ಚಿತ್ರದುರ್ಗ | ಕಾಂಗ್ರೆಸ್ ರಾಜ್ಯದಲ್ಲಿಯೇ ಹೆಚ್ಚು ಬಲಿಷ್ಠ ಭದ್ರಕೋಟೆಯಾಗಿದೆ: ಎ ಎನ್ ನಟರಾಜ್ ಗೌಡ

Date:

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷ, ಸಂಘಟನೆ ಇಡೀ ರಾಜ್ಯದಲ್ಲಿಯೇ ಹೆಚ್ಚು ಬಲಿಷ್ಠವಾಗಿದ್ದು ಕಾಂಗ್ರೆಸ್ ಭದ್ರಕೋಟೆಯಾಗಿದೆ. ಕಾರ್ಯಕರ್ತರು ಮುಖಂಡರು ಆತ್ಮವಿಶ್ವಾಸ ಮತ್ತು ಸಹೋದರತ್ವದ ಮೂಲಕ ಸಾಮೂಹಿಕ ನಾಯಕತ್ವದ ಅಡಿಯಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರರು ಹಾಗೂ ಪದವೀಧರರ ವಿಭಾಗದ ರಾಜ್ಯಾಧ್ಯಕ್ಷ ಎ ಎನ್ ನಟರಾಜ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಅವರು, “ಹಿಂದಿನಿಂದಲೂ ಚಿತ್ರದುರ್ಗ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಪಕ್ಷಕ್ಕೋಸ್ಕರ ಸಾಕಷ್ಟು ದುಡಿದಿದ್ದಾರೆ. ಈಗಲೂ ದುಡಿಯುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಆತ್ಮವಿಶ್ವಾಸ ಮತ್ತು ಸಹೋದರತ್ವದ ಮೂಲಕ ಸಾಮೂಹಿಕ ನಾಯಕತ್ವದ ಅಡಿಯಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಹೀಗೆ ಪಕ್ಷದ ಸಿದ್ಧಾಂತಗಳನ್ನು ಮತ್ತು ನೀಡಿರುವ ಯೋಜನೆಗಳನ್ನು ಜನರ ಬಳಿ ತಲುಪಿಸಿ ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸಬೇಕು” ಎಂದು ಕರೆ ನೀಡಿದರು.

“ಈ ಹಿಂದೆಯೂ ನಾನು ಸಾಮಾಜಿಕ ಜಾಲತಾಣದ ಮುಖ್ಯಸ್ಥನಾಗಿದ್ದಾಗ ಸಾಕಷ್ಟು ಬಾರಿ ಚಿತ್ರದುರ್ಗದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದು‌, ಪದವೀಧರ ವಿಭಾಗದ ಕೆಪಿಸಿಸಿ ರಾಜ್ಯಾಧ್ಯಕ್ಷನಾಗಿ ಮೊದಲ ಬಾರಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದೇನೆ. ಇಲ್ಲಿರುವ ಎಲ್ಲ ನಾಯಕರು ಮುಖಂಡರು ಮತ್ತು ಕಾರ್ಯಕರ್ತರ ಸಹಯೋಗದೊಂದಿಗೆ ಅತಿ ಹೆಚ್ಚು ಪದವೀಧರರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಲು, ಚಿತ್ರದುರ್ಗ ಜಿಲ್ಲೆಯ ಪದವೀಧರ ವಿಭಾಗದ ಅಧ್ಯಕ್ಷ ಪ್ರಕಾಶ್ ರಾಮಾನಾಯಕರವರಿಗೆ ಸಹಕರಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ” ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿ, “ಈ ಹಿಂದೆ ಇರುವಂತಹ ಬಿಜೆಪಿ ಸರ್ಕಾರ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡದೇ, ಹಿಜಾಬ್ ಧರಿಸಬೇಕು ಬೇಡವೋ, ಜಟಕಾ ಕಟ್-ಹಲಾಲ್ ಕಟ್ ಮಾಂಸ ಖರೀದಿಸಬೇಕೋ ಬೇಡವೋ ಎಂದು ಬರೀ ಧರ್ಮಗಳ ನಡುವೆ ದ್ವೇಷ ಬಿತ್ತುವುದು, ಅದಕ್ಕೆ ಉತ್ತೇಜಿಸುವುದು ಮಾತ್ರ ಮಾಡುತ್ತ ಬಂದಿದೆ. ಹೀಗಿರುವಾಗ ನಮ್ಮ ಕಾಂಗ್ರೆಸ್ ಸರ್ಕಾರ ತಂದಿರುವಂತಹ ಎಲ್ಲ ಗ್ಯಾರಂಟಿ ಯೋಜನೆಗಳ ಬಗ್ಗೆ ಅಸಹನೆಯಿಂದ ಗ್ಯಾರಂಟಿ ಯೋಜನೆಗಳು ಯಾರಿಗೂ ಸರಿಯಾಗಿ ತಲುಪುತ್ತಿಲ್ಲ. ಇವುಗಳಿಂದ ಸರಿಯಾದ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ, ಹೀಗೆಲ್ಲಾ ಸುಳ್ಳು ಹೇಳಿಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ. ನಮ್ಮ ಗ್ಯಾರೆಂಟಿ ಯೋಜನೆಗಳಿಂದ ಆಗಿರುವಂತಹ ಅನುಕೂಲಗಳನ್ನು ಸಾಕಷ್ಟು ಬಾರಿ ತಾವುಗಳು ಮಾಧ್ಯಮಗಳಲ್ಲಿ ನೋಡಿರಬಹುದು. ಗ್ಯಾರಂಟಿ ಯೋಜನೆಯಿಂದ ಬಂದಿರುವ ಹಣದಿಂದ ಒಬ್ಬ ತಾಯಿ ಗ್ರಂಥಾಲಯ ರಚಿಸುವುದು, ಫ್ರಿಡ್ಜ್, ಕಿವಿಯೋಲೆಗಳನ್ನು ತೆಗೆದುಕೊಂಡಿರುವುದು ಹೀಗೆ ಹತ್ತಾರು ರೀತಿಯಲ್ಲಿ ಬಡ ಕುಟುಂಬದ ಮಹಿಳೆಯರಿಗೆ ಅನುಕೂಲವಾಗಿದೆ” ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ ಕೆ ತಾಜ್ ಪೀರ್ ಮಾತನಾಡಿ, “ನಿಮ್ಮಂತಹ ವಾಗ್ಮಿಗಳು ನಮ್ಮ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಿ ಸಾಕಷ್ಟು ವಿಷಯಗಳನ್ನು ಹಂಚುತ್ತ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು ಮತ್ತು ಪಕ್ಷ ಬಲಪಡಿಸುವ ಕೆಲಸವನ್ನು ಮಾಡುತ್ತಿರುತ್ತೀರಿ” ಎಂದು ಹೇಳಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿರುವುದಕ್ಕೆ ಧನ್ಯವಾದ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಮರಕುಂಬಿ ಪ್ರಕರಣದ ತೀರ್ಪು; ಸತ್ರ ನ್ಯಾ. ಸಿ ಚಂದ್ರಶೇಖರ್‌ರವರಿಗೆ ದಸಂಸ ಅಭಿನಂದನೆ

ಜಿಲ್ಲಾ ಪದವೀಧರ ವಿಭಾಗದ ಅಧ್ಯಕ್ಷ ಪ್ರಕಾಶ್ ರಾಮಾನಾಯ್ಕ್ ಮಾತನಾಡಿ, “ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಅನೇಕ ಪದವೀಧರರು ನೈತಿಕವಾಗಿ ಬೆಂಬಲವನ್ನು ನೀಡುತ್ತ ಬಂದಿರುತ್ತಾರೆ. ಆದರೆ ಹಲವು ಪದವೀಧರರು, ನಿರುದ್ಯೋಗಿಗಳು, ಉಪನ್ಯಾಸಕರು, ನಿವೃತ್ತ ಉದ್ಯೋಗಿಗಳು, ಪದವೀಧರ ಮಹಿಳೆಯರು, ಗೃಹಣಿಯರು ಇವರನ್ನು ನಮ್ಮ ಪಕ್ಷ ನೀಡಿರುವಂತಹ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಂತಹ ಯುವನಿಧಿ ಮತ್ತು ಇತರ ಗ್ಯಾರಂಟಿಗಳ ಬಗ್ಗೆ ಅವರಲ್ಲಿ ಜಾಗೃತಿ ಮೂಡಿಸಿ ಅತಿಹೆಚ್ಚು ಪದವೀಧರರನ್ನು ಪಕ್ಷಕ್ಕೆ ಕರೆತಂದು ಪಕ್ಷವನ್ನು ಬಲಿಷ್ಠಗೊಳಿಸಲಾಗುವುದು” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಣ್ಣ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಪ್ರಧಾನ ಕಾರ್ಯದರ್ಶಿಗಳಾದ ಡಿ ಎನ್ ಮೈಲಾರಪ್ಪ, ಸಂಪತ್ ಕುಮಾರ್, ಲಕ್ಷ್ಮಿಕಾಂತ್, ಬೀದಿಬದಿ ವ್ಯಾಪಾರಿಗಳ ಘಟಕದ ಅಧ್ಯಕ್ಷರಾದ ಸಮೀವುಲ್ಲಾ, ಮೋಹನ್ ಪೂಜಾರಿ, ಪಿ ಬಸವರಾಜ್, ಗಂಗಾಧರ್, ಪ್ರಕಾಶ್ ಯಾದವ್, ವಸೀಮ್, ಆಜಮ್, ಮುರಳಿ, ಮಾಂತೇಶ್, ನಟರಾಜ್, ಮೋಯ್ದಿನ್ ಖಾನ್, ದಿನೇಶ್, ಇರ್ಫಾನ್ ಪಟೇಲ್, ಫ್ರಾನ್ಸಿಸ್ ಅರುಣ್ ಡಿಸೋಜ, ಅಕ್ಬರ್, ಗುರುಸ್ವಾಮಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...