ಚಿತ್ರದುರ್ಗ | ಪಟ್ಟಣ ಪಂಚಾಯತಿಯಲ್ಲಿ ಅವ್ಯವಹಾರ ಆರೋಪ; ತನಿಖೆಗೆ ಆಗ್ರಹ

Date:

ಮೊಳಕಾಲ್ಮೂರು ಪಟ್ಟಣ ಪಂಚಾಯತಿಯಲ್ಲಿ ಸುಮಾರು 9 ಕೋಟಿ ರೂ. ಅಧಿಕ ಹಣ ಅವ್ಯವಹಾರ ನಡೆದಿರುವ ಅನುಮಾನವಿದೆ. ಇದರ ಲೋಕಾಯುಕ್ತ ತನಿಖೆನಡೆಸಿಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, “ಪಟ್ಟಣ ಪಂಚಾಯಿತಿಯಲ್ಲಿ ಮೋಟಾರ್ ಕೇಬಲ್ ಪಂಪ್‌ಗಳನ್ನು ಕಡಿಮೆ ಬೆಲೆಗೆ ಖರೀದಿಸಿ, ಹೆಚ್ಚು ಮೊತ್ತದ ನಕಲಿ ಬಿಲ್‌ ಸೃಷ್ಠಿಸಿ ಕೋಟ್ಯಂತರ ರೂಪಾಯಿ ಹಗಲು ದರೋಡೆ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

“ಈ ಹಗರಣ ಬೆಳಕಿಗೆ ಬಂದು ತನಿಖೆಗೆ ಅಧಿಕಾರಿಗಳು ಮುಂದಾದಾಗ, ರಾತ್ರೋರಾತ್ರಿ ಮೋಟಾರ್ ಬಿಡಿ ಭಾಗಗಳನ್ನು ತಂದು ಪಂಚಾಯಿತಿ ಗೋಡೌನ್‌ನಲ್ಲಿ ಇಟ್ಟಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಟ್ಟಣ ಪಂಚಾಯತಿಯಲ್ಲಿ ಅಧಿಕಾರಿಗಳ ಜೊತೆ ಪಂಚಾಯತಿಯ ಅಧ್ಯಕ್ಷರೂ ಶಾಮೀಲಾಗಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ಮಾಡಿದ್ದಾರೆ. ಪಟ್ಟಣದ ಹಿತ ಕಾಪಾಡಬೇಕಾದವರೇ ನಕಲಿ ಬಿಲ್ಲುಗಳನ್ನು ಸೃಷ್ಟಿಸಿ ಹಣ ದೋಚಿದ್ದಾರೆ” ಎಂದು ದೂರಿದ್ದಾರೆ.

“ಪಟ್ಟಣ ಪಂಚಾಯಿತಿಯಲ್ಲಿ ಖಾತೆ, ಇ-ಸತ್ತು, ಜನನ ಮರಣ ಕೊಡಲು ಸರ್ಕಾರ ನಿಗದಿಪಡಿಸಿದ ಹಣ ಎಷ್ಟು ಎಂದು ಸಾರ್ವಜನಿಕರ ಸೂಚನಾ ಫಲಕದಲ್ಲಿ ಅಳವಡಿಸಿರುವುದಿಲ್ಲ. ಈ ವ್ಯವಹಾರದಲ್ಲಿ 15 ರಿಂದ 20 ಸಾವಿರ ಹಣವನ್ನು ಕೇಳುತ್ತಾರೆ. ಪಟ್ಟಣ ಪಂಚಾಯತಿಯಲ್ಲಿ ದುಡ್ಡು ಕೊಟ್ಟರೆ ಮಾತ್ರ ಕೆಲಸ ಆಗುತ್ತದೆ” ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಬೇಡ ರೆಡ್ಡಿಹಳ್ಳಿ ಬಸವ ರೆಡ್ಡಿ ಕಿಡಿಕಾರಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕೊಂಡಾಪುರದ ಪರಮೇಶಪ್ಪ, “ಪಟ್ಟಣ ಪಂಚಾಯತಿಯಲ್ಲಿ ನಡೆದಿರುವ ಎಲ್ಲ ಹಗರಣಗಳನ್ನು ಚಾಚು ತಪ್ಪದೇ ತನಿಖೆ ನಡೆಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ನಾವು ಉಗ್ರ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ರೈತಸಂಘದ ರವಿಕುಮಾ‌ರ್, ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಕೊಂಡಾಪುರದ ಪರಮೇಶಪ್ಪ, ರಮೇಶ್ ಶ್ರೀನಿವಾಸ್, ಉಮೇಶ್, ಮಹೇಂದ್ರ, ಹೆಚ್ಚೇನಳ್ಳಿ ನಾಗರಾಜ್‌, ರೈತ ಸಂಘದ ಮುಖಂಡರಾದ ಚಂದ್ರಣ್ಣ, ಮಂಜುನಾಥ, ಭೀಮಣ್ಣ, ಬಸವರಾಜ್ ಇನ್ನು ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...