ಚಿತ್ರದುರ್ಗ | ದಾಯಾದಿ ಕೊಲೆ ಯತ್ನ; ಇಬ್ಬರು ಆರೋಪಿಗಳ ಬಂಧನ

Date:

ದಾಯಾದಿ ದ್ವೇಷದ ಕಾರಣ ಸಂಬಂಧಿಯೊಬ್ಬನ ಹತ್ಯೆಗೆ ಯತ್ನಿಸಿದ ದುಷ್ಕರ್ಮಿಗಳು, ಆತನ ಮೇಲೆ ಮಾರಕಾಸ್ತ್ರದಿಂದ ಗಂಭೀರ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬೆಟ್ಟಗೊಂಡನಹಳ್ಳಿಯಲ್ಲಿ ನಡೆದಿದೆ.

ಬೆಟ್ಟಗೊಂಡನಹಳ್ಳಿ ವೆಂಕಟಪ್ಪ(58) ಎಂಬುವವರು ಹಲ್ಲೆಗೊಳಗಾದವರಾಗಿದ್ದಾರೆ. ಅವರು ಸದ್ಯ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲಕ್ಷ್ಮಣ ಎನ್ನುವವರು ಅವರ ದೊಡ್ಡಪ್ಪನ ಮಗನಾಗಿದ್ದ ವೆಂಕಟಪ್ಪ ಎಂಬುವವರ ಮೇಲೆ ಹಲ್ಲೆ ಮಾಡಲು ಸಂಚು ನಡೆಸಿದ್ದರು. ಆರೋಪಿ ಲಕ್ಷ್ಮಣ ಮತ್ತು ಈತನ ಮಗ ಗಿರೀಶ ಆಗಸ್ಟ್‌ 04ರ ನಡುರಾತ್ರಿ ಸಂತ್ರಸ್ತರ ಮನೆ ಮತ್ತು ಬೀದಿ ದೀಪದ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಹತ್ಯೆ ಮಾಡಲು ಅವಿತು ಕೂತಿದ್ದರು. ವೆಂಕಟಪ್ಪ ಅಂದು ನಡುರಾತ್ರಿ ಮೂತ್ರ ವಿಸರ್ಜಿಸಲು ಹೊರಗೆ ಬಂದಾಗ ದಾಯಾದಿ ಸಹೋದರ ಲಕ್ಷ್ಮಣ ಮತ್ತು ಮಗ ಗಿರೀಶ ಏಕಾಏಕಿ ವೆಂಕಟಪ್ಪನವರ ಮೇಲೆ ಎರಗಿ ಸದ್ದು ಮಾಡದಂತೆ ಗಂಟಲನ್ನು ಒತ್ತಿ ಹಿಡಿದು ಗಂಟಲನ್ನು ಹಿಸುಕಿ ತಲೆಗೆ ಮಾರಕಾಸ್ತ್ರದಿಂದ ಹೊಡೆದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಬ್ಬಿನಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಮತ್ತು ಕುಟುಂಬಸ್ಥರು ದೂರು ದಾಖಲಿಸಿದ್ದು, ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಘಟನೆ ನಡೆದ ಐದಾರು ಗಂಟೆ ಒಳಗೆ ಆರೋಪಿಗಳಾದ ಲಕ್ಷ್ಮಣ ಮತ್ತು ಮಗ ಗಿರೀಶನ್ನು ಬಂಧಿಸುವಲ್ಲಿ ಅಬ್ಬಿನಹೊಳೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸೌಜನ್ಯ ಕುಟುಂಬದ ಮೇಲೆ ಹಲ್ಲೆಗೆ ಯತ್ನಿಸಿದ ಮಹಾವೀರ ಜೈನ್‌ ಯಾರು ಗೊತ್ತೇ?

ಗಾಯಾಳು ವೆಂಕಟಪ್ಪ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಷ್ಕರ್ಮಿಗಳಾದ ಅಪ್ಪ-ಮಗನ ಉಪಟಳದಿಂದ ಬೇಸತ್ತಿದ್ದ ಸ್ಥಳೀಯರು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಅವರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ಘಟನೆ ಕುರಿತು ಅಬ್ಬಿನಹೊಳೆ ಪಿಎಸ್‌ಐ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಆರೋಪಿಗಳು ತಮ್ಮ ದಾಯಾದಿ ಸಹೋದರನ ಮೇಲೆ ಹಲ್ಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ 307ರ ಅಡಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...