ಚಿತ್ರದುರ್ಗ | ನೀರಾವರಿ ಸಂಪರ್ಕ ಕಲ್ಪಿಸದಿದ್ದರೆ ಚುನಾವಣೆ ಬಹಿಷ್ಕಾರ; ಭರಮಗಿರಿ ಕೆರೆಯಾಶ್ರಿತ ಜನರ ಎಚ್ಚರಿಕೆ

Date:

ಚಿತ್ರದುರ್ಗದ ಭರಮಗಿರಿಯ ಸುತ್ತಮುತ್ತಲಿನ 11 ಹಳ್ಳಿಗಳ ಜನ ಕಳೆದ ಆರು ದಿನಗಳಿಂದ ನೀರಿಗಾಗಿ ಹೋರಾಟ ನಡೆಸುತ್ತಿದ್ದಾರೆ. ನೀರಾವರಿ ಸಂಪರ್ಕ ಒದಗಿಸದಿದ್ದಾರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆಯನ್ನೂ ನೀಡಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ನೀರಾವರಿ ಹೋರಾಟಗಾರ ಕಸವನಹಳ್ಳಿ ರಮೇಶ್ ಮಾತನಾಡಿ, ನಿಮ್ಮ ಹೋರಾಟ ನ್ಯಾಯಯುತವಾಗಿದೆ. ವಾಣಿವಿಲಾಸ ಸಾಗರ ಜಲಾಶಯದಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಭರಮಗಿರಿ ಕೆರೆಗೆ ನೀರಾವರಿ ಕಲ್ಪಿಸದೇ, ಅನ್ಯಾಯವಾಗಿದೆ ಎಂದರು.

ಇದರ ಹಿಂದಿನ ವಿಚಾರಗಳನ್ನು ಕೆದಕದೆ ಆಗಬೇಕಾದ ಕೆಲಸಗಳ ಕಡೆ ಗಮನಕೊಡಬೇಕು. ಆದ್ದರಿಂದ ಈ ಭಾಗದ 11 ಹಳ್ಳಿಗಳ ಜನರ ಕುಡಿಯುವ ನೀರಿನ ಬವಣೆ ಜಾನುವಾರಗಳ ನೀರು ಮತ್ತು ಮೇವಿನ ಸಮಸ್ಯೆ. ಅಲ್ಲದೆ ಪ್ರಮುಖ ವೃತ್ತಿಯಾದ ವ್ಯವಸಾಯಕ್ಕೆ ನೀರಿಲ್ಲದೆ ಈ ಭಾಗದ ಜನ ಪರಿತಪಿಸುತ್ತಿದ್ದಾರೆ. ಹತ್ತಿರದಲ್ಲೇ ಜಲಾಶಯ ಇದೆ ಎಂದು ನಂಬಿಕೊಂಡು ಪ್ರತಿಯೊಬ್ಬ ರೈತರು ನಿರಂತರ ಕೃಷಿ ಮಾಡುತ್ತಾ ಅಡಿಕೆ ತೆಂಗು ಬಾಳೆ ಇತ್ಯಾದಿಗಳನ್ನು ಬೆಳೆಯುತ್ತಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಈಗ ಏಕಾಏಕಿ ಕೊಳವೆ ಬಾವಿಗಳಲ್ಲಿ ಅಂತರ್ಜಲ ಬತ್ತಿ ಹೋಗುತ್ತಿದೆ ಆದ್ದರಿಂದ ತುರ್ತಾಗಿ ಸರ್ಕಾರ ನೀರು ಹರಿಸುವ ಮೂಲಕ ಇಚ್ಛಾಶಕ್ತಿ ಪ್ರದರ್ಶಿಸಬೇಕೆಂದು ಒತ್ತಾಯಿಸುತ್ತೇವೆ. ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ಕಸವನಹಳ್ಳಿ ರಮೇಶ್ ಹೇಳಿದರು.

ಹೋರಾಟದ ನೇತೃತ್ವವನ್ನು ಶ್ರೀಮತಿ ಗಂಗಮ್ಮ ಉಮೇಶ್ ಶ್ರೀಮತಿ ಕವಿತಾ, ಕೆಂಚಪ್ಪ, ಮೂರ್ತಿ, ಮೂಡ್ಲಪ್ಪ, ಓಂಕಾರಪ್ಪ, ರಮೇಶ್, ಲೋಕೇಶ್, ವಂದೇ ಮಾತರಂ ವೇದಿಕೆಯ ದೇವರಾಜ್ ನಾಗಣ್ಣ, ಎಸ್‌.ಕೆ. ರಘು, ರಾಮಚಂದ್ರ ಕಸವನಹಳ್ಳಿ ಇತರ ಹಳ್ಳಿಗಳ ಗ್ರಾಮಸ್ಥರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...