ಚಿತ್ರದುರ್ಗ | ಕವಾಡಿಗರ ಹಟ್ಟಿ ಪ್ರಕರಣಕ್ಕೆ ಅಂತರ್ಜಾತಿ ಪ್ರೇಮ ವೈಷಮ್ಯ ಕಾರಣವಾ? ಸ್ಥಳೀಯರು ಹೇಳಿದ್ದೇನು?

Date:

ಚಿತ್ರದುರ್ಗದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಹಲವಾರು ಮಂದಿ ಅಸ್ವಸ್ಥರಾಗಿ ಅಸ್ಪತ್ರೆ ಸೇರಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ. ‘ಈ ಘಟನೆಗೆ ಗ್ರಾಮದಲ್ಲಿ ನಡೆದಿದ್ದ ಅಂತರ್ಜಾತಿ ಪ್ರೇಮ ವೈಷಮ್ಯ ಕಾರಣ. ಪ್ರಬಲ ಜಾತಿಯವರು ದಲಿತರು ಕುಡಿಯುವ ನೀರಿಗೆ ವಿಷ ಬೆರೆಸಿದ್ದರು’ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಈದಿನ.ಕಾಮ್‌ ತಂಡ ಗ್ರಾಮಕ್ಕೆ ಭೇಟಿ ನೀಡಿತ್ತು. ಆರೋಪಗಳನ್ನು ಸ್ಥಳೀಯರು ತಳ್ಳಿ ಹಾಕಿದ್ದು, ಪ್ರೇಮ ಪ್ರಕರಣಕ್ಕೂ ಕಲುಷಿತ ನೀರಿನ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಒಂದು ವರ್ಷದ ಹಿಂದೆ ದಲಿತ ಹುಡುಗ ಮತ್ತು ಪ್ರಬಲ ಜಾತಿಯ ಬಾಲಕಿಯ ಪ್ರೇಮ ಪ್ರಕರಣ ಗ್ರಾಮದಲ್ಲಿ ವೈಷಮ್ಯ ಉಂಟುಮಾಡಿತ್ತು. ಬಾಲಕಿ ಅಪ್ತಾಪ್ತಳಾಗಿದ್ದ ಕಾರಣ, ಯುವಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಯುವಕ ಇನ್ನೂ ಜೈಲಿನಲ್ಲಿದ್ದಾನೆ. ಒಂದು ವರ್ಷದ ಘಟನೆಯು ಇಂದಿನ ಪ್ರಕರಣಕ್ಕೆ ಕಾರಣವಾಗಿದೆ ಎಂದು ಹೇಳಲಾಗದು ಎಂದು ಸ್ಥಳೀಯರು ಹೇಳಿದ್ದಾರೆ.

ವರ್ಷದ ಹಿಂದಿನ ಜಾತಿ ವೈಷಮ್ಯ ಪ್ರಕರಣವನ್ನು ಇಂದಿನ ಪರಿಸ್ಥಿತಿಗೆ ತಳುಕು ಹಾಕಿ ನೋಡಲಾಗುತ್ತಿದೆ. ದ್ವೇಷ ಸಾಧಿಸಿಕೊಳ್ಳಲು ನೀರಿನ ಟ್ಯಾಂಕ್‌ಗೆ ವಿಷ ಹಾಕಲು ಸಾಧ್ಯವಿಲ್ಲ. ಆದರೂ, ನೀರು ಕುಡಿದು ಮೃತಪಟ್ಟವರ ಮರಣೋತ್ತರ ವರದಿ ಮತ್ತು ಎಫ್‌ಎಸ್‌ಎಲ್ ವರದಿಗಳು ಬಂದ ನಂತರ ಸತ್ಯಾಸತ್ಯತೆ ನಿರ್ಧಾರವಾಗಲಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಫ್‌ಎಸ್‌ಎಲ್‌ ವರದಿಯನ್ನು ಗುರುವಾರ ಸಂಜೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಬಿಡುಗಡೆ ಮಾಡಿದ್ದು, “ಗ್ರಾಮದಲ್ಲಿ ಸಂಗ್ರಹಿಸಲಾಗಿದ್ದ ನೀರಿನ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅಲ್ಲಿನ ನೀರು ಕುಡಿಯಲು ಯೋಗ್ಯವಾಗಿಲ್ಲ. ಅಲ್ಲದೆ, ನೀರಿನ ಮಾದರಿಯಲ್ಲಿ ಯಾವುದೇ ವಿಷದ ಅಂಶ ಕಂಡುಬಂದಿಲ್ಲ” ಎಂದು ಹೇಳಿದ್ದಾರೆ.

ವರದಿಯು ಕಲುಷಿತ ನೀರಿನ ಪ್ರಕರಣಕ್ಕೂ, ಜಾತಿ ವೈಷಮ್ಯದ ಪ್ರಕರಣಕ್ಕೂ ಸಂಬಂಧವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. ನಗರಸಭೆ ಆಡಳಿತದ ಮತ್ತು ನೀರು ಸರಬರಾಜು ವಿಭಾಗದ ಲೋಪದೋಷಗಳ ಕಾರಣದಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...