ಚಿತ್ರದುರ್ಗ | ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗ್ಯಾರಂಟಿ ನೀಡಿದಂತೆ ಕೇಂದ್ರದಲ್ಲೂ ಗ್ಯಾರಂಟಿ ಅನುಷ್ಠಾನ: ಮುನಿರಾ ಎ ಮಕಾಂದಾರ್

Date:

ಕೇಂದ್ರದಲ್ಲಿ ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗ್ಯಾರಂಟಿ ನೀಡಿದಂತೆ ಕೇಂದ್ರದಲ್ಲೂ ಗ್ಯಾರಂಟಿ ಅನುಷ್ಠಾನ ಮಾಡಲಾಗುವುದು ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ ಮಕಾಂದಾರ್ ಹೇಳಿದರು.

ಚಿತ್ರದುರ್ಗ ನಗರದ 12ನೇ ವಾರ್ಡ್ ಅಗಸನಕಲ್ಲಿನಲ್ಲಿ ಫಾತೀಮಾ ಮಸೀದಿ ಸಮೀಪ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಕೇಂದ್ರ ಸರ್ಕಾರದ ಗ್ಯಾರಂಟಿ ಕಾರ್ಡ್‌ ವಿತರಿಸಿ ಮಾತನಾಡಿದರು.

“ಕಾಂಗ್ರೆಸ್‌ಗೆ ತ್ಯಾಗ ಬಲಿದಾನಗಳ ಇತಿಹಾಸವಿದೆ. ಕೋಮುವಾದಿ ಬಿಜೆಪಿಯಲ್ಲಿ ಯಾರೂ ಕೂಡಾ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ. ಇಂದಿರಾಗಾಂಧಿ ರಾಜೀವ್‌ಗಾಂಧಿ ಇವರುಗಳು ದೇಶಕ್ಕಾಗಿ ಪ್ರಾಣ ಅರ್ಪಿಸಿದ್ದಾರೆ. ನೆಹರು ಕುಟುಂಬದ ಕುಡಿ ರಾಹುಲ್‌ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಎಲ್ಲರ ಮನ ಗೆದ್ದಿದ್ದಾರೆ. ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಜನತೆಗೆ ನೀಡಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 25 ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸರಳ, ಸಜ್ಜನ ರಾಜಕಾರಣಿ ಬಿ‌ ಎನ್ ಚಂದ್ರಪ್ಪನವರನ್ನು ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಕುಡಿಯುವ ನೀರಿಗಾಗಿ ಜನರ ಪರದಾಟ; ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ

ಕೆಡಿಪಿ ಸದಸ್ಯ ಕೆ ಸಿ ನಾಗರಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ ಎನ್ ಮೈಲಾರಪ್ಪ, ಹನುಮಲಿ ಷಣ್ಮುಖಪ್ಪ, ಪರಮೇಶ್ ಇವರುಗಳು ಕಾಂಗ್ರೆಸ್ ಸರ್ಕಾರದ ಸಾಧನೆಗಳ ಕುರಿತು ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಮನೆ ಮನೆಗೆ ತಿಳಿಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ ಎನ್ ಚಂದ್ರಪ್ಪನವರ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರು, ಮತದಾರರಲ್ಲಿ ವಿನಂತಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...