ಚಿತ್ರದುರ್ಗ | ಅಂತರ್‌ ಜಿಲ್ಲಾ ಕುರಿಗಳ್ಳರ ಸೆರೆ; ರಾಂಪುರ ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆಗೆ ಮೆಚ್ಚುಗೆ

Date:

ಕುರಿಗಳನ್ನು ಕಳುವು ಮಾಡಿಕೊಂಡು ಪರಾರಿಯಾಗಿದ್ದ ಕುರಿಗಳ್ಳರನ್ನು ರಾಂಪುರ ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಎಂಬುವವರು ವಾಹನ ಸಮೇತವಾಗಿ ಬಂಧಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ರಾಮಸಾಗರ ಗ್ರಾಮದ ಸಣ್ಣ ಗಂಗಪ್ಪನವರು ಸೆಪ್ಟೆಂಬರ್‌ 25ರಂದು ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಅನ್ವಯ ಚಿತ್ರದುರ್ಗ ಜಿಲ್ಲೆಯ ಪೋಲಿಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು, ಹೆಚ್ಚುವರಿ ಪೊಲೀಸ್ ಅಧಿಕ್ಷಕ ಕುಮಾರಸ್ವಾಮಿ, ಪೊಲೀಸ್ ಉಪಾಧೀಕ್ಷಕ ಟಿ ಬಿ ರಾಜಣ್ಣ ಹಾಗೂ ಮೊಳಕಾಲ್ಮೂರು ವೃತ ನಿರೀಕ್ಷಕ ವಸಂತ ವಿ ಅಸೋದೆ ಅವರ ಮಾರ್ಗದರ್ಶನದಲ್ಲಿ ಶೀಘ್ರವಾಗಿ ಕಳ್ಳತನ ಪ್ರಕರಣವನ್ನು ಪತ್ತೆ ಮಾಡಲು ರಾಂಪುರ ಠಾಣೆಯ ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ, ಎಎಸ್‌ಐ ಎಸ್ ಲೋಕೇಶ್, ಹೆಚ್ ಸಿ ಇಮಾಮ್ ಹುಸೇನ್-1317, ಶಶಿಕುಮಾರ್ ಪಿಸಿ-2320, ಕುಬೇರ್ ಪಿಸಿ-2638, ದಾವಲ ಮಾಲಿಕ್ ಪಿಸಿ-2252, ತಿಮ್ಮಾರೆಡ್ಡಿ ಪಿಸಿ-2712 ಸೇರಿದಂತೆ ಒಟ್ಟು 7 ಜನರನ್ನು ಒಳಗೊಂಡ ತಂಡವನ್ನು ರಚಿಸಿದ್ದರು.

ರಾಂಪುರ ಠಾಣೆಯ ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ ಅವರು ರೌಂಡ್ಸ್‌ಗೆಂದು ತೆರಳಿದಾಗ ಸದರಿ ತಂಡದವರು ಭಾತ್ಮಿದಾರರ ಮಾಹಿತಿ ಆಧಾರದ ಮೇಲೆ ಆರೋಪಿಗಳನ್ನು ರಾಷ್ಟ್ರೀಯ ಹೆದ್ದಾರಿ ಪಕ್ಕದ ದೇವಸಮುದ್ರ ಕ್ರಾಸ್ ಬಳಿ ಓಮಿನಿ ವಾಹನದಲ್ಲಿ12 ಕುರಿಗಳ ಸಾಗಾಣಿಕೆ ಕಂಡು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಆರೋಪದ ಕೃತ್ಯ ಬಯಲಾಗಿದೆ. ಈ ವೇಳೆ ದಾವಣಗೆರೆ ಮೂಲದ ಮೂರು ಆರೋಪಿಗಳು ಸ್ವತಃ ತಾವೇ ಕುರಿಗಳನ್ನು ಕದ್ದಿರುವುದು ಎಂದು ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಣ್ಣಗಂಗಪ್ಪ ಅವರ ಬಾಬ್ತು ಅಂದಾಜು ₹ 80,000 ಬೆಲೆ ಬಾಳುವ 12 ಕುರಿಗಳನ್ನು ಕಳ್ಳತನ ಮಾಡಿಕೊಂಡು ಕೆಎ-22 Z-5173 ನಂಬರ್‌ನ ಓಮಿನಿ ವಾಹನದಲ್ಲಿ ಕುರಿಗಳನ್ನು ಸಾಗಿಸುತ್ತಿದ್ದುದ್ದನ್ನು ಕಂಡು ರಾಂಪುರ ಠಾಣೆಯ ಮೊಕದ್ದಮೆ ನಂಬರ್ 118/2024 ಕಲಂ:303(2)BNS -2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಮಲಾಪುರ | ಬೌದ್ಧರ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ನೀಡಲು ಒತ್ತಾಯಿಸಿ ಮನವಿ

ರಾಂಪುರ ಪೊಲೀಸ್ ಠಾಣೆ ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ ಇವರ ಕಾರ್ಯ ವೈಖರಿಗೆ ರಾಂಪುರ ಸುತ್ತಮುತ್ತಲಿನ ಗ್ರಾಮಸ್ಥರು ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದು, “ಈ ಪಿಎಸ್‌ಐ ಬಂದಾಗಿನಿಂದ ರಾಂಪುರ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಶಾಂತಿ ಸೌಹಾರ್ದತೆ ಹೆಚ್ಚಾಗುತ್ತಿದೆ” ಎಂದು ತಿಳಿಸಿದರು.

ವರದಿ: ಸಿದ್ದೇಶ ಜಿ ವೆಂಕಟಪುರ ಮೊಳಕಾಲ್ಮೂರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...