ಚಿತ್ರದುರ್ಗ | ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಜಾಗ ಖಾಲಿ ಮಾಡಿ; ಅಧಿಕಾರಿಗಳಿಗೆ ಶಾಸಕ ರಘುಮೂರ್ತಿ ಎಚ್ಚರಿಕೆ

Date:

ಬ್ಲಾಕ್‌ಮೇಲ್ ಅಥವಾ ಒತ್ತಡಕ್ಕೆ ಮಣಿದು ಜನಸಾಮಾನ್ಯರಿಗೆ ಸ್ಪದಿಸದೆ, ಕೆಲಸ ಮಾಡದೇ ಇರುವ ಅಧಿಕಾರಿಗಳು ಜಾಗ ಖಾಲಿ ಮಾಡಿ. ಜನರಿಗೆ ಅಗತ್ಯವಾಗಿ ಬೇಕಿರುವ ವಸತಿ, ರಸ್ತೆ ಹಾಗೂ ಸ್ಮಶಾನ ವ್ಯವಸ್ಥೆಯ ಬಾಕಿ ಉಳಿದಿರುವ ಕೆಲಸಗಳನ್ನು ಕೂಡಲೇ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಚಳ್ಳಕೆರೆ ತಾಲೂಕು ಪಂಚಾಯತಿ ಕಚೇರಿಯಲ್ಲಿ ಪಿಡಿಒ, ಗ್ರಾಮಲೆಕ್ಕಾಧಿಕಾರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

“ನಾನು ಈ ಹಿಂದೆಯಿದ್ದ ಶಾಸಕನಲ್ಲ. ಇನ್ನು ಮುಂದೆ ನಾನು ನೀತಿ ಪಾಠ ಮಾಡುವುದಿಲ್ಲ. ಕೆಲಸಗಳಾಗಬೇಕಿರುವ ಹಲವಾರು ಪ್ರಕರಣಗಳು ಬಹಳ ದಿನಗಳಿಂದ ಬಾಕಿ ಇವೆ. ರೈತರು ಹಾಗೂ ಜನಸಾಮಾನ್ಯರು ಕಚೇರಿಗೆ ಅಲೆದಾಡುತ್ತಿದ್ದಾರೆ. ಅಂತಹ, ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಯಾರ ಒತ್ತಡ ಅಥವಾ ಬ್ಲಾಕ್ ಮೇಲ್‌ಗೆ ಒಳಗಾಗದೆ ಪಕ್ಷಬೇದ ಮರೆತು ಕೆಲಸ ಮಾಡಿಕೊಡಬೇಕು” ಎಂದು ಸೂಚಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...