ಚಿತ್ರದುರ್ಗ | ಕೆರೆ ಹಾಗೂ ಚೆಕ್ ಡ್ಯಾಮ್‌ಗಳಲ್ಲಿ ಭ್ರಷ್ಟಾಚಾರ, ಕಳಪೆ ಕಾಮಗಾರಿ ವಿರುದ್ಧ ರೈತ ರೇವಣ್ಣ ಉಪವಾಸ ಸತ್ಯಾಗ್ರಹ

Date:

ಹೊಳಲ್ಕೆರೆ ತಾಲೂಕಿನ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಕೆರೆ ಹಾಗೂ ಚೆಕ್ ಡ್ಯಾಮ್‌ಗಳಲ್ಲಿ ಕಳಪೆ ಕಾಮಗಾರಿ ಆಗಿದ್ದು, ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಗ್ರಹಿಸಿ ರೈತ ರೇವಣ್ಣ ಉಪವಾಸ ಸತ್ಯಾಗ್ರಹ ನಡೆಸಿದರು.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ನಗರದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಕಚೇರಿ ಎದುರು ತಾಳಿಕಟ್ಟೆ ಗ್ರಾಮದ ರೈತ ರೇವಣ್ಣ ಉಪವಾಸ ಸತ್ಯಾಗ್ರಹ ನಡೆಸಿದರು.

“ಶಾಸಕರು, ಕೆರೆ ಮತ್ತು ಚೆಕ್ ಡ್ಯಾಮ್‌ಗಳ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಮಾಡಿ ಇಲಾಖೆಯ ಎಇಇ ಮತ್ತು ಜೆ.ಇ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ವಹಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೊಳಲ್ಕೆರೆ ತಾಲೂಕು, ರಾಮಗಿರಿ ಹೋಬಳಿ, ತಾಳಿಕಟ್ಟೆ ಮತ್ತು ಟಿ ವಡೇರಹಳ್ಳಿ ಗ್ರಾಮದ ಮ್ಯಾಸನ ಕಟ್ಟೆ ಅಭಿವೃದ್ಧಿ ಕಾಮಗಾರಿ ಅಪೂರ್ಣಗೊಂಡಿದ್ದು, ಈ ಕಾಮಗಾರಿಯ ಅಳತೆ ಪುಸ್ತಕ ಬರೆದು ಹಣ ಪಾವತಿ ಪಡೆಯುವ ಉದ್ದೇಶದಿಂದ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಹೊಳಲ್ಕೆರೆ ತಾಲೂಕಿನ ಎಲ್ಲ ಗ್ರಾಮಗಳ ಕೆರೆಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಎಸ್ಟಿಮೇಟ್‌ನಲ್ಲಿ ಅಳವಡಿಸಿದ ಸಾಮಗ್ರಿಗಳು ಗ್ರಾನೈಟ್  ಕಲ್ಲು, ಕಾಡುಗಲ್ಲು, ಗ್ರಾವಲ್, ಸಿಮೆಂಟ್ ಜೆಲ್ಲಿಕಲ್ಲು, ಕಬ್ಬಿಣ ಕಳಪೆಯಾಗಿವೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಶಾಲೆಗೆ ಬಾರದ ಮಕ್ಕಳು ಬಾಲ್ಯವಿವಾಹ ಮತ್ತು ಬಾಲಕಾರ್ಮಿಕರಾಗುವ ಸಾಧ್ಯತೆ ಹೆಚ್ಚು: ಜಿಲ್ಲಾಧಿಕಾರಿ ಕಳವಳ

“ಇಲಾಖೆಯಿಂದ ಎಲ್ಲ ಸಾಮಗ್ರಿಗಳನ್ನು ಗುಣಮಟ್ಟ ಪರೀಕ್ಷೆ ಮಾಡಿ, ತನಿಖೆ ಮಾಡಬೇಕು, ಹೊಳಲ್ಕೆರೆ ತಾಲೂಕಿನಾದ್ಯಂತ ಕಾಮಗಾರಿಗಳಿಗೆ ನಿಗದಿಪಡಿಸಿದ ಹಣಕ್ಕೆ ತಕ್ಕಂತೆ ಕೆಲಸ ಆಗಿದೆಯೋ ಇಲ್ಲವೋ ಎಂಬುದರ ಬಗ್ಗೆ ಶಾಸಕರು ಗಮನ ಹರಿಸಬೇಕು” ಎಂದು ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...