ಚಿತ್ರದುರ್ಗ | ನರೇಗಾ ಕೆಲಸಕ್ಕೆ ಹಣದ ಬೇಡಿಕೆ: ತಾಂತ್ರಿಕ ಸಹಾಯಕ ಕೆಲಸದಿಂದ ವಜಾ

Date:

ಮೂರು ಲಕ್ಷ ರೂಪಾಯಿಗಳ ನರೇಗಾ ಕೆಲಸಕ್ಕೆ ಶೇ. ನಾಲ್ಕರಂತೆ 12,000 ರೂ.ಗಳ ಹಣದ ರೂಪದ ಬೇಡಿಕೆ ಇಟ್ಟಿರುವ ವಿಡಿಯೋ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿರುವ ಹಿನ್ನೆಲೆ ಹಾಗೂ ನರೇಗಾ ಬಿಲ್‌ಗಳಲ್ಲಿ ಅಕ್ರಮ ಎಸಗಿರುವ ವರದಿ ಆಧರಿಸಿ ಚಿತ್ರದುರ್ಗದಲ್ಲಿ ನರೇಗಾ ಯೋಜನೆಯ ತಾಂತ್ರಿಕ ಸಹಾಯಕರೊಬ್ಬರನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಗ್ರಾಮ ಪಂಚಾಯತಿಯ ತಾಂತ್ರಿಕ ಸಹಾಯಕ ವಿಜಯೇಂದ್ರ ಅವರು ವಜಾಗೊಂಡಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್ ಜೆ ಸೋಮಶೇಖರ್ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.

ಹಿರಿಯೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಅವರು, ತಾಂತ್ರಿಕ ಸಹಾಯಕ ವಿಜಯೇಂದ್ರ ಅವರು, ನರೇಗಾ ಯೋಜನೆಯ ಕಾಮಗಾರಿಗಳ ಸಾಮಗ್ರಿ ಬಿಲ್ಲುಗಳ ಎಂಐಎಸ್ ಮಾಡಿ ಎಫ್‍ಟಿಒಗಳನ್ನು ಸೃಜಿಸಿದ್ದು, ಈ 33 ಕಾಮಗಾರಿಗಳ ಎಂ.ಬಿಯನ್ನು ದಾಖಲಿಸದೆ ಕರ್ತವ್ಯ ಲೋಪವೆಸಗಿದ್ದಾರೆ ಎಂದು ವರದಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೂ.3 ಲಕ್ಷದ ಕಾಮಗಾರಿ ಅನುಷ್ಠಾನಗೊಳಿಸುವಲ್ಲಿ ಶೇ.4 ನಂತೆ ರೂ.12,000/-ಗಳಿಗೆ ಹಣದ ಬೇಡಿಕೆ ಇಟ್ಟಿರುವ ದೃಶ್ಯ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನು ಓದಿದ್ದೀರಾ? ಮೈಸೂರು | ಸಾಲಗಾರರ ಕಿರುಕುಳ ಶಂಕೆ: ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾದ ರಿಯಲ್‌ ಎಸ್ಟೇಟ್‌ ಉದ್ಯಮಿ

ಕರ್ತವ್ಯಲೋಪ ಮತ್ತು ಹಣದ ಬೇಡಿಕೆ ಇಟ್ಟು ನರೇಗಾ ಯೋಜನೆಯ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿರುವುದರಿಂದ ಇವರ ಸೇವೆಯು ಇಲಾಖೆಗೆ ಅವಶ್ಯಕತೆ ಇಲ್ಲದೇ ಇರುವುದರಿಂದ ವಿಜಯೇಂದ್ರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...