಿದ್ದಾರೆ.

“ನೀರಿನ ಹರಿವಿಗೆ ತಕ್ಕದಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ನೀರು ಹೆಚ್ಚಾದಾಗ ತಡೆಗೋಡೆಗೆ ಹೊಡೆದು ಕೊರಕಲು ಬಿದ್ದಿತ್ತು.‌ ಮಳೆ ಚೆನ್ನಾಗಿ ಬಂದಾಗ ಭರ್ತಿಯಾಗಿ ಕಾಂಪೌಂಡ್ ತಡೆಗೋಡೆಗೆ ಹೊಂದಿಕೊಂಡು ಹರಿಯುವುದು ಸಾಮಾನ್ಯವಾಗಿತ್ತು. ಅದರಿಂದಾಗಿ ಹಲವೆಡೆ ಶಿಥಿಲಗೊಂಡಿತ್ತು. ನಿನ್ನೆ ಸುರಿದ ಭಾರಿ ಮಳೆಗೆ ನೀರು ನುಗ್ಗಿ ಮತ್ತು ಶಿಥಿಲಗೊಂಡಿರುವ ತಡೆಗೋಡೆ ಬಿದ್ದು ಹೋಗಿದೆ” ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಅದೃಷ್ಟ ಒಲಿದರೆ 50% ತೆರಿಗೆ: ಇದು ನಿರ್ಮಲಕ್ಕನ ತೆರಿಗೆ ಭಯೋತ್ಪಾದನೆ!

ಅಲ್ಲದೆ, ರಾತ್ರಿ ಸುರಿದಂತಹ ಭಾರಿ ಮಳೆಗೆ ಕಾಂಪೌಂಡ್ ಕುಸಿತ ಪರಿಣಾಮವಾಗಿ ಮೂರು ನಾಲ್ಕು ಕೃಷಿ ಮಾರುಕಟ್ಟೆ ಅಂಗಡಿಗಳ ಒಳಗೆ ನೀರು ನುಗ್ಗಿ ಶೇಂಗಾ ದಾಸ್ತಾನಿಗೆ ಹಾನಿಯಾಗಿದೆ. ಅದರಲ್ಲೂ ಒಂದು ಅಂಗಡಿಯಲ್ಲಿ ಒಣಗಿಸಲು ಹಾಕಿದ್ದ ಶೇಂಗಾ ರಾಶಿಗೆ ನೀರು ನುಗ್ಗಿದ್ದು, ಶೇಂಗಾ ಕೊಚ್ಚಿಕೊಂಡು ಹೋಗಿದೆ. ಇದರಿಂದ ರೈತರಿಂದ ಖರೀದಿ ಮಾಡಿದ ಶೇಂಗಾ ನೀರುಪಾಲಾಗಿದ್ದು, ಅಂಗಡಿ ಮಾಲೀಕರಿಗೆ ಬಹಳ ನಷ್ಟವಾಗಿದೆ.

ಸಂಬಂಧಪಟ್ಟ ಕೃಷಿ ಮಾರುಕಟ್ಟೆ ಇಲಾಖೆ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಪರಿಹಾರ ಒದಗಿಸಿಕೊಡಬೇಕು ಎಂದು ರಘು ಮತ್ತು ಇತರ ಅಂಗಡಿ ಮಾಲೀಕರು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...