ಚಿತ್ರದುರ್ಗ | ಶಸ್ತ್ರಚಿಕಿತ್ಸೆಗಾಗಿ 4 ಸಾವಿರ ಲಂಚ ಪಡೆದ ಸರ್ಜನ್ ಡಾ. ಸಾಲಿ ಮಂಜಪ್ಪ ಅಮಾನತು

Date:

ರೋಗಿಯೋರ್ವರ ಶಸ್ತ್ರಚಿಕಿತ್ಸೆಗಾಗಿ 4 ಸಾವಿರ ಲಂಚ ಪಡೆದಿದ್ದ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಸಾಲಿ ಮಂಜಪ್ಪ ಅವರನ್ನು ಅಮಾನತುಗೊಳಿಸಿ, ರಾಜ್ಯ ಆರೋಗ್ಯ ಇಲಾಖೆ ಜುಲೈ 28ರಂದು ಆದೇಶ ಹೊರಡಿಸಿದೆ.

ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಜಿಲ್ಲಾ ಆಸ್ಪತ್ರೆಯ ಸರ್ಜನ್ ಲಂಚ ಪಡೆದಿರುವ ವಿಡಿಯೋವೊಂದು ಕೆಲದಿನಗಳ ಹಿಂದೆ ವೈರಲ್ ಆಗಿತ್ತು.

ಜಿಲ್ಲಾ ಸರ್ಜನ್ ಡಾ. ಸಾಲಿ ಮಂಜಪ್ಪ ಅವರು ರೋಗಿಯ ಸಂಬಂಧಿ ಬಳಿ, 6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ 4 ಸಾವಿರ ಹಣ ಪಡೆದಿದ್ದಾರೆ. ಲಂಚ ಪಡೆಯುತ್ತಿರುವ ದೃಶ್ಯವನ್ನು ರೋಗಿಯ ಸಂಬಂಧಿ ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದರು. ಅದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾದ ಬಳಿಕ ರಾಜ್ಯ ಆರೋಗ್ಯ ಇಲಾಖೆಯು ಜುಲೈ 28ರಂದು ಸೇವೆಯಿಂದ ಅಮಾನತುಗೊಳಿಸಿ, ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಚಿತ್ರದುರ್ಗ ಜಿಲ್ಲಾಸ್ಪತ್ರೆ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸ ನಾಯಕರಹಟ್ಟಿ ಮೂಲದ ಚಂದ್ರಶೇಖ‌ರ್ ಎಂಬ ವ್ಯಕ್ತಿಯಿಂದ ಲಂಚ ಸ್ವೀಕರಿಸಿದ್ದರು. ಲಂಚ ಸ್ವೀಕರಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೂ ಕಾರಣವಾಗಿತ್ತು. ಕಳೆದ ಜುಲೈ 25 ರಂದು ಮಹಾನಾಯಕ ದಲಿತ ಸೇನೆಯು ಸರ್ಜನ್ ವಿರುದ್ಧ ಕ್ರಮ ಆಗ್ರಹಿಸಿ ಚಿತ್ರದುರ್ಗ ನಗರದಲ್ಲಿ ಜಿಲ್ಲಾಸ್ಪತ್ರೆಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತ್ತು.

ಅಮಾನತು ಆದೇಶದಲ್ಲಿ ಏನಿದೆ?

ಚಿತ್ರದುರ್ಗ ಜಿಲ್ಲೆಯಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಜನರಲ್ ಸರ್ಜನ್ ಆಗಿರುವ ಡಾ. ಸಾಲಿ ಮಂಜಪ್ಪನವರು ಸಾರ್ವಜನಿಕ ಉಚಿತ ಸೇವೆಗಾಗಿ ಬರುವ ರೋಗಿಗಳ ಬಳಿ ಶಸ್ತ್ರಚಿಕಿತ್ಸೆಗಾಗಿ ಹಣದ ಬೇಡಿಕೆ ಇಟ್ಟು, ಸರ್ಕಾರಿ ವೈದ್ಯರ ಹುದ್ದೆಗೆ ತರವಲ್ಲದ ರೀತಿಯಲ್ಲಿ ವರ್ತಿಸುವುದರ ಮೂಲಕ ನಿಯಮಗಳನ್ನು ಉಲ್ಲಂಘಿಸಿ ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದರ ವಿಡಿಯೋ ಚಿತ್ರೀಕರಣಗೊಂಡು ಮಾಧ್ಯಮಗಳಲ್ಲಿ ಪ್ರಸಾರವಾಗಿರುವುದರಿಂದ ಇವರನ್ನು ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಲು ತೀರ್ಮಾನಿಸಿದೆ.

ತಮ್ಮ ವ್ಯಾಪ್ತಿಯ ಅಧಿಕಾರವನ್ನು ಚಲಾಯಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್ ಈ ಆದೇಶ ಹೊರಡಿಸಿದ್ದಾರೆ. ಅಮಾನತ್ತಿನ ಅವಧಿಯಲ್ಲಿ ಆರೋಪಿ ವೈದ್ಯರು ನಿಯಮಾನುಸಾರ ಜೀವನಾಂಶ ಭತ್ಯೆಗೆ ಅರ್ಹರಾಗಿರುವುದರಿಂದ ಅವರನ್ನು ಶಿವಮೊಗ್ಗ ಜಿಲ್ಲೆಯ ಸೊರಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಅಮಾನತಿನ ಅವಧಿಯಲ್ಲಿ ತಮ್ಮ ಕೇಂದ್ರ ಸ್ಥಾನವನ್ನು ಬಿಡುವುದಕ್ಕೂ ಮುನ್ನ ಪೂರ್ವಾನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...