ಚಿತ್ರದುರ್ಗ | ಲಾರಿ-ಕಾರು ನಡುವೆ ಭೀಕರ ಅಪಘಾತ; ಬಿಎಂಟಿಸಿ ನಿವೃತ್ತ ನೌಕರ ಸೇರಿ ಐವರ ಸಾವು

Date:

ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಸಂಭವಿಸಿದೆ.

ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ ಮಲ್ಲಿಕಾರ್ಜುನ(50) ಮೃತಪಟ್ಟ ದುರ್ದೈವಿಗಳು. ಇನ್ನಿಬ್ಬರ ಗುರುತು ಪತ್ತೆಯಾಗಿಲ್ಲ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಕಾರಿನಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪ್ರಸಾದ ಪತ್ತೆಯಾಗಿದೆ. ಹೀಗಾಗಿ ಅವರು ಕಾರಿನಲ್ಲಿ ಸವದತ್ತಿಯ ರೇಣುಕಾ ಯಲ್ಲಮ್ಮ‌ ದೇಗುಲಕ್ಕೆ ಹೋಗಿ ಹಿಂದಿರುಗುತ್ತಿದ್ದರೆಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಿಎಂ ಸಿದ್ದರಾಮಯ್ಯನವರ 16ನೇ ಬಜೆಟ್; ವಿವಿಧ ಕ್ಷೇತ್ರದವರು ಏನಂತಾರೆ?

ಬೆಂಗಳೂರು ಮೂಲದ ಇನೊವಾ ಕಾರು, ತಮಿಳುನಾಡು ಪಾಸಿಂಗ್ ಇರುವ ಲಾರಿ ಹಿಂಬದಿಗೆ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಪೃತಪಟ್ಟಿದ್ದಾರೆ. ಇನ್ನು ಗುದ್ದಿದ ರಭಸಕ್ಕೆ ಇನ್ನೊವಾ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...