ಚಿತ್ರದುರ್ಗ | ಒಳಮೀಸಲಾತಿ ಆಯೋಗಕ್ಕೆ ನ್ಯಾಯಮೂರ್ತಿಗಳ ನೇಮಿಸಿ; ಆದಿಜಾಂಬವ ಷಡಕ್ಷರ ಮುನಿಶ್ರೀ ಆಗ್ರಹ

Date:

ಒಳಮೀಸಲಾತಿ ಜಾರಿ ಮಾಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ, ಮೂರು ತಿಂಗಳಲ್ಲಿ ವರದಿ ಪಡೆದು ಕ್ರಮ ಕೈಗೊಳ್ಳುತ್ತೇವೆ ಎಂದ ಸರ್ಕಾರ ಇದುವರೆಗೆ ನ್ಯಾಯಮೂರ್ತಿಗಳ ನೇಮಕ ಮಾಡಿಲ್ಲ ಎಂದು ಆದಿಜಾಂಬವಮಠದ ಶ್ರೀಷಡಕ್ಷರ ಮುನಿ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಕಚೇರಿ ಆವರಣದಲ್ಲಿ ತಾಲೂಕಿನ ಧರ್ಮಪುರ ಹೋಬಳಿಯ ಖಂಡೇನಹಳ್ಳಿಯ ಮಾದಿಗ ದಂಡೋರ ಸಂಘಟನೆ ಮತ್ತು ಡಾ.ಬಿ.ಆರ್. ಅಂಬೇಡ್ಕ‌ರ್ ಯುವಕ ಸಂಘದ ನೇತೃತ್ವದಲ್ಲಿ ಸಮಸ್ತ ಮಾದಿಗ ಸಮುದಾಯದವರೊಂದಿಗೆ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ತಹಶೀಲ್ದಾರ್ ಅವರಿಗೆ ಮನವಿಪತ್ರ ಸಲ್ಲಿಸಿ ಮಾತನಾಡಿದರು.

“ರಾಜ್ಯದಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದ ತಕ್ಷಣವೇ ಒಳ ಮೀಸಲಾತಿ ಜಾರಿ ಮಾಡುವುದಾಗಿ ಘೋಷಣೆ ಮಾಡಿತ್ತು. ಚಿತ್ರದುರ್ಗದಲ್ಲಿ ನಡೆದ ಎಸ್.ಸಿ/ಎಸ್.ಟಿ. ಸಮಾವೇಶದಲ್ಲಿ 6ನೇ ಗ್ಯಾರಂಟಿಯಾಗಿ ಒಳಮೀಸಲಾತಿ ಜಾರಿ ಘೋಷಣೆ ಮಾಡಿತ್ತು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸಂವಿಧಾನ ಬದ್ದವೆಂದು ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಜಾರಿ ಮಾಡುವಂತೆ ಐತಿಹಾಸಿಕ ತೀರ್ಪು ನೀಡಿತ್ತು. ಈ ತೀರ್ಪಿನಂತೆ ಈಗಾಗಲೇ ಹರಿಯಾಣ ಸರ್ಕಾರವು ಮೊದಲನೇ ಕ್ಯಾಬಿನೆಟ್ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಘೋಷಣೆ ಮಾಡಿದೆ, ಆದರೆ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

WhatsApp Image 2024 11 09 at 7.48.00 PM 2

“ಸಂಘಟನೆಗಳ ಹೋರಾಟಕ್ಕೆ ಮಣಿದು ಅಕ್ಟೋಬರ್ 28ರಂದು ಸಚಿವ ಸಂಪುಟಸಭೆಯಲ್ಲಿ ಒಳಮೀಸಲಾತಿ ಜಾರಿ ಮಾಡಲು ಮೂರು ತಿಂಗಳ ಅವಧಿಯಲ್ಲಿ ವರದಿ ಪಡೆಯಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ಮಾಡಲಾಗುವುದು ಎಂದು ಘೋಷಿಸಿದೆ. ಆದರೆ ಸರ್ಕಾರ ಇದುವರೆಗೂ ಯಾವುದೇ ನ್ಯಾಯಾಧೀಶರ ನೇಮಕಾತಿಯನ್ನು ಮಾಡದೆ ಕಾಲಹರಣಮಾಡುತ್ತಿರುವುದು ನಿಜಕ್ಕೂ ಖಂಡನೀಯ. ಆದ್ದರಿಂದ ಈ ಕೂಡಲೇ ಸರ್ಕಾರವು ನ್ಯಾಯಾಧೀಶರನ್ನು ನೇಮಿಸಿ, ಒಳಮೀಸಲಾತಿಯನ್ನು ಜಾರಿಗೊಳಿಸಬೇಕು ಎಂಬುದಾಗಿ ಸಮಸ್ತ ಮಾದಿಗ ಸಮುದಾಯದವರ ಪರವಾಗಿ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಮಾದಿಗ ದಂಡೋರ ಸಮಿತಿ ಅಧ್ಯಕ್ಷ ಪಾವಗಡ ಶ್ರೀರಾಮ್ ಮಾತನಾಡಿ “ಸಾಮಾಜಿಕ ನ್ಯಾಯದ ಪರ ಎಂದು ಹೇಳುವ ಕಾಂಗ್ರೆಸ್ ಸರ್ಕಾರ ಒಳ ಮೀಸಲು ವಿಚಾರದಲ್ಲಿ ದಿಟ್ಟ ನಿಲುವು ಕೈಗೊಳ್ಳಬೇಕು. ಈ ವಿಳಂಬ ದೋರಣೆ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಮೂರು ವಿಧಾನಸಭಾ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ದಲಿತ ಸಂಘಟನೆಗಳ ಕಾರ್ಯಕರ್ತರು ಸೇನಾನಿಗಳಂತೆ ಹೋರಾಡುತ್ತಿದ್ದು, ಸರ್ಕಾರ ದತ್ತಾಂಶ, ವರದಿಯ ಕುಂಟು ನೆಪಬಿಟ್ಟು ಸ್ಪಷ್ಟ ನಿರ್ಧಾರ ಕೈಗೊಂಡರೆ ಮಾತ್ರ ಮಾದಿಗ ಸಮುದಾಯದ ಹಿತ ಕಾಯಲು ಸಾಧ್ಯ. ಮೀಸಲು ಜಾರಿಯಾಗುವವರೆಗೆ ರಾಜ್ಯಾದ್ಯಂತ ನಿರಂತರ ಹೋರಾಟ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು, ಮೀಸಲು ಜಾರಿ ಆಗುವವರೆಗೆ ರಾಜ್ಯದಲ್ಲಿನ ಎಲ್ಲ ನೇಮಕಾತಿ ತಡೆ ಹಿಡಿಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2024 11 09 at 7.48.00 PM 1

ತಾಲೂಕು ಮಾದಿಗ ದಂಡೋರ ಸಮಿತಿ ಉಪಾಧ್ಯಕ್ಷ ಖಂಡೇನಹಳ್ಳಿ ಡಿ. ಚಿದಾನಂದ ಮಾತನಾಡಿ, ಜನಸಂಖ್ಯೆಗೆ ಅನುಸಾರವಾಗಿ ರಾಜ್ಯದಲ್ಲಿರುವ 101 ಪರಿಶಿಷ್ಠ ಉಪ ಜಾತಿಗಳಿಗೆ ಒಳ ಮೀಸಲಾತಿ ಜಾರಿಗೆ ತರಬೇಕು. ದತ್ತಾಂಶ ಸಂಗ್ರಹಿಸಲು ಆಯೋಗ ರಚಿಸಲಾಗುವುದು ಎನ್ನುವ ಸರ್ಕಾರದ ಭರವಸೆ ಇದುವರೆಗೂ ಸಾಕಾರವಾಗಿಲ್ಲ. ನ್ಯಾಯಮೂರ್ತಿಗಳ , ಆಯೋಗ ರಚನೆಯಾಗಿಲ್ಲ. ಅಹಿಂದ ನಾಯಕ ಸಿಎಂ ಸಿದ್ದರಾಮಯ್ಯ ಮಾದಿಗರ ದಶಕದ ಕನಸು ನನಸಾಗಿಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಚನ್ನಪಟ್ಟಣ | ಮುಸ್ಲಿಮರಿಗೆ ಕುರ್‌ಆನಿನ ಪ್ರತಿಯೊಂದಿಗೆ ಹಣ ಹಂಚಿದ ಜೆಡಿಎಸ್‌: ವ್ಯಾಪಕ ಆಕ್ರೋಶ

ಈ ಸಂದರ್ಭದಲ್ಲಿ ಒಳಮೀಸಲಾತಿ ಹೋರಾಟ ಸಮಿತಿ ಮುಖಂಡರುಗಳಾದ ಕೆ.ಪಿ.ಶ್ರೀನಿವಾಸ್, ಬೋರನಕುಂಟೆ ಕರಿಯಣ್ಣ, ಜಿ.ರಾಘವೇಂದ್ರ, ತಿಪ್ಪೇಸ್ವಾಮಿ(ದಾಸಪ್ಪ), ಮಹೇಶ್, ಟಿ.ಗಿರೀಶ್, ಓಂಕಾರಪ್ಪ, ರಂಗಸ್ವಾಮಿ, ಆರ್.ಗಿರೀಶ್, ಕೆ.ಎಚ್.ರಾಜು, ತಿಮ್ಮರಾಯ, ಹೆಚ್. ಆ‌ರ್.ಪ್ರಸನ್ನ, ಹರ್ಷ, ಕೆ.ಡಿ. ತಿಪ್ಪೇಸ್ವಾಮಿ, ಕೆ.ಟಿ. ತಿಮ್ಮರಾಜು, ಪಿ.ಚಿದಾನಂದ, ಕೆ.ಆ‌ರ್.ಶಿವಣ್ಣ, ಶಿವಕುಮಾ‌ರ್, ಶಿವಣ್ಣ, ತಿಪ್ಪೇಸ್ವಾಮಿ, ಜಿ.ಮಾರುತಿ, ಕೆ.ಎಚ್‌. ತಿಮ್ಮರಾಯ, ರವಿಕುಮಾರ, ದೇವರಾಜ, ಕೆ.ಎನ್.ಲಕ್ಷ್ಮೀ ದೇವಿ, ಡಿ.ಚಿದಾನಂದ ಮತ್ತಿತರರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...