ಚಿತ್ರದುರ್ಗ | ಅಕ್ರಮ ಮದ್ಯ ಸಾಗಾಟ: ವ್ಯಕ್ತಿ ಮತ್ತು ದ್ವಿಚಕ್ರ ವಾಹನ ಅಧಿಕಾರಿಗಳ ವಶಕ್ಕೆ

Date:

ಅಕ್ರಮವಾಗಿ ಮದ್ಯಸಾಗಾಟ ಮಾಡುತ್ತಿದ್ದ ವ್ಯಕ್ತಿ ಹಾಗೂ ಸಾಗಾಟಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ಅಬಕಾರಿ ಅಧಿಕಾರಿಗಳು‌ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನಡೆದಿದೆ.

ಚಳ್ಳಕೆರೆ ನಗರದ ಅಬಕಾರಿ ಉಪ ನಿರೀಕ್ಷಕರು ಹಾಗೂ ನಿರೀಕ್ಷಕರು ಚಳ್ಳಕೆರೆ ವಲಯ ಅಬಕಾರಿ ಸಿಬ್ಬಂದಿಯೊಂದಿಗೆ ಬಳ್ಳಾರಿ ಮುಖ್ಯ ರಸ್ತೆಯ ನಾಯಕನಹಟ್ಟಿ ಕ್ರಾಸ್ ಬಳಿ ಸರ್ವೀಸ್‌ ರಸ್ತೆಯಲ್ಲಿನ ಬಸ್‌ ನಿಲ್ದಾಣದ ಮುಂಭಾಗ ವಾಹನ ತಪಾಸಣೆ ಮಾಡುತ್ತಿದ್ದಾಗ ವ್ಯಕ್ತಿಯೋರ್ವನು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು, ತಕ್ಷಣ ವ್ಯಕ್ತಿ ಹಾಗೂ ದ್ವಿಚಕ್ರವಾಹನ ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿ ದೇವರಹಟ್ಟಿ ಚಿಕ್ಕಮ್ಮನಹಳ್ಳಿ ಗ್ರಾಮದ ಚೆನ್ನಯ್ಯ (60) ಎಂದು ತಿಳಿದು ಬಂದಿದೆ. ಅಲ್ಲದೆ ಟಿ.ವಿ.ಎಸ್‌ ಎಕ್ಸ್‌.ಎಲ್. ದ್ವಿಚಕ್ರ ವಾಹನದಲ್ಲಿ ಹೈವಾರ್ಡ್ಸ್ ವಿಸ್ಕಿ-90 ಮಿಲಿಯ 40 ಟೆಟ್ರಾ ಪ್ಯಾಕ್ ಗಳು ಒಟ್ಟು- 3.600 ಲೀಟರ್ ಮದ್ಯ ಕಂಡುಬಂದಿದ್ದು, ಮದ್ಯ ಹಾಗೂ ದ್ವಿಚಕ್ರ ವಾಹನವೂ ಸೇರಿದಂತೆ 40 ಸಾವಿರ ಮೌಲ್ಯದ ಸರಕನ್ನು ವಶಕ್ಕೆ ಪಡೆದು ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
https://twitter.com/eedinanews/status/1860278926804934838

ತಪಾಸಣೆ ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕ ನಾಗರಾಜು ಸಿ, ಅಬಕಾರಿ ಮುಖ್ಯ ಪೇದೆ ಟಿ.ರಂಗಸ್ವಾಮಿ, ಎನ್.ನಾಗರಾಜ, ಟಿ.ಸೋಮಶೇಖರ್ ಅಬಕಾರಿ ಪೇದೆ ದರ್ಶನ್ ಕುಮಾರ್ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...