ಚಿತ್ರದುರ್ಗ | ಕಣ್ಣಿನ ಉರಿ ಊತಕ್ಕೆ ಭಯಬೇಡ: ಆರೋಗ್ಯಾಧಿಕಾರಿ

Date:

ಕಣ್ಣಿನ ಉರಿಯೂತಕ್ಕೆ ಭಯಬೇಡ, ಸೂಕ್ತ ಆರೈಕೆ ಚಿಕಿತ್ಸೆಯಿಂದ ಗುಣಮುಖವಾಗುತ್ತದೆ ಎಂದು ಚಿತ್ರದುರ್ಗ ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ ಗಿರೀಶ್ ಹೇಳಿದರು.

ಕಣ್ಣಿನ ಉರಿ ಊತ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ತಂಡ ಚಿತ್ರದುರ್ಗ ತಾಲೂಕಿನ ಮುದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದು, ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದೆ.

“ಕೆಲವು ದಿನಗಳಿಂದ ಹವಾಮಾನ ವ್ಯತ್ಯಾಸದಿಂದ ಮತ್ತು ನಿರಂತರವಾಗಿ ಬರುತ್ತಿರುವ ಮಳೆಯಿಂದ ಕಣ್ಣಿನ ಸಮಸ್ಯೆ ಹೆಚ್ಚಾಗುತ್ತಿದೆ. ಕೆಲವರಲ್ಲಿ ಕಣ್ಣಿನ ಉರಿ ಊತ ‘ಕಂಜಂಕ್ಟಿವಿಟಿಸ್’ ಸಮಸ್ಯೆ ಕಂಡು ಬರುತ್ತಿದೆ. ಅಂತಹವರು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳನ್ನು ಭೇಟಿ ಮಾಡಬೇಕು. ನೋವು ನಿವಾರಕ ಮಾತ್ರೆ ಮತ್ತು ಕಣ್ಣಿನ ಡ್ರಾಪ್ಸ್ ಚಿಕಿತ್ಸೆ ನೀಡಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂಗಿನ ಮತ್ತು ಗಂಟಲಿನ ಸೋಂಕು ಇದ್ದಲ್ಲಿ ಅದಕ್ಕೆ ಬೇಕಾದ ಚಿಕಿತ್ಸೆ ನೀಡುವುದು, ಸಾಮಾನ್ಯವಾಗಿ ಕಣ್ಣಿನ ಬಿಳಿ ಭಾಗ ಕೆಂಪಾಗುತ್ತದೆ. ಕಣ್ಣುಗಳಲ್ಲಿ ಉರಿ ಮತ್ತು ನೋವು ಇರುತ್ತದೆ. ಕಣ್ಣುಗಳಿಂದ ನಿರಂತರವಾಗಿ ನೀರು ಹೊರ ಬರುತ್ತಿರುತ್ತದೆ. ಕಣ್ಣುಗಳು ಊದಿಕೊಳ್ಳುತ್ತವೆ. ಇಂಥ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದು ಸೂಕ್ತ ಚಿಕಿತ್ಸೆ ಪಡೆಯಬೇಕು” ಎಂದು ಸಲಹೆ ನೀಡಿದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್‌ ಮಂಜುನಾಥ್ ಮಾತನಾಡಿ, “ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಜನ ಇರುವ ಪ್ರದೇಶಗಳಿಗೆ ಹೋಗುವುದು ಕಡಿಮೆ ಮಾಡಬೇಕು. ಪದೇ ಪದೆ ಕಣ್ಣುಗಳನ್ನು ಮುಟ್ಟುವುದನ್ನು ಕಡಿಮೆ ಮಾಡಬೇಕು. ಆಗಾಗ ಸೋಪಿನಲ್ಲಿ ಕೈ ತೊಳೆಯುವುದನ್ನು ಅಭ್ಯಾಸ ಮಾಡಬೇಕು. ಕಣ್ಣಿನ ಉರಿ ಊತ ಬಂದ ವ್ಯಕ್ತಿ ಬೇರೆಯವರ ಜೊತೆ ನಿಕಟ ಸಂಪರ್ಕ ಹೊಂದುವುದನ್ನು ತಪ್ಪಿಸಬೇಕು. ಸೋಂಕಿತ ವ್ಯಕ್ತಿಗಳಿಂದ ಅಂತರ ಕಾಪಾಡಿಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | 48 ಮಂದಿಗೆ ಗುಲಾಬಿ ಕಣ್ಣು ರೋಗ; ಎಚ್ಚರ ವಹಿಸುವಂತೆ ವೈದ್ಯಾಧಿಕಾರಿ ಸೂಚನೆ

ಕಣ್ಣಿನ ಡ್ರಾಪ್ಸ್ ಬಳಸುವ ಬಗ್ಗೆ ಔಷಧಿಗಳನ್ನು ನುಂಗುವ ವಿಧಾನದ ಬಗ್ಗೆ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ ಮುಗಪ್ಪ ತಿಳಿಸಿದರು

ಕಾರ್ಯಕ್ರಮದಲ್ಲಿ ಡಾ. ದುಶಾಂತ್, ಡಾ. ಅಕ್ಷಯ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀಧರ್, ರಾಮಪ್ಪ ಸ್ವಾಮಿ, ಕಿರಣ್ ಕುಮಾರ್, ರೇಣುಕಾ, ಆಶಾಕಾರ್ಯಕರ್ತೆಯರು, ಸಾರ್ವಜನಿಕರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...