ಚಿತ್ರದುರ್ಗ | ಕೌಟುಂಬಿಕ ಕಲಹ – ಮಹಿಳೆ ಸಾವು; ಪತಿಯೇ ಕೊಲೆ ಮಾಡಿದ್ದಾನೆಂದು ಆರೋಪ

Date:

ಪತಿ ವಿವಾಹೇತರ ಸಂಬಂಧಿ ಹೊಂದಿರುವ ವಿಚಾರವಾಗಿ ನಡೆದ ಕೌಟುಂಬಿಕ ಕಲಹದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಘಟ್‌ಭರ್ತಿ ಗ್ರಾಮದಲ್ಲಿ ನಡೆದಿದೆ. ಆಕೆಯನ್ನು ಆಕೆಯ ಪತಿಯೇ ಭೀಕರವಾಗಿ ಹೊಡೆದು ಕೊಂದಿದ್ದು, ಆತ್ಮಹತ್ಯೆಯೆಂದು ಬಿಂಬಿಸಲು ಯತ್ನಿಸಿದ್ದಾರೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟ್‌ಭರ್ತಿ ಗ್ರಾಮದಲ್ಲಿ ಭಾಗ್ಯ ಎಂಬವರು ಸಾವನ್ನಪ್ಪಿದ್ದಾರೆ. ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆಕೆಯ ಪತಿ ತಿರುಮಲ್ಲೇಶ ಮತ್ತು ಆತನ ಕುಟುಂಬಸ್ಥರು ಹೇಳಿದ್ದಾರೆ. ಆದರೆ, ಭಾಗ್ಯ ಅವರ ಮೃತದೇಹದ ಮೇಲೆ ಗಂಭೀರ ಗಾಯಗಳು ಕಂಡುಬಂದಿದ್ದು, ಆಕೆಯನ್ನು ತಿರುಮಲ್ಲೇಶನೇ ಅಮಾನುಷವಾಗಿ ಥಳಿಸಿ, ಕೊಲೆ ಮಾಡಿದ್ದಾನೆಂದು ಭಾಗ್ಯ ಅವರ ಸಹೋದರ ಆರೋಪ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯ ಭರಮ ಸಮುದ್ರ ಗ್ರಾಮದವರಾದ ಭಾಗ್ಯ ಅವರು 2016ರಲ್ಲಿ ತಿರುಮಲ್ಲೇಶನನ್ನು ವಿವಾಹವಾಗಿದ್ದರು. ಆದರೆ, ಮದುವೆಗೂ ಮುನ್ನವೇ ಆತನಿಗೆ ವಿವಾಹೇತರ ಸಂಬಂಧವಿತ್ತು. ಅದು, ವಿವಾಹವಾದ ಕೆಲ ವರ್ಷಗಳ ಬಳಿಕ ಭಾಗ್ಯ ಅವರಿಗೆ ಗೊತ್ತಾಗಿದೆ. ಈ ವಿಚಾರವಾಗಿ ಆಗ್ಗಾಗ್ಗೆ ದಂಪತಿಗಳ ನಡುವೆ ಜಗಳವಾಗುತ್ತಿತ್ತು. ದಂಪತಿಗಳ ನಡುವಿನ ಕಲಹವು ಪೊಲೀಸ್‌ ಠಾಣೆಯ ಮೆಟ್ಟಿಲೇರಿತ್ತು. ತಿರುಮಲ್ಲೇಶನನ್ನು ಪೊಲೀಸ್‌ ಠಾಣೆಗೆ ಕರೆಸಿದ್ದ ಪೊಲೀಸರು, ಆತನಿಂದ ಮುಚ್ಚಳಿಕೆ ಪತ್ರವನ್ನೂ ಬರೆಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ತಿರುಮಲ್ಲೇಶ ತನ್ನ ವಿವಾಹೇತರ ಸಂಬಂಧವನ್ನು ಮುಂದುವರೆಸಿದ್ದ. ಭಾಗ್ಯ ಅವರೊಂದಿಗೆ ಆಗ್ಗಾಗ್ಗೆ ಗಲಾಟೆ ಮಾಡುತ್ತಿದ್ದ ತಿರುಮಲ್ಲೇಶ, ಅಮಾನುಷವಾಗಿ ಹಲ್ಲೆ ಮಾಡುತ್ತಿದ್ದನೆಂದು ಭಾಗ್ಯ ಅವರ ಕುಟುಂಬಸ್ಥರು ಆರೋಪಿಸಿದ್ದಾರೆ.

ಶನಿವಾರವೂ ಭಾಗ್ಯ ಮೇಲೆ ಗಂಭೀರ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆಂದು ಆರೋಪಿದ್ದು, ತಳುಕು ಪೊಲೀಸ್‌ ಠಾಣೆಯಲ್ಲಿ ತಿರುಮಲ್ಲೇಶ್‌ ವಿರುದ್ಧ ದೂರು ದಾಖಲಿಸಿದ್ದಾರೆ.

ಪ್ರಕರಣದ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಭಾಗ್ಯ ಅವರ ಸಹೋದರ ಅಜ್ಜಯ್ಯ, “ಭಾಗ್ಯ ಅವರು ಆತ್ಮಹತ್ಯೆ ಮಾಡಿಕೊಂಡಿಲ್ಲ. ಅವರನ್ನು ಕೊಲೆ ಮಾಡಲಾಗಿದೆ. ಭಾಗ್ಯ ಅವರ ಬೆನ್ನು ಮತ್ತು ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ತಿರುಮಲ್ಲೇಶನೇ ಹೊಡೆದು ಕೊಂದಿದ್ದಾನೆ. ಬಳಿಕ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವದಂತಿ ಹಬ್ಬಿಸಿದ್ದಾರೆ. ಆದರೆ, ಆಕೆ ನೇಣು ಬಿಗಿದುಕೊಂಡಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ. ಯಾರೊಬ್ಬರೂ ಅದನ್ನು ನೋಡಿಲ್ಲ. ‘ಭಾಗ್ಯ ಸೀರೆಯನ್ನು ಕುತ್ತಿಗೆಗೆ ಸುತ್ತಿಕೊಂಡು ಸಾವನ್ನಪ್ಪಿದ್ದಾರೆ. ಗಂಟು ಹಾಕಿಕೊಂಡಿರಲಿಲ್ಲ’ವೆಂದು ತಿರುಮಲ್ಲೇಶನ ಸಹೋದರ ಷಣ್ಮುಖ ಹೇಳಿಕೆ ನೀಡಿದ್ದಾರೆ. ಸೀರೆ ಸುತ್ತಿಕೊಂಡರೆ, ಕುತ್ತಿಗೆಗೆ ಗಂಭೀರ ಗಾಯವಾಗುವುದಿಲ್ಲ. ಆದರೆ, ಭಾಗ್ಯ ಅವರ ಕುತ್ತಿಗೆಯಲ್ಲಿ ಗಂಭೀರ ಗಾಯವಾಗಿರುವುದನ್ನು ಗಮನಿಸಿದರೆ, ಅದು ನೇಣು ಬಿಗಿದುಕೊಂಡಿರುವುದಲ್ಲ, ಕೊಲೆ ಎಂಬುದು ಸ್ಪಷ್ಟವಾಗಿ ಕಾಣುತ್ತದೆ” ಎಂದು ಹೇಳಿದ್ದಾರೆ.

“ಮರಣೋತ್ತರ ಪರೀಕ್ಷೆಯ ವೇಳೆ, ಭಾಗ್ಯ ಅವರ ದೇಹದಾದ್ಯಂತ ಭೀಕರವಾಗಿ ಹೊಡೆದಿರುವ ಗಾಯಗಳು ಕಂಡುಬಂದಿವೆ. ಇದು ಕೊಲೆ ಎಂಬುದನ್ನು ಗಾಯಗಳೇ ಸಾಕ್ಷಿಗಳಾಗಿವೆ. ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ, ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಹೇಳುತ್ತಿದ್ದಾರೆ” ಎಂದು ಅಜ್ಜಯ್ಯ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...