ಚಿತ್ರದುರ್ಗ | ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಅನಿರ್ದಿಷ್ಟಾವಧಿ ಧರಣಿ

Date:

ಚಳ್ಳಕೆರೆ ನಗರದ ಆಯ್ದ 62 ಕಡೆಗಳಲ್ಲಿ ನಾಗರಿಕರ ಸುರಕ್ಷತೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಒತ್ತಾಯಿಸಿ ಮುಖಂಡ ಪಾಟೀಲ್ ಕೃಷ್ಣೆಗೌಡ ಎನ್ನುವರು ಏಕಾಂಗಿಯಾಗಿ ನಗರಸಭೆ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಸುರಕ್ಷತೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಆಯ್ದ ಕೆಲವು ಸೂಕ್ಷ್ಮ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಆ ಮೂಲಕ ನಗರದಲ್ಲಿ ನಡೆಯುವ ಸರಗಳ್ಳತನ, ಅಕ್ರಮಗಳು, ದರೋಡೆ, ಕಳ್ಳತನ, ದೌರ್ಜನ್ಯ, ದ್ವಿಚಕ್ರವಾಹನ ಕಳ್ಳತನದಂತಹ ಘಟನೆಗಳನ್ನು ನಿಯಂತ್ರಿಸಬೇಕು ಎನ್ನುವ ಸದುದ್ದೇಶ ಇಟ್ಟುಕೊಂಡು ಈ ಪ್ರತಿಭಟನೆಗೆ ಮುಂದಾಗಿದ್ದಾರೆ.

ಈ ಕುರಿತು ಈ ದಿನ.ಕಾಮ್‌ನೊಂದಿಗೆ ಮಾತನಾಡಿದ ಅವರು, “ಐಐಎಸ್‌ಸಿ, ಡಿಆರ್‌ಡಿಒದಂತಹ ಪ್ರತಿಷ್ಠಿತ ಸಂಸ್ಥೆಗಳು ಚಳ್ಳಕೆರೆಗೆ ಬಂದ ಮೇಲೆ ಚಳ್ಳಕೆರೆ ವಿಜ್ಞಾನ ನಗರಿ ಎಂದು ಹೆಸರುವಾಸಿಯಾಗಿದೆ. ಹೆಸರಿಗಷ್ಟೇ ವಿಜ್ಞಾನ ನಗರಿಯಾಗಿದ್ದು, ವೈಜ್ಞಾನಿಕವಾಗಿ ಇಲ್ಲಿ ನಗರದ ನಾಗರಿಕರ ಸುರಕ್ಷತೆಗೆ ನಗರಸಭೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರದ ಸೂಕ್ಷ್ಮ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅವಶ್ಯಕತೆ ಇದೆ. ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಟ್ರಾಫಿಕ್ ಸಿಗ್ನಲ್‌ಗಳಲ್ಲಿ, ಬೇರೆ ಬೇರೆ ಕಡೆಗಳಲ್ಲಿ ಉತ್ತಮ ಸೌಲಭ್ಯ ನೀಡುವ ಅವಶ್ಯಕತೆ ಹೆಚ್ಚಿದೆ. ನಗರಕ್ಕೆ ಸೌಲಭ್ಯಗಳನ್ನು ಕಲ್ಪಿಸುವ ನಗರಸಭೆ ಇದಕ್ಕೆ ನೇರ ಹೊಣೆಯಾಗಿದ್ದು, ಅವರ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದೇನೆ. ಸಾರ್ವಜನಿಕರು ಬೆಂಬಲ ನೀಡಬೇಕು” ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ಕನಕಪುರ | ಉದಾತ್ತ ರಾಜಕಾರಣಿಗಳ ಸಾಲಿನಲ್ಲಿ ಎಸ್ ಎಂ ಕೃಷ್ಣ ಕೂಡ ಒಬ್ಬರು: ಕುಮಾರಸ್ವಾಮಿ

ಚಳ್ಳಕೆರೆ ನಗರಸಭೆ ವ್ಯಾಪ್ತಿಯಲ್ಲಿ ಸಿಸಿಟಿವಿ ಸುರಕ್ಷತಾ ಕ್ಯಾಮೆರಾಗಳನ್ನು ಅಳವಡಿಸುವಂತೆ ಏಕಾಂಗಿಯಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಈ ಏಕಾಂಗಿ ಪ್ರತಿಭಟನೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...